ಮಡಿಕೇರಿ, ಮೇ ೩೧: ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಪ್ರತಿ ವರ್ಷದ ಜೂನ್ ೧ ರಿಂದ ಜುಲೈ ೩೦ ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಪೂರ್ಣವಾಗಿ ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ಜಿಲ್ಲೆಯ ಸಾರ್ವಜನಿಕರು ಹಾಗೂ ಮೀನುಗಾರರು ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನುಗಳನ್ನು ಎರಡು ತಿಂಗಳ ಕಾಲ ಹಿಡಿಯದೇ ಅವುಗಳ ಸಂತಾನ ಅಭಿವೃದ್ಧಿಗೆ ಪೂರಕ ವಾತಾವರಣ ಕಲ್ಪಿಸಿಕೊಟ್ಟು ಮೀನಿನ ಸ್ಥಳೀಯ ತಳಿಗಳ ಸಂರಕ್ಷಣೆಯಲ್ಲಿ ಇಲಾಖೆಯೊಂದಿಗೆ ಸಹಕರಿಸುವಂತೆ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.