ಮಡಿಕೇರಿ, ಜೂ. ೧: ಕೊಡಗು ಜಿಲ್ಲೆಯಲ್ಲಿ ೨೦೧೮ ರ ಆಗಸ್ಟ್ನಲ್ಲಿ ಸುರಿದ ಭಾರಿ ಮಳೆಯಿಂದ ನೆಲೆ ಕಳೆದುಕೊಂಡು ಮನೆ ಹಸ್ತಾಂತರಕ್ಕೆ ಬಾಕಿ ಇದ್ದ ೭೫ ಕುಟುಂಬಗಳಿಗೆ ಪ್ರಾದೇಶಿಕ ಸಾರಿಗೆ ಕಚೇರಿ ಬಳಿ ನಿರ್ಮಿಸಲಾಗಿರುವ ಮನೆಗಳನ್ನು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರ ಅಧ್ಯಕ್ಷತೆಯಲ್ಲಿ ಚೀಟಿ/ಲಾಟರಿ ತೆಗೆಯುವ ಮೂಲಕ ಬುಧವಾರ ಮನೆ ಹಂಚಿಕೆ ಮಾಡಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ರಾಜೀವ್ ಗಾಂಧಿ ವಸತಿ ನಿಗಮದ ಎಂಜಿನಿಯರ್ ಶ್ರೀನಿವಾಸ್ ಹಾಗೂ ಫಲಾನುಭವಿಗಳ ಸಮ್ಮುಖದಲ್ಲಿ ಚೀಟಿ ತೆಗೆಯುವ ಮೂಲಕ ಮನೆ ಹಂಚಿಕೆ ಮಾಡಲಾಯಿತು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ೨೦೧೮ ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರಾಗಿದ್ದ ಕುಟುಂಬಗಳಿಗೆ ಮೊದಲ ಹಂತದಲ್ಲಿ ಕರ್ಣಂಗೇರಿ ಯಲ್ಲಿ ೩೫ ಮನೆಗಳು, ಮಾದಾಪುರ ಬಳಿಯ ಜಂಬೂರಿನಲ್ಲಿ ೩೮೩, ಮದೆನಾಡು ಬಳಿ ೮೦ ಮನೆಗಳು, ಹಾಗೆಯೇ ಹಾಕತ್ತೂರು ಬಳಿಯ ಬಿಳಿಗೇರಿಯಲ್ಲಿ ೨೨ ಮತ್ತು ಗಾಳಿಬೀಡು ಬಳಿ ೧೪೦ ಮನೆಗಳು ಸೇರಿದಂತೆ ಒಟ್ಟು ಮೂರು ಹಂತದಲ್ಲಿ ೬೬೦ ಮನೆಗಳನ್ನು ಸಂತ್ರಸ್ತರಿಗೆ ಹಸ್ತಾಂತರಿಸಲಾಗಿದೆ. ಉಳಿದಂತೆ ಕೆ. ನಿಡುಗಣೆ ಗ್ರಾ.ಪಂ. ವ್ಯಾಪ್ತಿಯ ಆರ್ಟಿಓ ಕಚೇರಿ ಬಳಿ ೭೫ ಮನೆಗಳನ್ನು ನಿರ್ಮಿಸಲಾಗಿದ್ದು, ಆ ನಿಟ್ಟಿನಲ್ಲಿ ಬುಧವಾರ ಮನೆ ಹಂಚಿಕೆ ಪ್ರಕ್ರಿಯೆ ಮಾಡಲಾಗಿದೆ. ಉಳಿದಂತೆ ಈ ತಿಂಗಳ ಅಂತ್ಯದೊಳಗೆ ಸಂತ್ರಸ್ತರಿಗೆ ಮನೆ ಹಸ್ತಾಂತರ ಮಾಡಲಾಗುವುದು ಎಂದು ತಿಳಿಸಿದರು.
ಮನೆ ಹಂಚಿಕೆಯ ಮಾಹಿತಿಯನ್ನು ಜಿಲ್ಲಾಧಿಕಾರಿ ಕಚೇರಿಯ ಸೂಚನಾ ಫಲಕದಲ್ಲಿ ಅಥವಾ ವೆಬ್ಸೈಟ್ hಣಣಠಿ://ತಿತಿತಿ.ಞoಜಚಿgu.ಟಿiಛಿ.iಟಿ ಪ್ರಕಟಿಸಲಾಗಿದ್ದು, ಸಂತ್ರಸ್ತ ಕುಟುಂಬದವರು ಯಾವ ನಂಬರಿನ ಮನೆ ಯಾವ ಕುಟುಂಬಕ್ಕೆ ಎಂಬುದನ್ನು ತಿಳಿದುಕೊಳ್ಳ ಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಸಂತ್ರಸ್ತರಿಗೆ ಮನೆ ಸಂಖ್ಯೆ ನಿಗದಿಯಾಗಿರುವುದರಿಂದ ವಿದ್ಯುತ್ ಸಂಪರ್ಕವನ್ನು ಪಡೆಯಲು ಮುಂದಾಗಬೇಕು. ಆ ನಿಟ್ಟಿನಲ್ಲಿ ಆಧಾರ್ ಕಾರ್ಡ್ ಪ್ರತಿ ಮತ್ತು ಕುಟುಂಬದವರ ಭಾವಚಿತ್ರವನ್ನು ಸೆಸ್ಕ್ ಕಚೇರಿಗೆ ನೀಡಲು ಮುಂದಾಗಬೇಕು. ಶೀಘ್ರ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಇನ್ಫೋಸಿಸ್ ಸಂಸ್ಥೆಯಿAದ ಜಂಬೂರಿನಲ್ಲಿ ಮನೆ ನಿರ್ಮಿಸಲಾಗುತ್ತಿದ್ದು, ವಿದ್ಯುತ್, ಕುಡಿಯುವ ನೀರು, ಒಳಚರಂಡಿ ಕಾಮಗಾರಿ ಬಾಕಿ ಇವೆ ಎಂದು ಅವರು ಹೇಳಿದರು.
ರಾಜೀವ್ ಗಾಂಧಿ ವಸತಿ ನಿಗಮದ ಎಂಜಿನಿಯರ್ ಶ್ರೀನಿವಾಸ್ ಅವರು ಮನೆ ಹಸ್ತಾಂತರ ಸಂದರ್ಭದಲ್ಲಿ ಮನೆ ಹಕ್ಕುಪತ್ರ ವಿತರಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದರು.