ಕಾಶ್ಮೀರದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಹತ್ಯೆ
ನವದೆಹಲಿ, ಜೂ. ೨: ಕಾಶ್ಮೀರದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹತ್ಯೆಗಳ ಸರಣಿ ಮುಂದುವರೆದಿದ್ದು ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಷ್ಟಿçÃಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಿ ಕಾಶ್ಮೀರದಲ್ಲಿ ನಡೆಯುತ್ತಿರುವ ಉದ್ದೇಶಿತ ಹತ್ಯೆಗಳ ಕುರಿತು ಚರ್ಚಿಸಿದರು. ಪ್ರಧಾನಿ ಕಾರ್ಯಾಲಯದ ಕೇಂದ್ರದ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಕೂಡ ಸಭೆಯಲ್ಲಿ ಪಾಲ್ಗೊಂಡರು. ಮೂರು ದಿನಗಳಲ್ಲಿ ಕಣಿವೆಯಲ್ಲಿ ಹಿಂದೂಗಳ ಮೇಲಿನ ಎರಡನೇ ಉದ್ದೇಶಿತ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ನಲ್ಲಿ ಭಯೋತ್ಪಾದಕರಿಂದ ರಾಜಸ್ಥಾನದ ಬ್ಯಾಂಕ್ ಮ್ಯಾನೇಜರ್ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ ಬಳಿಕ ತುರ್ತು ಸಭೆ ನಡೆಸಲಾಗಿದೆ. ಇಲಾಖಾಹಿ ದೇಹತಿ ಬ್ಯಾಂಕ್ನ ಅರೆಹ್ ಶಾಖೆಗೆ ಭಯೋತ್ಪಾದಕ ನುಗ್ಗಿ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಮೇಲೆ ಗುಂಡು ಹಾರಿಸಿದ್ದ. ಸಿಸಿಕ್ಯಾಮೆರಾ ದೃಶ್ಯಾವಳಿಯಲ್ಲಿ ಹಂತಕ ಶಾಖೆ ಯೊಳಗೆ ಪ್ರವೇಶಿಸಿ ಗುಂಡು ಹಾರಿಸಿ ಪರಾರಿಯಾಗುವುದನ್ನು ತೋರಿಸುತ್ತದೆ. ವಿಜಯ್ ಕುಮಾರ್ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದರು. ಜಮ್ಮುವಿನ ಹಿಂದೂ ಶಿಕ್ಷಕಿ ರಜನಿ ಬಾಲಾ ಅವರನ್ನು ಕುಲ್ಗಾಮ್ನಲ್ಲಿ ಶಾಲೆಯ ಹೊರಗೆ ಭಯೋತ್ಪಾದಕರು ಕೊಂದ ಎರಡು ದಿನಗಳ ನಂತರ ಈ ದಾಳಿ ನಡೆದಿದೆ. ಪಕ್ಕದ ಶೋಪಿಯಾನ್ ಜಿಲ್ಲೆಯಲ್ಲಿ ಎರಡು ಪ್ರಮುಖ ಘಟನೆಗಳು ನಡೆದ ೨೪ ಗಂಟೆಗಳಲ್ಲಿ ಕುಲ್ಗಾಮ್ನಲ್ಲಿ ಬ್ಯಾಂಕ್ ಮ್ಯಾನೇಜರ್ ಹತ್ಯೆಯಾಗಿದೆ. ಫಾರೂಕ್ ಅಹ್ಮದ್ ಶೇಖ್ ಎಂಬ ನಾಗರಿಕ ನಿನ್ನೆ ಸಂಜೆ ತನ್ನ ಮನೆಯೊಳಗೆ ಉದ್ದೇಶಿತ ಭಯೋತ್ಪಾದಕ ದಾಳಿಯಲ್ಲಿ ಗಾಯ ಗೊಂಡಿದ್ದಾನೆ. ಮತ್ತೊಂದು ಘಟನೆಯಲ್ಲಿ ಇಂದು ಮುಂಜಾನೆ ವಾಹನದಲ್ಲಿ ಸ್ಫೋಟ ಸಂಭವಿಸಿ ಮೂವರು ಯೋಧರು ಗಾಯಗೊಂಡಿದ್ದಾರೆ. ಯೋಧರಲ್ಲಿ ಒಬ್ಬರಿಗೆ ಗಂಭೀರ ಗಾಯಗಳಾಗಿವೆ. ಸೇನೆಯ ಪ್ರಕಾರ, ಮೂವರು ಸೈನಿಕರು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಾಗಿ ಖಾಸಗಿ ವಾಹನವನ್ನು ತೆಗೆದುಕೊಂಡಿದ್ದರು. ಟಾರ್ಗೆಟ್ ಮಾಡಿದ್ದ ಪ್ರದೇಶಕ್ಕೆ ಯೋಧರು ತೆರಳುತ್ತಿದ್ದಾಗ ಸ್ಫೋಟ ಸಂಭವಿಸಿದೆ. ತಮ್ಮನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವAತೆ ಒತ್ತಾಯಿಸಿ ಕಾಶ್ಮೀರಿ ಪಂಡಿತರು ಕೇಂದ್ರಾಡಳಿತ ಪ್ರದೇಶದಲ್ಲಿ ವ್ಯಾಪಕ ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ಈ ಹೊಸ ದಾಳಿ ನಡೆದಿದೆ. ಕಳೆದ ತಿಂಗಳು ಬುದ್ಗಾಮ್ನ ಮ್ಯಾಜಿಸ್ಟೆçÃಟ್ ಕಚೇರಿಯಲ್ಲಿ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಅವರನ್ನು ಗುಂಡಿಕ್ಕಿ ಕೊಂದ ನಂತರ ಸಮುದಾಯದ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಧಾನಿಯವರ ಪುನರ್ವಸತಿ ಪ್ಯಾಕೇಜ್ ಅಡಿಯಲ್ಲಿ ಕಣಿವೆಯಲ್ಲಿ ಉದ್ಯೋಗದಲ್ಲಿರುವ ಸುಮಾರು ೪,೦೦೦ ಕಾಶ್ಮೀರ ಪಂಡಿತರು ಇನ್ನು ಮುಂದೆ ಸುರಕ್ಷಿತವಾಗಿಲ್ಲದ ಕಾರಣ ಸಾಮೂಹಿಕ ವಲಸೆಯ ಬೆದರಿಕೆ ಹಾಕಿದ್ದಾರೆ. ಅವರು ಹೊರಹೋಗುವುದನ್ನು ತಡೆಯಲು, ಕೇಂದ್ರಾಡಳಿತ ಪ್ರದೇಶದ ಆಡಳಿತ ಬ್ಯಾರಿಕೇಡ್ಗಳನ್ನು ಹಾಕಿದೆ. ಸಾರಿಗೆ ಶಿಬಿರಗಳ ಗೇಟ್ಗಳನ್ನು ಲಾಕ್ ಮಾಡಿದೆ.
ರಾಜ್ಯದಲ್ಲಿ ಬಿತ್ತನೆ ಬೀಜ, ಗೊಬ್ಬರ ಕೊರತೆಯಾಗದಂತೆ ನಿಗಾವಹಿಸಲು ಸೂಚನೆ
ಬೆಂಗಳೂರು, ಜೂ. ೨: ರಾಜ್ಯದಲ್ಲಿ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ ಹಾಗೂ ಗೊಬ್ಬರದ ಕೊರತೆಯಾಗದಂತೆ ಹಿರಿಯ ಅಧಿಕಾರಿಗಳು ಖುದ್ದು ನಿಗಾ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಇಂದು ಕೃಷಿ ಇಲಾಖೆಯ ಆಯವ್ಯಯ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ರಾಜ್ಯದಲ್ಲಿ ಮೇ ೩೧ರ ಮಾಹಿತಿಯಂತೆ ೧.೨೬ ಲಕ್ಷ ಮೆಟ್ರಿಕ್ ಟನ್ ಡಿಎಪಿ ಲಭ್ಯವಿದ್ದು, ಒಟ್ಟಾರೆ, ೭.೬೪ ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯವಿದೆ. ರಾಜ್ಯದ ಬೇಡಿಕೆ ಪೂರೈಸಲು ಯಾವುದೇ ಕೊರತೆ ಇಲ್ಲ. ಆದರೆ, ವ್ಯವಸ್ಥಿತವಾಗಿ ಅಗತ್ಯ ಆಧರಿಸಿ ರಸಗೊಬ್ಬರ ಸಕಾಲದಲ್ಲಿ ಪೂರೈಸಲು ಹಿರಿಯ ಅಧಿಕಾರಿಗಳೇ ಮೇಲ್ವಿಚಾರಣೆ ನಡೆಸಿ, ಯಾವುದೇ ಕೃತಕ ಅಭಾವ ಸೃಷ್ಟಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು. ಅಂತೆಯೇ ಬಿತ್ತನೆ ಬೀಜ ರಾಜ್ಯದಲ್ಲಿ ೭.೮೧ ಲಕ್ಷ ಕ್ವಿಂಟಾಲ್ನಷ್ಟು ಲಭ್ಯವಿದ್ದು, ಬೇಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿಯೇ ಲಭ್ಯವಿದೆ. ಆದರೆ ನಕಲಿ ಬೀಜಗಳ ಹಾವಳಿಯನ್ನು ತಪ್ಪಿಸಲು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಈ ಕುರಿತು ಯಾವುದೇ ಲೋಪವಾಗದಂತೆ ಕ್ರಮ ಕೈಗೊಳ್ಳಬೇಕು. ನಕಲಿ ಬೀಜ ಪೂರೈಕೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ೧೧೪.೫೪ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಇದರೊಂದಿಗೆ ಕಂದಾಯ ಇಲಾಖೆ ಹಾಗೂ ಜಲ ಸಂಪನ್ಮೂಲ ಇಲಾಖೆಗಳಿಂದ, ಬಂಜರು ಭೂಮಿ ಹಾಗೂ ಸವಳು-ಜವಳು ಭೂಮಿಯ ಮಾಹಿತಿ ಪಡೆದು, ಈ ವರ್ಷ ಕನಿಷ್ಟ ತಲಾ ಒಂದು ಲಕ್ಷ ಹೆಕ್ಟೇರ್ನಷ್ಟು ಬಂಜರು ಭೂಮಿ ಹಾಗೂ ಸವಳು-ಜವಳು ಭೂಮಿಯನ್ನು ಕೃಷಿಯೋಗ್ಯವಾಗಿ ಪರಿವರ್ತಿಸುವಂತೆ ಸೂಚಿಸಿದರು. ಸೆಕೆಂಡರಿ ಕೃಷಿ ನಿರ್ದೇಶನಾಲಯವು ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಎಂಎಸ್ಎAಇಗಳು, ಅಗ್ರಿಗೇಟರುಗಳು, ಸ್ವಸಹಾಯ ಸಂಘಗಳು, ಆಂಕರ್ ಬ್ಯಾಂಕಿAಗ್ ಜೊತೆಗೆ ನಿಕಟ ಸಂಪರ್ಕ ಬೆಳೆಸಿ ಕಾರ್ಯ ನಿರ್ವಹಿಸಬೇಕು. ರೈತರಿಂದ ಕೃಷಿ ಉತ್ಪನ್ನ ಖರೀದಿಸುವಂತೆ ಹಲವು ಅಗ್ರಿಗೇಟರುಗಳಿಗೆ ವಿವಿಧ ಸಂದರ್ಭಗಳಲ್ಲಿ ಸಲಹೆ ನೀಡಿದ್ದೇನೆ. ಈ ಕುರಿತು ಸಮನ್ವಯ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯದಲ್ಲಿ ದ್ವಿದಳ ಧಾನ್ಯ ಮತ್ತು ಎಣ್ಣೆಕಾಳು ಬೆಳೆಗಳ ಉತ್ಪಾದಕತೆಯನ್ನು ಸುಸ್ಥಿರ ಅಭಿವೃದ್ಧಿ ಗುರಿಯ ಮಟ್ಟಕ್ಕೆ ಹೆಚ್ಚಿಸಲು ಕ್ರಿಯಾ ಯೋಜನೆ ರೂಪಿಸುವಂತೆ ಸೂಚಿಸಿದರು.
ಉಪ್ಪಿನಂಗಡಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಅಮಾನತು
ಮಂಗಳೂರು, ಜೂ. ೨: ದಕ್ಷಿಣ ಕನ್ನಡ ಜಿಲ್ಲೆಯ ಅಧಿಕಾರಿಗಳು ಗುರುವಾರ ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದ ೬ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ್ದಾರೆ. ಮತ್ತೊಂದು ನಿದರ್ಶನದಲ್ಲಿ, ತರಗತಿಗಳಿಗೆ ಹಾಜರಾಗುವಾಗ ಹಿಜಾಬ್ ಧರಿಸಿದ್ದಕ್ಕಾಗಿ ೧೨ ವಿದ್ಯಾರ್ಥಿಗಳನ್ನು ಹಿಂದಕ್ಕೆ ಕಳುಹಿಸಲಾಗಿದೆ. ೬ ವಿದ್ಯಾರ್ಥಿನಿಯರಿಗೆ ಸರ್ಕಾರದ ಆದೇಶ ಮತ್ತು ತರಗತಿ ಕೊಠಡಿಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸುವ ಹೈಕೋರ್ಟ್ನ ತೀರ್ಪಿನ ಬಗ್ಗೆ ತಿಳಿಹೇಳಲಾಯಿತು. ಆದರೂ, ಹಿಜಾಬ್ ಮಾರ್ಗ ಸೂಚಿಗಳನ್ನು ಪದೇ ಪದೇ ಉಲ್ಲಂಘಿಸಿದ ಉಪ್ಪಿನಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆರು ವಿದ್ಯಾರ್ಥಿಗಳನ್ನು ಅಮಾನತು ಗೊಳಿಸಲಾಗಿದೆ. ಕಾಲೇಜಿನ ಪ್ರಾಂಶುಪಾಲರು ಕಾಲೇಜು ಉಪನ್ಯಾಸಕರ ಜತೆ ಸಭೆ ನಡೆಸಿದ ಬಳಿಕ ವಿದ್ಯಾರ್ಥಿಗಳನ್ನು ಅಮಾನತುಗೊಳಿಸುವ ನಿರ್ಧಾರ ಕೈಗೊಂಡಿದ್ದಾರೆ. ಹಂಪನಕಟ್ಟೆ ಸಮೀಪದ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಅಧಿಕಾರಿಗಳು ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸುತ್ತಿದ್ದರೂ ಸಹ, ಗುರುವಾರ ಹಿಜಾಬ್ ಧರಿಸಿ ಬಂದ ೧೬ ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು. ಸರ್ಕಾರದ ನಿಯಮಗಳು ಮತ್ತು ನ್ಯಾಯಾಲಯದ ಆದೇಶವನ್ನು ಪಾಲಿಸುವಂತೆ ಡಿಸಿ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದರು. ಆದರೆ, ವಿದ್ಯಾರ್ಥಿಗಳು ಅದಕ್ಕೂ ಜಗ್ಗದೆ ಗುರುವಾರ ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದರು.
೪೨೪ ವಿಐಪಿಗಳಿಗೆ ಭದ್ರತೆ ಮರುಸ್ಥಾಪನೆ
ಚಂಡೀಗಢ, ಜೂ. ೨: ತಾ. ೭ ರಿಂದ ೪೨೦ಕ್ಕೂ ಹೆಚ್ಚು ವಿವಿಐಪಿಗಳಿಗೆ ಭದ್ರತೆಯನ್ನು ಪುನಃಸ್ಥಾಪಿಸಲಾಗುವುದು ಎಂದು ಪಂಜಾಬ್ ಸರ್ಕಾರ ಇಂದು ಹೇಳಿದೆ. ಗಾಯಕ ಸಿಧು ಮೂಸೆವಾಲಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಐದು ದಿನಗಳ ನಂತರ ವಿಐಪಿಗಳ ಭದ್ರತೆ ಮರುಸ್ಥಾಪಿಸುವ ಬಗ್ಗೆ ಎಎಪಿ ಸರ್ಕಾರವು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ಗೆ ಹೀಗೆಂದು ತಿಳಿಸಿದೆ. ಸಿಧು ಮೂಸೆವಾಲಾರ ಭದ್ರತೆಯನ್ನ ಹಿಂಪಡೆದ ಮರುದಿನ ಅವರನ್ನ ಹತ್ಯೆ ಮಾಡಲಾಗಿತ್ತು. ಪಂಜಾಬ್ ಸರ್ಕಾರ ೪೨೪ ಮಂದಿಯ ಭದ್ರತೆಯನ್ನು ಮೊಟಕುಗೊಳಿಸಿದ ಬಗ್ಗೆ ಮಾಜಿ ಸಚಿವ ಓಪಿ ಸೋನಿ ಅವರ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಮುಂದೆ ಸರ್ಕಾರ ಭದ್ರತೆ ಮರುಸ್ಥಾಪಿಸುವುದಾಗಿ ಹೇಳಿದೆ. ಭದ್ರತೆಯನ್ನು ಏಕೆ ಮೊಟಕುಗೊಳಿಸಲಾಗಿತ್ತು ಎಂಬ ಹೈಕೋರ್ಟ್ನ ಪ್ರಶ್ನೆಗೆ, ತಾ. ೬ ರಂದು ನಡೆಯುವ ಆಪರೇಷನ್ ಬ್ಲೂಸ್ಟಾರ್ನ ವಾರ್ಷಿಕೋತ್ಸವಕ್ಕೆ ಭದ್ರತಾ ಸಿಬ್ಬಂದಿ ಅಗತ್ಯವಿದೆ ಎಂದು ಪಂಜಾಬ್ ಸರ್ಕಾರ ಉತ್ತರಿಸಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಪಂಜಾಬ್ ಸರ್ಕಾರವು ಸಿಧು ಮೂಸೆವಾಲಾ ಅವರನ್ನು ಗುಂಡಿಕ್ಕಿ ಕೊಂದ ನಂತರ ವಿವಿಐಪಿಗಳ ಭದ್ರತೆಯನ್ನು ಮೊಟಕುಗೊಳಿಸಿದ ಬಗ್ಗೆ ಟೀಕೆಗಳನ್ನು ಎದುರಿಸುತ್ತಿದೆ.