ಕೋವರ್ ಕೊಲ್ಲಿ ಇಂದ್ರೇಶ್ ಬೆAಗಳೂರು, ಜೂ. ೩: ಭಾರತ ಮತ್ತು ಮಯನ್ಮಾರ್ ಗಡಿಯಲ್ಲಿನ ಮಣಿಪುರ ರಾಜ್ಯಕ್ಕೆ ಸೇರಿದ ಮೊರೆಹ್ನ Iಟಿಣegಡಿಚಿಣeಜ ಅheಛಿಞ Posಣ (IಅP)ನ ಗೇಟ್೧ ಮತ್ತು ೨ನ್ನು ತೆರೆದು ವ್ಯಾಪಾರ ಪುನರಾರಂಭಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ವಿದೇಶಾಂಗ ಸಚಿವಾಲಯದ ಸೂಚನೆ ಮೇರೆಗೆ ಈ ಗೇಟ್ಗಳನ್ನು ಈ ವಾರವಷ್ಟೆ ತೆರೆಯಲಾಗಿದೆ. ಈ ಎರಡೂ ಗೇಟ್ಗಳನ್ನು ಕಳೆದ ೨೦೨೦ ರ ಮಾರ್ಚ್ನಲ್ಲಿ ಕೋವಿಡ್ ಸಾಂಕ್ರಾಮಿಕ ಉಲ್ಬಣಿಸಿದ ನಂತರ ಮುಚ್ಚಲಾಗಿತ್ತು.ಮಯನ್ಮಾರ್ನ ಅಧಿಕಾರಿಗಳ ನಿಯೋಗ ನವದೆಹಲಿಯ ವಿದೇಶಾಂಗ ಇಲಾಖೆಯ ಅಧಿಕಾರಿ ಗಳನ್ನು ಭೇಟಿ ಮಾಡಿ ಗೇಟ್ ತೆರೆದು ವ್ಯಾಪಾರ ವಹಿವಾಟಿಗೆ ಅನುಕೂಲ ಕಲ್ಪಿಸಿಕೊಡಲು ಕೋರಿದ ಮೇರೆಗೆ ಈ ಗೇಟ್ಗಳನ್ನು ತೆರೆಯಲಾಗಿದೆ. ಗೇಟ್ಗಳ ತೆರವಿನಿಂದ ದ್ವಿಪಕ್ಷೀಯ ವ್ಯಾಪಾರ ವೃದ್ಧಿಯಾಗುವುದಾದರೂ ಇತರ ವಸ್ತುಗಳ ಜತೆ ಸಂಬಾರ ವಸ್ತುಗಳ ಹೆಸರಿನಲ್ಲಿ ಅಡಿಕೆ, ಕಾಳುಮೆಣಸು ಕೂಡ ಕಡಿಮೆ ಬೆಲೆಗೆ ಆಮದಾಗುತ್ತಿವೆ. ಇದರಿಂದಾಗಿ ದೇಶದಲ್ಲಿ ಅಡಿಕೆ ಮತ್ತು ಕಾಳು ಮೆಣಸಿನ ದರ ಕುಸಿಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಮಯನ್ಮಾರ್ನಿಂದ ಆಮದಾಗುವ ಕಡಿಮೆ ದರ್ಜೆಯ ಅಡಿಕೆ ಮತ್ತು ಕಾಳು ಮೆಣಸಿಗೆ ನಿರ್ಬಂಧ ಹೇರಬೇಕೆಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಅವರು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ.
ಭಾರತ ಅಡಿಕೆ ಮತ್ತು ಕಾಳುಮೆಣಸು ಕ್ಷೇತ್ರದಲ್ಲಿ ಸ್ವಾವಲಂಬಿಯಾಗಿದೆ. ಈ ವಸ್ತುಗಳು ಒಳ ಬರಲಾರಂಭಿಸಿದರೆ ನಮ್ಮ ಮಾರುಕಟ್ಟೆಯಲ್ಲಿ ಅಸ್ಥಿರತೆ ಉಂಟಾಗಿ ಬೆಳೆಗಾರರ ಹಿತಕ್ಕೆ ಹಾನಿಯಾಗಲಿದೆ. ಆದ್ದರಿಂದ ತಾವು ಈ ಬಗ್ಗೆ ತಕ್ಷಣ ಗಮನ ಹರಿಸಿ ಮಯನ್ಮಾರ್ ಗಡಿಯಲ್ಲಿನ ಮಣಿಪುರ ಗೇಟುಗಳ ಮೂಲಕ ಅಡಿಕೆ ಮತ್ತು ಕಾಳುಮೆಣಸು ಒಳನುಸುಳಿ ದೇಶೀಯ ಮಾರುಕಟ್ಟೆ ಪ್ರವೇಶಿಸದಂತೆ ನಿರ್ಬಂಧಿಸುವAತೆ ಸಂಬAಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.