ಮಡಿಕೇರಿ, ಜೂ. ೧: ಆಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಸರಕಾರದ ವಿವಿಧ ಯೋಜನೆಗಳ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಯ್ಕೆಗೊಂಡ ಫಲಾನುಭವಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು.

ಪ್ರಧಾನಮಂತ್ರಿ ಅವರ ಸಂವಾದಕ್ಕೂ ಮೊದಲು ಜಿಲ್ಲೆಯ ಫಲಾನುಭವಿಗಳ ಜೊತೆ ಕೇಂದ್ರ ಸರ್ಕಾರದ ಕಾರ್ಯಕ್ರಮಗಳ ಪ್ರಯೋಜನ ಬಗ್ಗೆ ಶಾಸಕರಾದ ಎಂ.ಪಿ.ಅಪ್ಪಚ್ಚುರAಜನ್ ಮತ್ತು ಕೆ.ಜಿ.ಬೋಪಯ್ಯ ಅವರು ಮಾಹಿತಿ ಪಡೆದರು.

ಕೇಂದ್ರ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಹಂಚಿಕೊAಡ ಫಲಾನುಭವಿಗಳಲ್ಲಿ ಒಬ್ಬರಾದ ಸಚಿನ್ ಅವರು ಮನೆ ಮನೆಗೆ ನಲ್ಲಿ ನೀರು ಸಂಪರ್ಕ ಕಲ್ಪಿಸಿರುವುದು ತುಂಬಾ ಉಪಕಾರವಾಗಿದೆ ಎಂದು ಹೇಳಿದರು.

ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ೧೦ ಸಾವಿರದವರೆಗೆ ಸಾಲ ಸೌಲಭ್ಯ ಒದಗಿಸುತ್ತಿದ್ದು, ಇದರಿಂದ ಬೀದಿ ಬದಿ ವ್ಯಾಪಾರಿಗಳಿಗೆ ತುಂಬಾ ಅನುಕೂಲವಾಗಿದೆ ಎಂದು ಫಲಾನುಭವಿಯೊಬ್ಬರು ತಿಳಿಸಿದರು.

ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ನಿಯಮಿತವಾಗಿ ಸಾಲ ಪಾವತಿಸಿದರೆ ೨೦ ಸಾವಿರ ರೂ.ವರೆಗೆ ಬ್ಯಾಂಕ್ ಮೂಲಕ ಸಾಲ ಪಡೆಯಬಹುದಾಗಿದೆ ಎಂದು ಹೇಳಿದರು.

ಈ ಸಂದರ್ಭ ಮಾತನಾಡಿದ ಶಾಸಕ ಎಂ.ಪಿ.ಅಪ್ಪಚ್ಚುರAಜನ್, ಮುಂದಿನ ದಿನಗಳಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಸಿರಿಧಾನ್ಯ ನೀಡಲು ಸರ್ಕಾರ ಮುಂದಾಗಲಿದೆ ಎಂದು ತಿಳಿಸಿದರು.

ಮತ್ತೊಬ್ಬ ಫಲಾನುಭವಿ ಮಾತನಾಡಿ ಕೋವಿಡ್ ಸಂದರ್ಭದಲ್ಲಿ ಗರೀಬ್ ಕಲ್ಯಾಣ ಅನ್ನ ಯೋಜನೆ ಅತೀ ಕಡು ಬಡವರಿಗೆ ತುಂಬಾ ಉಪಯುಕ್ತವಾಗಿತ್ತು ಎಂದು ತಿಳಿಸಿದರು.

ಕಡಗದಾಳು ಗ್ರಾ.ಪಂ.ಯ ಪ್ರತಿನಿಧಿಯೊಬ್ಬರು ಮಾತನಾಡಿ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಪಡೆದಿರುವುದರಿಂದ ಹೆಚ್ಚಿನ ಆರೋಗ್ಯ ಸೌಲಭ್ಯಕ್ಕೆ ಉಪಯುಕ್ತವಾಗಿದೆ. ಕೇಂದ್ರ ಸರ್ಕಾರದ ಕಾರ್ಯಕ್ರಮ ತುಂಬಾ ಉಪಯುಕ್ತವಾಗಿದ್ದು, ಬಡವರಿಗೆ ಉಚಿತ ಆರೋಗ್ಯ ಸೇವೆ ಪಡೆಯಲು ಅನುಕೂಲವಾಗಿದೆ ಎಂದರು.

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಯಕ್ರಮವು ಬಡವರಿಗೆ ತುಂಬಾ ಅನುಕೂಲವಾಗಿದ್ದು, ಕಡು ಬಡವರು ಸಹ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಪಡೆಯಲು ಸಾಧ್ಯವಾಗಿದೆ ಎಂದರು.

ಈ ಸಂದರ್ಭ ಮಾತನಾಡಿದ ಶಾಸಕ ಎಂ.ಪಿ.ಅಪ್ಪಚ್ಚುರAಜನ್ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮದ ಬಗ್ಗೆ ಗ್ರಾ.ಪಂ.ಮಟ್ಟದಲ್ಲಿ ಮಾಹಿತಿ ನೀಡುವಂತಾಗಬೇಕು. ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಲವು ಯೋಜನೆಗಳ ಮಾಹಿತಿ ಒದಗಿಸಿ ಜಾಗೃತಿ ಮೂಡಿಸುವಂತಾಗಬೇಕು ಎಂದರು.

ಶಶಾಂಕ್ ಅವರು ಮಾತನಾಡಿ ಸರ್ಕಾರದ ಕಾರ್ಯಕ್ರಮಗಳು ಸರಿಯಾಗಿ ಬಳಸಿಕೊಂಡಲ್ಲಿ ನಿರುದ್ಯೋಗ ಸಮಸ್ಯೆಯೇ ಉಂಟಾಗುವುದಿಲ್ಲ. ಬ್ಯಾಂಕಿನ ಮೂಲಕ ಸಾಲ ಪಡೆದು ಸ್ವ ಉದ್ಯೋಗ ಕೈಗೊಂಡಲ್ಲಿ ನಿರುದ್ಯೋಗವನ್ನು ನಿವಾರಿಸಬಹುದಾಗಿದೆ. ಆ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ಸರಿಯಾಗಿ ಬಳಸಿಕೊಳ್ಳುವಂತಾಗಬೇಕು ಎಂದರು.

ಈ ಸಂದರ್ಭ ಮಾತನಾಡಿದ ಶಾಸಕರು ಹಾಗೂ ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಕೆ.ಜಿ.ಬೋಪಯ್ಯ ಅವರು ಬ್ಯಾಂಕ್‌ನಲ್ಲಿ ಸಾಲ ಪಡೆಯಲು ಜಾಮೀನು ಕೇಳುತ್ತಾರೆಯೇ ಎಂದು ಪ್ರಶ್ನಿಸಿದರು. ಇದಕ್ಕೆ ಫಲಾನುಭವಿ ಒಬ್ಬರು ಇಲ್ಲ ಎಂದು ಮಾಹಿತಿ ನೀಡಿದರು.

ಮುದ್ರಾ ಯೋಜನೆಯಿಂದ ಬಡವರಿಗೆ ತುಂಬಾ ಅನುಕೂಲವಾಗಿದೆ. ಬ್ಯಾಂಕ್ ಖಾತೆಯಲ್ಲಿ ಹಣ ಉಳಿಸಿಕೊಂಡು ಸಕಾಲದಲ್ಲಿ ಸಾಲ ಪಾವತಿಸಿದ್ದಲ್ಲಿ ಹೆಚ್ಚಿನ ಸಾಲ ಸೌಲಭ್ಯ ಪಡೆಯಲು ಸಹಕಾರಿಯಾಗಲಿದೆ ಎಂದರು.

ಕೋವಿಡ್ ಸಂಕಷ್ಟ ಸಮಯದಲ್ಲಿ ದೇಶವನ್ನು ಮುನ್ನಡೆಸುವಲ್ಲಿ ಪ್ರಧಾನಮಂತ್ರಿ ಅವರು ಶ್ರಮಿಸಿದ್ದಾರೆ ಎಂದು ಫಲಾನುಭವಿ ಒಬ್ಬರು ಮಾಹಿತಿ ನೀಡಿದರು.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಡಿ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಪಾವತಿಯಾಗುತ್ತಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಅಡುಗೆ ಅನಿಲ ದೊರೆಯುತ್ತಿದೆ. ಪೋಷಣ ಅಭಿಯಾನ ಮತ್ತು ಮಾತೃ ವಂದನಾ ಯೋಜನೆಯಡಿ ಹಲವು ಯೋಜನೆಗಳು ತಲುಪುತ್ತಿವೆ ಎಂದು ಫಲಾನುಭವಿಗಳು ಹೇಳಿದರು.

ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷ ರವಿಕುಶಾಲಪ್ಪ, ನಗರಸಭೆ ಅಧ್ಯಕೆÀ್ಷ ಅನಿತಾ ಪೂವಯ್ಯ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಹೊಳ್ಳ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಜಿ.ಪಂ.ಉಪ ಕಾರ್ಯದರ್ಶಿ ಪಿ.ಲಕ್ಷಿö್ಮ, ಯೋಜನಾ ನಿರ್ದೇಶಕರಾದ ಶ್ರೀಕಂಠಮೂರ್ತಿ ನಾನಾ ಇಲಾಖೆ ಅಧಿಕಾರಿಗಳು ಇತರರು ಇದ್ದರು.