ಕಣಿವೆ, ಮೇ ೩೧: ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ರೂಪಿಸುವಲ್ಲಿ ಮುಖ್ಯ ಶಿಕ್ಷಕರ ಪಾತ್ರ ಬಹುದೊಡ್ಡದು ಎಂದು ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್ ತಿಳಿಸಿದರು.

ತೊರೆನೂರು ಸರ್ಕಾರಿ ಪ್ರೌಢ ಶಾಲೆ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶಾಲೆಯ ಮುಖ್ಯ ಶಿಕ್ಷಕ ಬಿ.ಆರ್. ಕುಮಾರ್ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಬಾಂಧವ್ಯ ಬಹಳ ಪವಿತ್ರವಾದದ್ದು ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೇದಮೂರ್ತಿ, ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿ.ಟಿ. ಸೋಮಶೇಖರ್, ತಾಲೂಕು ಅಧ್ಯಕ್ಷ ಧರ್ಮಪ್ಪ, ಪದಾಧಿಕಾರಿಗಳಾದ ದಯಾನಂದ್, ನವೀನ್ ಕುಮಾರ್, ಚಿತ್ರಕಲಾ ಶಿಕ್ಷಕರಾದ ಊ.ರಾ. ನಾಗೇಶ್, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಡಾ. ಸದಾಶಿವಯ್ಯ ಎಸ್. ಪಲ್ಲೇದ್, ಹೆಬ್ಬಾಲೆ ಸಿ.ಆರ್.ಪಿ. ಆದರ್ಶ್, ಬಿ.ಆರ್.ಸಿ. ಲೋಕೇಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಗದೀಶ, ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ ಮಹೇಶ್, ಶಿಕ್ಷಕರಾದ ಮಂಜುನಾಥ್, ಸವಿತಾ, ಶ್ರೀಹರ್ಷ ಇದ್ದರು.