ಮಡಿಕೇರಿ, ಜೂ. ೧: ಕೊಡಗು ಜಿಲ್ಲಾ ಹಾಪ್‌ಕಾಮ್ಸ್ ವತಿಯಿಂದ ತೋಟಗಾರಿಕಾ ಇಲಾಖೆ ಸಹಯೋಗ ದೊಂದಿಗೆ ನಗರದ ಹಾಪ್‌ಕಾಮ್ಸ್ ಆವರಣದಲ್ಲಿ ತಾ.೩ರಿಂದ ೬ರವರೆಗೆ ಮಾವು ಮೇಳವನ್ನು ಏರ್ಪಡಿಸಲಾಗಿದೆ ಎಂದು ಹಾಪ್‌ಕಾಮ್ಸ್ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕೊಡಗು ಜಿಲ್ಲೆಯ ಗ್ರಾಹಕರಿಗೆ ರಾಜ್ಯದ ವಿವಿಧೆಡೆ ಬೆಳೆಯಲಾದ ೧೫ ವಿವಿಧ ತಳಿಯ ಮಾವುಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಮಾವು ಮೇಳದ ಮೂಲಕ ಮಾವುಗಳ ಪ್ರದರ್ಶನ ಮತ್ತು ಮಾರಾಟ ಆಯೋಜಿಸಲಾಗಿದೆ ಎಂದು ಅವರು ಹೇಳಿದರು.

ಹಾಪ್‌ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕ ಸಿ.ಎಂ. ಪ್ರಮೋದ್ ಮಾತನಾಡಿ, ಬೆಳಿಗ್ಗೆ ೮ರಿಂದ ರಾತ್ರಿ ೯ ಗಂಟೆಯವರೆಗೆ ಮೇಳ ನಡೆಯಲಿದ್ದು, ಸ್ಥಳೀಯ ಬೆಳೆಗಾರರೂ ಇದರಲ್ಲಿ ಪಾಲ್ಗೊಳ್ಳಬಹುದಾಗಿದೆ. ತೋಟಗಾರಿಕಾ ಇಲಾಖೆಯಿಂದ ಉಚಿತ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಹಾಪ್‌ಕಾಮ್ಸ್ ಉಪಾಧ್ಯಕ್ಷ ಮಲ್ಲಂಡ ಮಧು ದೇವಯ್ಯ, ನಿರ್ದೇಶಕರಾದ ಕೆ.ಎಂ. ಮನೋಹರ್, ಕಾಂಗೀರ ಸತೀಶ್ ಉಪಸ್ಥಿತರಿದ್ದರು.