ಮಡಿಕೇರಿ, ಮೇ ೩೧: ಆಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಭಾರತ ಸರ್ಕಾರದ ವಿವಿಧ ಯೋಜನೆಗಳ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಿಲ್ಲಾ, ರಾಜ್ಯ ಮತ್ತು ರಾಷ್ಟç ಮಟ್ಟದಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾ ನಗರದಿಂದ ಫಲಾನುಭವಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು.
ನಗರದ ಜಿ.ಪಂ.ಸಭಾAಗಣದಲ್ಲಿ ವರ್ಚುವಲ್ ಮೂಲಕ ಫಲಾನುಭವಿ ಗಳೊಂದಿಗೆ ಏರ್ಪಡಿಸಲಾಗಿದ್ದ ನೇರ ಸಂವಾದ ಕಾರ್ಯಕ್ರಮಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಫಲಾನುಭವಿಗಳ ಜೊತೆ ವೀಡಿಯೋ ಸಂವಾದ ನಡೆಸಿದ ನಂತರ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಡವರ ಕಲ್ಯಾಣಕ್ಕಾಗಿಯೇ ಹಲವು ಯೋಜನೆ ಗಳನ್ನು ಭಾರತ ಸರ್ಕಾರದಿಂದ ಜಾರಿಗೊಳಿಸಲಾಗಿದೆ.
ವಿವಿಧ ಯೋಜನೆಗಳಡಿ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುವ ಮೂಲಕ ಸರ್ಕಾರದ ಅನುದಾನದ ಸೋರಿಕೆ ತಡೆಯಲಾಗಿದೆ. ೮ ವರ್ಷಗಳ ಆಡಳಿತದಲ್ಲಿ ಪ್ರಧಾನ ಸೇವಕನಾಗಿ ಕಾರ್ಯ ನಿರ್ವಹಿಸಿದ್ದೇನೆ ಎಂದು ನುಡಿದರು.
ನಾವೆಲ್ಲರೂ ಜೊತೆಗೂಡಿ ಭಾರತವನ್ನು ಇಡೀ ವಿಶ್ವದಲ್ಲಿ ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಪ್ರಯತ್ನಿಸಬೇಕು. ಇಂದು ದೇಶದ ೧೦ ಕೋಟಿಗೂ ಹೆಚ್ಚಿನ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ಸಹಾಯಧನವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದೇವೆ. ಇಡೀ ರಾಷ್ಟçದ ಜನ ಗರೀಬ್ ಕಲ್ಯಾಣ್ ಸಮ್ಮೇಳನದಲ್ಲಿ ಭಾಗವಹಿಸಿ ಇದಕ್ಕೆ ಸಾಕ್ಷಿಯಾಗಿದ್ದಾರೆ ಎಂದರು.
ಇದಕ್ಕೂ ಮೊದಲು ದೇಶದ ವಿವಿಧ ರಾಜ್ಯಗಳಿಂದ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಅವರು ವರ್ಚುವಲ್ ಮೂಲಕ ಸಂವಾದ ನಡೆಸಿ, ಅಭಿಪ್ರಾಯ ಆಲಿಸಿದರು. ಕರ್ನಾಟಕದ ಕಲಬುರ್ಗಿ ಜಿಲ್ಲೆಯ ಸಂತೋಷಿ ಎಂಬ ಮಹಿಳಾ ಫಲಾನುಭವಿಯೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿಗಳು ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯಿಂದಾದ ಅನುಕೂಲದ ಬಗ್ಗೆ ವಿವರಣೆ ಪಡೆದುಕೊಂಡರು. ಬಳಿಕ ಮಹಿಳೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ‘ಯೋಜನೆಯ ಬಗ್ಗೆ ಮಾತನಾಡಿದ ರೀತಿ ನೋಡಿ ನನಗೆ ಅತೀವ ಸಂತೋಷವಾಯಿತು ಎಂದರು.
ಈ ವೀಡಿಯೋ ಸಂವಾದದಲ್ಲಿ ದೇಶದ ವಿವಿಧ ರಾಜ್ಯಗಳ ಫಲಾನುಭವಿಗಳಾದ ಲಡಖ್-ತಶಿ ಲೆಹ, ಬಿಹಾರ್ ಲಲಿತಾ ದೇವಿ, ವೆಸ್ಟ್ ತ್ರಿಪುರ- ಪಂಕಜ ಸಹನಿ, ಕರ್ನಾಟಕದ ಕಲಬುರಗಿ-ಸಂತೋಷಿ, ಇವರುಗ ಳೊಂದಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಉಜ್ವಲ ಯೋಜನೆ, ಪೋಷಣ್ ಅಭಿಯಾನ್, ಮಾತೃ ವಂದನಾ ಯೋಜನೆ, ಸ್ವಚ್ಛ ಭಾರತ್ ಮಿಷನ್, ಜಲ ಜೀವನ ಮಿಷನ್, ವನ್ ನೇಷನ್ ವನ್ ರೇಷನ್ ಯೋಜನೆ, ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ, ಆಯುಷ್ಮಾನ್ ಭಾರತ್ ಕಾರ್ಡ್, ಪ್ರಧಾನಮಂತ್ರಿ ಮುದ್ರಾ ಯೋಜನೆ ಹೀಗೆ ಹಲವಾರು ಯೋಜನೆಗಳ ಬಗ್ಗೆ ಸಂವಾದ ನಡೆಸಿದರು.
ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ರಾಜ್ಯ ಅಧ್ಯಕ್ಷ ಕೆ.ಜಿ.ಬೋಪಯ್ಯ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಕರ್ನಾಟಕ ರಾಜ್ಯ ಪಶ್ಚಿಮಘಟ್ಟಗಳ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷ ರವಿಕುಶಾಲಪ್ಪ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಹೊಳ್ಳ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಜಿ.ಪಂ. ಉಪಕಾರ್ಯದರ್ಶಿ ಪಿ.ಲಕ್ಷಿö್ಮ, ಯೋಜನಾ ನಿರ್ದೇಶಕ ಶ್ರೀಕಂಠಮೂರ್ತಿ ವಿವಿಧ ಇಲಾಖೆ ಅಧಿಕಾರಿಗಳು ಇತರರು ಇದ್ದರು.