ಮಡಿಕೇರಿ, ಜೂ. ೧: ಮೈಸೂರು ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ವತಿಯಿಂದ ೨೦೨೨-೨೩ನೇ ಸಾಲಿಗೆ ಆರ್ಕಿಟೆಕ್ಚರ್ ಅಸಿಸ್ಟೆಂಟ್ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿAಗ್ ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿAಗ್ ಮತ್ತು ಕಂಪ್ಯೂಟರ್ ಅಪ್ಲಿಕೇಷನ್ಸ್ ಮೂರು ವರ್ಷಗಳ ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ (ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಟ ಶೇ. ೩೫ ಅಂಕಗಳೊAದಿಗೆ ತೇರ್ಗಡೆ ಹಾಗೂ ಮೂಳೆ ಮತ್ತು ಕೀಲು ಅಂಗವಿಕಲತೆ ಶೇ. ೪೦ ಮತ್ತು ಮೇಲ್ಪಟ್ಟು, ಕಿವುಡು ಮತ್ತು ಮೂಗು ಅಂಗವಿಕಲತೆ ಶೇ. ೬೦ ಡಿಬಿ ಮತ್ತು ಮೇಲ್ಪಟ್ಟು ಮತ್ತು ಭಾಗಶಃ ಮತ್ತು ಪೂರ್ಣ ಅಂಧತ್ವ ಅಂಗವೈಕಲ್ಯತೆಯ ಲಕ್ಷಣಗಳನ್ನು ಹೊಂದಿರಬೇಕು.
ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟçಮಟ್ಟದ ವಿದ್ಯಾರ್ಥಿ ವೇತನದ ಆರ್ಥಿಕ ಸಹಾಯ ದೊರೆಯುತ್ತದೆ. ಪಾಲಿಟೆಕ್ನಿಕ್ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಿದ್ಯಾರ್ಥಿ ನಿಲಯದ ಸೌಲಭ್ಯ ಕಲ್ಪಿಸಲಾಗಿದೆ.
ಪ್ರವೇಶಕ್ಕೆ ಅರ್ಜಿಯನ್ನು ಮೈಸೂರು ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಇಲ್ಲಿಂದ ಪಡೆಯಬಹುದು (ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. ೧೦೦ ಹಾಗೂ ಎಸ್ಸಿ/ ಎಸ್ಟಿ/ಸಿ-೧ ವರ್ಗದವರಿಗೆ ರೂ. ೫೦). ನಗದು ಅಥವಾ ಡಿಡಿ ಮೂಲಕ ಮೈಸೂರಿನಲ್ಲಿ ಸಂದಾಯವಾಗುವAತೆ ಕಳುಹಿಸಿ ಪಡೆಯಬಹುದು ಅಥವಾ ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು. ಅರ್ಜಿ ಸಲ್ಲಿಸಲು ತಾ. ೨೦ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ವೆಬ್ಸೈಟ್ ತಿತಿತಿ.ರಿssಠಿಜಚಿ.oಡಿg ದೂ. ೯೬೮೬೬೭೭೨೩೬ನ್ನು ಸಂಪರ್ಕಿಸಬಹುದು.
ಪ್ರಾAಶುಪಾಲರು, ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್, ಜೆಎಸ್ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯ, ಮೈಸೂರು-೫೭೦೦೦೬, ಕರ್ನಾಟಕ ದೂ. ೦೮೨೧-೨೫೪೮೩೧೫, ೨೫೪೮೩೧೬ ಇ-ಮೇಲ್ ರಿssಠಿಜಚಿ@gmಚಿiಟ.ಛಿom, ವೆಬ್ಸೈಟ್ ತಿತಿತಿ.ರಿssಠಿಜಚಿ.oಡಿgನ್ನು ಸಂಪರ್ಕಿಸಬಹುದು.