*ಗೋಣಿಕೊಪ್ಪ, ಮೇ ೩೦: ಬಲ್ಯಮಂಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ನಿರ್ಮಾಣ ವಾದ ಸ್ವಚ್ಛ ಸಂಕೀರ್ಣ ಘಟಕವನ್ನು ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಿದರು.

ಪಂಚಾಯಿತಿ ವ್ಯಾಪ್ತಿಯ ಮುಗುಟಗೇರಿ ಗ್ರಾಮದಲ್ಲಿ ಐದು ಲಕ್ಷ ಅನುದಾನದಲ್ಲಿ ನಿರ್ಮಾಣವಾದ ಸಂಕೀರ್ಣ ಘಟಕ ಸಂಪೂರ್ಣವಾಗಿ ಸದುಪಯೋಗವಾಗಬೇಕು. ಗ್ರಾಮದಲ್ಲಿ ಒಣ ಕಸ ಮತ್ತು ಹಸಿ ಕಸವನ್ನು ವಿಂಗಡಿಸುವ ಬಗ್ಗೆ ಮಾಹಿತಿ ನೀಡುವ ಮೂಲಕ ಕಸ ವಿಲೇವಾರಿಗೆ ಸೂಕ್ತ ಚೌಕಟ್ಟನ್ನು ಒದಗಿಸಬೇಕು ಮತ್ತು ಹಸಿ ಕಸದಿಂದ ಗೊಬ್ಬರ ತಯಾರಿಸಿ ಪಂಚಾಯಿತಿಯ ಆರ್ಥಿಕ ಕ್ರೋಢಿಕರಣಕ್ಕೆ ಪ್ರಯತ್ನಿಸಬೇಕು ಎಂದು ಶಾಸಕರು ಸಲಹೆ ನೀಡಿದರು.

ರಾಜ್ಯ ಅರಣ್ಯ ಪಶ್ಚಿಮ ಘಟ್ಟ ಕಾರ್ಯಪಡೆ ಸಮಿತಿ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ವೀರಾಜಪೇಟೆ, ಪೊನ್ನಂಪೇಟೆ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಕೊಣಿಯಂಡ ಅಪ್ಪಣ್ಣ, ಸ್ವಚ್ಛ ಭಾರತ್ ಅಭಿಯಾನ ನೋಡೆಲ್ ಅಧಿಕಾರಿ ಅಜ್ಜಿಕುಟ್ಟಿರ ಸೂರಜ್, ಬಲ್ಯಮಂಡೂರು ಗ್ರಾ.ಪಂ. ಅಧ್ಯಕ್ಷೆ ಹೆಚ್.ಎಲ್ ಶೈಲಾ, ಉಪಾಧ್ಯಕ್ಷೆ ಪಿ.ಎಸ್ ಸುಮಿತ್ರ‍್ರ, ಸದಸ್ಯರುಗಳಾದ ಕೊಟ್ಟಂಗಡ ಜೆ. ಅಯ್ಯಪ್ಪ, ಡಿ.ಪಿ ಜಯಂತಿ, ಆಲೇಮಾಡ ನವೀನ, ಭರತ್ ಪಿ.ವಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜೇಶ್ ಗ್ರಂಥಪಾಲಕಿ ಲತಾ, ಶಾಸಕರ ಆಪ್ತ ಕಾರ್ಯದರ್ಶಿ ಮಲ್ಲಂಡ ಮಧುದೇವಯ್ಯ ಹಾಜರಿದ್ದರು.