ಚೆಯ್ಯಂಡಾಣೆ, ಜೂ. ೧: ನರಿಯಂದಡ ಹಾಗೂ ಕುಂಜಿಲ ಕಕ್ಕಬೆ ಗ್ರಾ.ಪಂ. ವ್ಯಾಪ್ತಿಗೆ ಒಳಪಟ್ಟ ಗ್ರಾಮಗಳಲ್ಲಿ ಕಾಡಾನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ತಾ. ೨ ರಿಂದ ಮುಂದುವರಿಯಲಿದೆ. ಕಾಡಾನೆಯೊಂದು ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದರಿಂದ ಬೆಟ್ಟಗುಡ್ಡಗಳಲ್ಲಿ ಕಾರ್ಯಾಚರಣೆ ನಡೆಸಿ ಸಾಕಾನೆಗಳು ತೀವ್ರ ಬಳಲಿದ್ದ ಕಾರಣದಿಂದ ತಾ. ೧ ರಂದು ಕಾರ್ಯಾಚರಣೆ ಇರಲಿಲ್ಲ. ತಾ. ೨ ರಂದು ಕಾರ್ಯಾಚರಣೆ ಮುಂದುವರಿಯಲಿದ್ದು ಗ್ರಾಮಸ್ಥರು, ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ತೋಟದ ಮಾಲೀಕರು ಎಚ್ಚರಿಕೆ ವಹಿಸಬೇಕಾಗಿ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.