ಕೂಡಿಗೆ, ಜೂ. ೨: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಅಂಗವಾಗಿ ಶಾಲೆಯ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್ ವತಿಯಿಂದ "ವಿಶ್ವ ಬೈಸಿಕಲ್ ದಿನಾಚರಣೆ" : ೨೦೨೨ ಹಾಗೂ ಬೈಸಿಕಲ್ ಮೂಲಕ ಪರಿಸರ ಜಾಗೃತಿ ಜಾಥಾ ನಡೆಸಲಾಯಿತು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ , ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಹಾಗೂ ಕೂಡುಮಂಗಳೂರು ಗ್ರಾಮ ಪಂಚಾಯ್ತಿಯ ಸಹಯೋಗದೊಂದಿಗೆ ಶಾಲೆಯ ಎಸ್. ಡಿ.ಎಂ.ಸಿ. ಮತ್ತು ಎನ್.ಎಸ್.ಎಸ್.ಘಟಕ, ಹಾಸನ ಜಿಲ್ಲೆಯ ಸೀಕೋ ಸಂಸ್ಥೆಯ ಆಶ್ರಯದಲ್ಲಿ ಕೂಡ್ಲೂರು ಗ್ರಾಮದಲ್ಲಿ ಏರ್ಪಡಿಸಿದ್ದ ವಿಶ್ವ ಬೈಸಿಕಲ್ ದಿನದ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪರಿಸರ ಸ್ನೇಹಿ ಬೈಸಿಕಲ್ ಬಳಕೆಯ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು.

ವಿಶ್ವ ಬೈಸಿಕಲ್ ದಿನದ ಮಹತ್ವ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಮಾಹಿತಿ ನೀಡುವ ಮೂಲಕ ವಿದ್ಯಾರ್ಥಿಗಳಿಗೆ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದ ರಾಷ್ಟಿçÃಯ ಹಸಿರು ಪಡೆಯ ಜಿಲ್ಲಾ ಘಟಕದ ನೋಡಲ್ ಅಧಿಕಾರಿಯೂ ಆದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಪ್ರತಿ ವರ್ಷದಂತೆ ಅಂರ‍್ರಾಷ್ಟಿçÃಯ ಬೈಸಿಕಲ್ ದಿನವನ್ನಾಗಿ ಆಚರಿಸಲಾಗುತ್ತಿದೆ.

ಸೈಕಲ್ ಒಂದು ಉತ್ತಮ ಸುಸ್ಥಿರ ಸಾರಿಗೆಯಾಗಿದ್ದು, ಸೈಕ್ಲಿಂಗ್ ಎಲ್ಲರಿಗೂ ಕೈಗೆಟಕುವ ಪರಿಸರ ಸ್ನೇಹಿ ಮತ್ತು ಆರೋಗ್ಯದಾಯಕ ಸಾರಿಗೆಯಾಗಿದೆ ಎಂದರು. ಸೈಕಲ್ ತುಳಿಯುವುದರಿಂದ ನಾವು ಅನೇಕ ಲಾಭಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದರು. ಪ್ರತಿನಿತ್ಯ ಬೈಸಿಕಲ್ ಬಳಕೆ ಮಾಡುವುದರಿಂದ ಉಂಟಾಗುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದ ಶಾಲೆಯ ಇಕೋ ಕ್ಲಬ್‌ನ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ, ಪರಿಸರ ಸ್ನೇಹಿ ಬೈಸಿಕಲ್ ಬಳಕೆಯು ಮಾಲಿನ್ಯ ತಡೆಯೊಂದಿಗೆ ಪರಿಸರ ಸಮತೋಲನ ಕಾಪಾಡಲು ಸಹಕಾರಿಯಾಗಿದೆ. ಮನುಷ್ಯನ ಸದೃಢ ಆರೋಗ್ಯ ಮತ್ತು ಮಾನಸಿಕ ನೆಮ್ಮದಿಗೆ ಬೈಸಿಕಲ್ ಬಳಕೆ ಅವಶ್ಯಕ ಎಂದರು. ಎಸ್.ಡಿ.ಎಂ.ಸಿ.ಅಧ್ಯಕ್ಷ ಎಸ್.ಎನ್.ಪುಟ್ಟಸ್ವಾಮಿ , ಬೈಸಿಕಲ್ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು.

ಶಾಲಾ ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಎಂ.ಟಿ. ದಯಾನಂದ, ಬಿ.ಡಿ.ರಮ್ಯ ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ಇತರರು ಇದ್ದರು. ನಂತರ ವಿದ್ಯಾರ್ಥಿಗಳು ಕೂಡ್ಲೂರು ಗ್ರಾಮದಲ್ಲಿ ಬೈಸಿಕಲ್ ಜಾಥಾ ನಡೆಸುವ ಮೂಲಕ ಬೈಸಿಕಲ್ ಬಳಕೆಯ ಮಹತ್ವ ಹಾಗೂ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಿದರು.

ಪರಿಸರ ಜಾಗೃತಿ ಅಭಿಯಾನದಲ್ಲಿ ವಿದ್ಯಾರ್ಥಿಗಳು ಬೈಸಿಕಲ್ ಬಳಕೆಯ ಮಹತ್ವದ ಕುರಿತ ಘೋಷಣಾ ಫಲಕಗಳನ್ನು ಹಿಡಿದು ಜನರಲ್ಲಿ ಜಾಗೃತಿ ಮೂಡಿಸಿದರು. ಪರಿಸರ ಸ್ನೇಹಿ ಬೈಸಿಕಲ್ ಬಳಸಿ ಇಂಧನ ಉಳಿಸಿ, ಬೈಸಿಕಲ್ ಬಳಸಿ ಮಾಲಿನ್ಯ ತಡೆಯಿರಿ, ಬೈಸಿಕಲ್ ಬಳಸಿ ಪರಿಸರ ಸಂರಕ್ಷಿಸಿ ಎಂಬಿತ್ಯಾದಿ ಘೋಷಣಾ ಫಲಕಗಳನ್ನು ಹಿಡಿದು ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲಾಯಿತು.