ಮಡಿಕೇರಿ, ಮೇ ೩೧: ಪೆಟ್ರೋಲ್ ಮತ್ತು ಡಿಸೇಲ್ ಮಾರಾಟದ ಮೇಲೆ ಕಮೀಷನ್ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಖಿಲ ಕರ್ನಾಟಕ ಪೆಟ್ರೋಲಿಯಂ ವ್ಯಾಪಾರಿಗಳ ಒಕ್ಕೂಟ ತೈಲ ಖರೀದಿ ಸ್ಥಗಿತಗೊಳಿಸಲು ನಿರ್ಧರಿಸಿದ್ದ ಹಿನ್ನೆಲೆ ಜಿಲ್ಲೆಯಲ್ಲಿ ಯಾವುದೇ ರೀತಿಯ ವ್ಯತಿರಿಕ್ತ ಪರಿಣಾಮ ಉಂಟಾಗಲಿಲ್ಲ. ಜಿಲ್ಲೆಯ ಎಲ್ಲಾ ಪೆಟ್ರೋಲ್ ಬಂಕ್ಗಳು ಎಂದಿನAತೆ ಕಾರ್ಯನಿರ್ವಹಿಸಿದವು.
ತೈಲ ಖರೀದಿ ಸ್ಥಗಿತದಿಂದ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಸಮಸ್ಯೆ ಎದುರಿಸಬಹುದು ಎಂದು ವಾಹನ ಸವಾರರು ಲೆಕ್ಕಾಚಾರ ಹಾಕಿ ಒಂದು ದಿನ ಮುನ್ನವೇ ಪೆಟ್ರೋಲ್ ತುಂಬಿಸಿಟ್ಟುಕೊAಡಿದ್ದರು. ಜಿಲ್ಲಾ ಕೇಂದ್ರ ಮಡಿಕೇರಿ, ತಾಲೂಕು ಕೇಂದ್ರಗಳಾದ ಸೋಮವಾರಪೇಟೆ, ವೀರಾಜಪೇಟೆ, ಕುಶಾಲನಗರ, ಪೊನ್ನಂಪೇಟೆಯಲ್ಲಿ ಯಾವುದೇ ಸಮಸ್ಯೆ ಉಂಟಾಗಲಿಲ್ಲ.
ಗ್ರಾಮೀಣ ಭಾಗಗಳಲ್ಲಿಯೂ ಪೆಟ್ರೋಲ್ ಬಂಕ್ಗಳು ಎಂದಿನAತೆ ತೆರೆದಿದ್ದವು. ಪ್ರಮುಖ ಪಟ್ಟಣಗಳಾದ ಗೋಣಿಕೊಪ್ಪ, ಪೊನ್ನಂಪೇಟೆ, ನೆಲ್ಯಹುದಿಕೇರಿ, ಸಿದ್ದಾಪುರ, ಚೆಟ್ಟಳ್ಳಿ, ನಾಪೋಕ್ಲು, ಶನಿವಾರಸಂತೆ, ಕೊಡ್ಲಿಪೇಟೆ, ಕುಟ್ಟ ಸೇರಿದಂತೆ ಇನ್ನಿತರ ಭಾಗಗಳಲ್ಲಿ ಪೆಟ್ರೋಲ್ ಬಂಕ್ಗಳು ಅಬಾಧಿತವಾಗಿ ಮುಂದುವರಿದವು.