*ಗೋಣಿಕೊಪ್ಪ, ಮೇ ೩೧: ಅಂಗನವಾಡಿ ಕೇಂದ್ರಗಳಲ್ಲಿ ದಾಖಲಾಗಿರುವ ೬ ತಿಂಗಳಿAದ ೬ ವರ್ಷದ ಮಕ್ಕಳಿಗೆ ಪೌಷ್ಟಿಕತೆ ಇರುವ ಆಹಾರದ ಜೊತೆಗೆ ತೀವ್ರ ಅಪೌಷ್ಟಿಕತೆ ಇರುವ ಮಕ್ಕಳಿಗೆ ಹೆಚ್ಚುವರಿಯಾಗಿ ನೀಡುವ ಆಹಾರವನ್ನು ಶಾಸಕ ಕೆ.ಜಿ. ಬೋಪಯ್ಯ ವಿತರಿಸಿದರು. ವೀರಾಜಪೇಟೆ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಶಾಸಕರ ಕಚೇರಿಯಲ್ಲಿ ಮಕ್ಕಳ ಪೋಷಕರಿಗೆ ಪೌಷ್ಟಿಕ ಆಹಾರವಾದ ಮೊಟ್ಟೆ ಮತ್ತು ಹಾಲಿನ ಹುಡಿಯನ್ನು ವಿತರಿಸಲಾಯಿತು.

ಮಕ್ಕಳು ಆರೋಗ್ಯವಂತರಾಗಿರಲು, ಬುದ್ಧಿವಂತಿಕೆ ಮತ್ತು ಬೆಳವಣಿಗೆ ಹೊಂದಲು ಪೌಷ್ಟಿಕ ಆಹಾರಗಳ ಅಗತ್ಯವಿದೆ. ಇದಕ್ಕಾಗಿ ಸರ್ಕಾರ ಮಕ್ಕಳ ಉತ್ತಮ ಬೆಳವಣಿಗೆಗೆ ಹಲವು ಯೋಜನೆಗಳನ್ನು ತಂದಿದೆ ಎಂದರು.

ರಾಜ್ಯ ಪಶ್ಚಿಮಘಟ್ಟ ಅರಣ್ಯ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ನೆಲ್ಲಿರ ಚಲನ್ ಕುಮಾರ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕೊಣಿಯಂಡ ಅಪ್ಪಣ್ಣ, ತಿತಿಮತಿ ಶಕ್ತಿ ಕೇಂದ್ರದ ಪ್ರಮುಖ್ ಅನೂಪ್ ಕುಮಾರ್, ಹಾತೂರು ಗ್ರಾ.ಪಂ. ಸದಸ್ಯ ಗುಮ್ಮಟಿರ ದರ್ಶನ್ ಹಾಗೂ ಅಂಗನವಾಡಿ ಕಾರ್ಯಕರ್ತೆಯರಾದ ಸುಕನ್ಯ, ಸೌಮಿನಿ, ಮಂಗಳ ಹಾಜರಿದ್ದರು.