ವೀರಾಜಪೇಟೆ, ಮೇ ೩೧: ಸರ್ಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆ ಗಳಲ್ಲಿರುವ ಸೌಕರ್ಯ ಕಡಿಮೆ ಯಿದ್ದರು. ವಿದ್ಯಾಭ್ಯಾಸದ ಗುಣಮಟ್ಟ ಉನ್ನತಮಟ್ಟದಲ್ಲಿದೆ ಎಂದು ರಾಜ್ಯ ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.

ಮಡಿಕೇರಿ ತಾಲೂಕು ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆಯ್ಯಂಡಾಣೆ ನರಿಯಂದಡ ಕೇಂದ್ರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮಾಜ ಸೇವಕ ಕದ್ದಣಿಯಂಡ ಹರೀಶ್ ಬೋಪಣ್ಣ ಅವರು ನೀಡಿರುವ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ವೀಣಾ ಅಚ್ಚಯ್ಯ, ಇಲ್ಲಿನ ಶಾಲೆಯ ಶಿಕ್ಷಕರು ತಮ್ಮ ಸಂಬಳದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಟ್ಟೆ, ಒದಗಿಸಿರುವುದು ಮತ್ತು ಎಂಟನೇ ತರಗತಿಗಾಗಿ ಮಕ್ಕಳನ್ನು ದಾಖಲಿ ಸುವುದು ಸ್ವಾಗತಾರ್ಹ. ಸಮಾಜ ಸೇವಕ ಹರೀಶ್ ಬೋಪಣ್ಣ ಅವರು ಅವರ ಸೇವೆಯು ಸದಾ ಮುಂದು ವೆರೆಯಬೇಕು ಎಂದು ಹೇಳಿದರು.

ಸಮಾಜ ಸೇವಕರು ಮತ್ತು ಕಾಂಗ್ರೆಸ್ ಪಕ್ಷದ ಪ್ರಮುಖ ಕದ್ದಣಿಯಂಡ ಹರೀಶ್ ಬೋಪಣ್ಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಮಾಡಿ ಮಾತನಾಡಿ, ವಿದ್ಯಾದಾನ ಮಹಾದಾನವಾಗಿದೆ. ಸರ್ಕಾರಿ ಶಾಲೆಗಳಲ್ಲಿ ಕಲಿತವರನ್ನು ಕಡೆಗಣನೆ ಮಾಡುವುದು ಸಹಜವಾಗಿದೆ. ಆದರೆ ಇದೇ ಶಾಲೆಗಳಲ್ಲಿ ಅನೇಕರು ಓದಿ ಸಾಧನೆ ಮಾಡಿದ್ದಾರೆ.

ವಿಜ್ಞಾನಕ್ಕೆ ಸಂಬAಧಿಸಿದAತೆ ಮೂಲಭೂತ ಸೌಕರ್ಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಗಣಕಯಂತ್ರ ನೀಡುವ ಉದ್ದೇಶವಿದ್ದು, ಶಾಲೆಗಳ ಬೇಡಿಕೆಯ ಆಧಾರದ ಮೇಲೆ ಯೋಜ ನೆಯನ್ನು ಅನುಷ್ಠಾನಗೊಳಿಸುತ್ತೇನೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಪ್ರೌಢಶಾಲೆಯ ೮ನೇ, ೯ನೇ ಮತ್ತು ೧೦ನೇ ತರಗತಿಯ ೮೬ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಶಾಲೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ರಾಜೇಶ್ ಅಚ್ಚಯ್ಯ, ಕೋಶಾಧಿಕಾರಿ ಐತಿಚಂಡ ಕಾರ್ಯಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ಕೋಡಿರ ವಿನೋದ್ ನಾಣಯ್ಯ, ಸುಬೀರ್ ಸಿ.ಇ. ಮೊಹಮ್ಮದ್, ಕೆ.ಇ. ಅಯ್ಯಪ್ಪ, ಚೇರಂಡ ಸಂಜು ಹಾಗೂ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮನೋಹರ್ ನಾಯ್ಕ ಉಪಸ್ಥಿತ ರಿದ್ದರು. ಕಾರ್ಯಕ್ರಮದಲ್ಲಿ ಬೊಳ್ಳಜಿರ ಬಿ. ಅಯ್ಯಪ್ಪ, ಶಾಲೆಯ ಶಿಕ್ಷಕರ ವೃಂದ ಮತ್ತು ಶಾಲೆಯ ವಿದ್ಯಾರ್ಥಿಗಳು ಹಾಜರಿದ್ದರು.