ಸೋಮವಾರಪೇಟೆ, ಜೂ. ೩: ಯಾವುದೇ ವ್ಯಾಪಾರಿಗಳು ರೈತರಿಂದ ರಸಗೊಬ್ಬರ ಮತ್ತು ಕ್ರಿಮಿನಾಶಕಗಳಿಗೆ ನಿಗದಿತ ದರಕ್ಕಿಂತ ಹೆಚ್ಚಿನ ಹಣ ಪಡೆಯಬಾರದು. ಅಂತಹ ಪ್ರಕರಣಗಳು ಕಂಡುಬAದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಯಾದವ ಬಾಬು ಎಚ್ಚರಿಕೆ ನೀಡಿದ್ದಾರೆ.

ಕೃಷಿ ಇಲಾಖೆ ವತಿಯಿಂದ ಪಟ್ಟಣದ ರಸಗೊಬ್ಬರ ಮತ್ತು ಕ್ರಿಮಿನಾಶಕ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ, ದಾಖಲಾತಿಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು ಇರಿಸಲಾಗಿದೆ. ಬಿತ್ತನೆ ಬೀಜವನ್ನು ಆಯಾ ರೈತ ಸಂಪರ್ಕ ಕೇಂದ್ರದಲ್ಲಿ ಸರ್ಕಾರದ ಸಹಾಯಧನದಲ್ಲಿ ನೀಡಲಾಗುತ್ತಿದೆ ಎಂದರು.

ರಸಗೊಬ್ಬರಗಳ ನಿಗದಿತ ದರ ಮತ್ತು ದಾಸ್ತಾನಿನ ಬಗ್ಗೆ ಅಂಗಡಿಯಲ್ಲಿ ಮಾಹಿತಿ ಫಲಕ ಹಾಕಬೇಕು. ಯಾವುದೇ ರೀತಿಯ ದೂರುಗಳಿದ್ದರೂ ೮೨೭೭೯೩೧೯೦೭ ನ್ನು ಸಂಪರ್ಕಿಸಬಹುದು ಎಂದು ಸಹಾಯಕ ನಿರ್ದೇಶಕರು ತಿಳಿಸಿದರು. ಸೋಮವಾರಪೇಟೆ ಪಟ್ಟಣ, ಕೂಡಿಗೆ, ಹೆಬ್ಬಾಲೆ ಸೇರಿದಂತೆ ಇನ್ನಿತರ ಅಂಗಡಿಗಳಿಗೆ ಭೇಟಿ ನೀಡಿ ಮಾಹಿತಿ ಪಡೆದರು.