ಶ್ರೀಮಂಗಲ, ಜೂ. ೨: ಪೊನ್ನಂಪೇಟೆ ಕೊಡವ ಸಮಾಜದ ನೂತನ ಆಡಳಿತ ಮಂಡಳಿಯ ೨೦೨೨-೨೦೨೫ ಅವಧಿಗೆ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಗುರುವಾರ ಕೊಡವ ಸಮಾಜದ ಆಡಳಿತ ಮಂಡಳಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷರಾಗಿ ಕೊಡವ ಜಾನಪದ ತಜ್ಞ ಕಾಳಿಮಾಡ ಮೋಟಯ್ಯ, ಉಪಾಧ್ಯಕ್ಷೆಯಾಗಿ ಚಿರಿಯಪಂಡ ಇಮ್ಮಿ ಉತ್ತಪ್ಪ, ಗೌ. ಕಾರ್ಯದರ್ಶಿಯಾಗಿ ಕೋಟೆರ ಕಿಶನ್ ಉತ್ತಪ್ಪ, ಖಜಾಂಚಿಯಾಗಿ ಕಳ್ಳಿಚಂಡ ಕಟ್ಟಿ ಪೂಣಚ್ಚ, ಸಹ ಕಾರ್ಯದರ್ಶಿಯಾಗಿ ಆಲೇಮಾಡ ಸುಧೀರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇದರೊಂದಿಗೆ ಆಡಳಿತ ಮಂಡಳಿ ನಿರ್ದೇಶಕರಾಗಿ ಮೂಕಳೇರ ಕಾವ್ಯ ಕಾವೇರಮ್ಮ, ಕೊಣಿಯಂಡ ಸಂಜು ಸೋಮಯ್ಯ, ಅಡ್ಡಂಡ ಸುನಿಲ್ ಸೋಮಯ್ಯ, ಮೂಕಳಮಾಡ ಅರಸು ನಂಜಪ್ಪ, ಚೊಟ್ಟೆಕಾಳಪಂಡ ಆಶಾ ಪ್ರಕಾಶ್, ಚೆಪ್ಪುಡೀರ ರಾಕೇಶ್ ದೇವಯ್ಯ, ಚೀರಂಡ ಕಂದಾ ಸುಬ್ಬಯ್ಯ ಹಾಗೂ ಖಾಯಂ ಆಹ್ವಾನಿತರಾಗಿ ಚೆಪ್ಪುಡೀರ ಕಿಟ್ಟು ಅಯ್ಯಪ್ಪ ಅವರು ಆಯ್ಕೆಗೊಂಡಿದ್ದಾರೆ.