ಮಡಿಕೇರಿ, ಮೇ ೩೦: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಸೈನಿಕ ಶಾಲೆ ಬಳಿಯಲ್ಲಿ ಹೆಲಿಪೋರ್ಟ್ ನಿರ್ಮಾಣ ಕುರಿತು ಸಭೆ ನಡೆಯಿತು.
ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಎಂ.ಆರ್.ರವಿ ಅವರು ಹಾರಂಗಿ ನದಿ ನೀರು ಪಕ್ಕದಲ್ಲಿ ಹರಿಯುವುದರಿಂದ ತಡೆಗೋಡೆ ನಿರ್ಮಾಣ ಮಾಡಬೇಕಾಗುತ್ತದೆ. ಜೊತೆಗೆ ಕಳೆದ ೫೦ ವರ್ಷದಲ್ಲಿ ಯಾವ ರೀತಿ ಪ್ರವಾಹ ಇತ್ತು ಎಂಬ ಬಗ್ಗೆ ಮಾಹಿತಿ ಒದಗಿಸುವಂತೆ ಹಾರಂಗಿ ಕಾರ್ಯಪಾಲಕ ಎಂಜಿನಿಯರ್ ಹಾಗೂ ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಿದರು.
ಕೊಡಗು ಜಿಲ್ಲೆಯಲ್ಲಿ ಸಣ್ಣ ವಿಮಾನ ನಿಲ್ದಾಣ ಸ್ಥಾಪಿಸಬೇಕು ಎಂದು ಹಲವು ವರ್ಷಗಳಿಂದ ಪ್ರಯತ್ನಗಳು ನಡೆದಿವೆ. ೨೦೧೮ ರಲ್ಲಿ ಪ್ರವಾಹ ಬಂದಿತ್ತು. ಎಲ್ಲಾ ಗಮನದಲ್ಲಿಟ್ಟುಕೊಂಡು ಹೆಲಿಪೋರ್ಟ್ ನಿರ್ಮಾಣ ಮಾಡುವಲ್ಲಿ ಕ್ರಮವಹಿಸಬೇಕಿದೆ ಎಂದರು.
ಹೆಲಿಪೋರ್ಟ್ ನಿರ್ಮಾಣ ಸಂಬAಧ ಈ ಹಿಂದೆ ಕೆ.ನಿಡುಗಣೆ ಬಳಿ ೪ ಎಕರೆಗಿಂತ ಹೆಚ್ಚು ಜಾಗ ಗುರುತಿಸಲಾಗಿತ್ತು, ಸದ್ಯ ಆ ಸ್ಥಳದಲ್ಲಿ ಮನೆ ನಿರ್ಮಾಣ ಆಗಿರುವುರಿಂದ ಕೊಡಗು ಜಿಲ್ಲಾ ಕೇಂದ್ರದಲ್ಲಿ ಜಾಗ ಇಲ್ಲದಿರುವುದರಿಂದ ಕೂಡಿಗೆ ಸೈನಿಕ ಶಾಲೆ ಬಳಿ ಗುರುತಿಸಲಾಗಿರುವ ಜಾಗದಲ್ಲಿ ಹೆಲಿಪೋರ್ಟ್ ನಿರ್ಮಾಣ ಮಾಡಲು ಮುಂದಾಗಲಾಗಿದೆ ಎಂದು ಡಾ.ಎಂ.ಆರ್.ರವಿ ಹೇಳಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮಾತನಾಡಿ, ಕೃಷಿ ಇಲಾಖೆ ಭೂಮಿಯನ್ನು ಸರ್ಕಾರದ ಮಟ್ಟದಲ್ಲಿ ಅನುಮತಿ ಪಡೆದು ನಿಗಮಕ್ಕೆ ಹಸ್ತಾಂತರಿಸಲಾಗುವುದು. ಕೊಡಗು ಜಿಲ್ಲೆಯಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.
ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಆರೋಗ್ಯ ಮೂಲಸೌಕರ್ಯ ಅಭಿಯಾನದಲ್ಲಿ ಮಡಿಕೇರಿ ನಗರದಲ್ಲಿ ‘ಕ್ರಿಟಿಕಲ್ ಕೇರ್ ಹಾಸ್ಪಿಟಲ್’ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾತಿ ದೊರೆತಿದೆ ಎಂದು ಜಿಲ್ಲಾಧಿಕಾರಿ ಇದೇ ಸಂದರ್ಭದಲ್ಲಿ ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ ಕೃಷಿ ಇಲಾಖೆ ವ್ಯಾಪ್ತಿಯಲ್ಲಿ ೩೨ ಎಕರೆ ಸರ್ಕಾರಿ ಪೈಸಾರಿ ಹೆಸರಿನಲ್ಲಿ ೧೬ ಎಕರೆ ಭೂಮಿ ಇದೆ ಎಂದು ಮಾಹಿತಿ ನೀಡಿದರು.
ನಿಗಮದ ತಾಂತ್ರಿಕ ಸಲಹೆಗಾರರಾದ ಬ್ರಿಗೇಡಿಯರ್ ಪೋರಿಮಠ, ನಿಗಮದ ಕಾರ್ಯನಿರ್ವಾಹಕ ನಿರ್ದೇಶಕರಾದ ಪ್ರಕಾಶ್, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಶಂಕರನಾರಾಯಣ, ಭೂ ದಾಖಲೆಗಳ ಉಪ ನಿರ್ದೇಶಕರಾದ ಪಿ.ಶ್ರೀನಿವಾಸ್, ಕೈಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ರಘು, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಖ್, ಕೆಪಿಟಿಸಿಎಲ್ ಇಇ ಮಾದೇಶ, ಹಾರಂಗಿ ಜಲಾಶಯ ಕಾರ್ಯ ನಿರ್ವಾಹಕ ಎಂಜಿನಿಯರ್ ಪುಟ್ಟಸ್ವಾಮಿ ಇತರರು ಇದ್ದರು.