ಮಡಿಕೇರಿ, ಜೂ.೨: ರಾಜ್ಯ ಶಿಕ್ಷಣ ಸಚಿವರ ಮನೆ ಮೇಲೆ ಕಾಂಗ್ರೆಸ್ ಎನ್‌ಎಸ್‌ಯುಐ ಕಾರ್ಯಕರ್ತರು ನಡೆಸಿರುವ ದಾಳಿ ಖಂಡನೀಯವೆAದು ಅಸಮಾಧಾನ ವ್ಯಕ್ತಪಡಿಸಿರುವ ಜಿಲ್ಲಾ ಬಿಜೆಪಿ, ಘಟನೆ ಕುರಿತು ತನಿಖೆ ನಡೆಸಿ ತಪ್ಪಿತಸ್ತರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ಪತ್ರಿಕಾ ಪ್ರಕಟಣೆ ನೀಡಿರುವ ಬಿಜೆಪಿ ಜಿಲ್ಲಾ ವಕ್ತಾರ ಮಹೇಶ್ ಜೈನಿ, ಪಠ್ಯ ಪುಸ್ತಕ ಪರಿಷ್ಕರಣೆ ಪ್ರಕ್ರಿಯೆಯನ್ನು ವಿರೋಧಿಸುವ ನೆಪದಲ್ಲಿ ಎನ್.ಎಸ್.ಯು.ಐ ಕಾರ್ಯಕರ್ತರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಮನೆಗೆ ನುಗ್ಗಿ ದಾಂಧಲೆ ನಡೆಸುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಆಘಾತಕಾರಿ ಘಟನೆಯನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿರುವ ಅವರು, ಇದು ಕಾಂಗ್ರೆಸ್‌ನ ಪೂರ್ವಯೋಜಿತ ಸಂಚಾಗಿದ್ದು, ಕಾನೂನನ್ನು ಕೈಗೆತ್ತಿಕೊಳ್ಳಲು ಕಾರ್ಯಕರ್ತರಿಗೆ ಪ್ರಚೋದನೆ ನೀಡಲಾಗಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರಕಾರದ ನಿಲುವನ್ನು ಪ್ರತಿಭಟನೆ ಅಥವಾ ವಿವಿಧ ಹಂತಗಳ ಹೋರಾಟದ ಮೂಲಕ ಪ್ರಶ್ನೆ ಮಾಡುವುದು ಮತ್ತು ಪರಿಹಾರ ಕಂಡುಕೊಳ್ಳುವುದು ಸಂವಿಧಾನಕ್ಕೆ ನೀಡುವ ಗೌರವವಾಗಿದೆ. ಆದರೆ ಇಂದು ಕಾಂಗ್ರೆಸ್ ಕಾನೂನು ಮೀರಿ ವರ್ತಿಸುತ್ತಿದ್ದು, ಭಯದ ವಾತಾವರಣವನ್ನು ಸೃಷ್ಟಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಈ ರೀತಿಯ ವರ್ತನೆಗಳ ಮೂಲಕ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಬಹುದೆನ್ನುವ ಭ್ರಮೆಯಲ್ಲಿ ಕಾಂಗ್ರೆಸ್ ಪಕ್ಷವಿದೆ. ದೇಶವ್ಯಾಪಿ ತನ್ನ ನೆಲೆ ಕಳೆದುಕೊಳ್ಳುತ್ತಿರುವ ಈ ಪಕ್ಷವನ್ನು ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳಲು ಕೂಡ ಅವಕಾಶ ನೀಡದೆ ಜನ ಧೂಳೀಪಟ ಮಾಡಲಿದ್ದು, ಶಿಕ್ಷಣ ಸಚಿವರ ಮನೆ ಮೇಲೆ ದಾಳಿ ಮಾಡಿದ ಎನ್‌ಎಸ್‌ಯುಐ ಕಾರ್ಯಕರ್ತರನ್ನು ಬಂಧಿಸಿ ತನಿಖೆಗೆ ಒಳಪಡಿಸಬೇಕೆಂದು ಮಹೇಶ್ ಜೈನಿ ಒತ್ತಾಯಿಸಿದ್ದಾರೆ. ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಅವರ ಮನೆಯಲ್ಲಿ ಪ್ರತಿಭಟನೆಯ ನೆಪದಲ್ಲಿ ದಾಂಧಲೆ ನಡೆಸಿರುವ ಕಾಂಗ್ರೆಸ್ ವಿದ್ಯಾರ್ಥಿ ಘಟಕದ ವರ್ತನೆಯನ್ನು ಕೊಡಗು ಜಿಲ್ಲಾ ಬಿಜೆಪಿ ಯುವ ಮೋರ್ಚಾ ತೀವ್ರವಾಗಿ ಖಂಡಿಸುತ್ತದೆ ಎಂದು ಯುವ ಮೋರ್ಚಾ ಅಧ್ಯಕ್ಷ ದರ್ಶನ್ ಜೋಯಪ್ಪ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪಠ್ಯ ಪುಸ್ತಕದ ಪರಿಷ್ಕರಣೆಯ ವಿಷಯದಲ್ಲಿ ವಿದ್ಯಾರ್ಥಿ ಘಟಕ ಓSUI ಘಟಕದವರÀನ್ನು ದಾಂಧಲೆ ನಡೆಸಲು ಶಿಕ್ಷಣ ಸಚಿವರ ತಿಪಟೂರಿನ ಮನೆಗೆ ಕಳುಹಿಸಿರುವುದು ಕಾಂಗ್ರೆಸ್‌ನ ಗೂಂಡಾ ಸಂಸ್ಕೃತಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಟೀಕಿಸಿದರು.

ಕೆಲವು ಬುದ್ಧಿಜೀವಿಗಳು ಮತ್ತು ಕಮ್ಯುನಿಸ್ಟ್ ಮಾನಸಿಕತೆಯ ಬೆರಳೆಣಿಕೆಯ ಸಾಹಿತಿಗಳನ್ನು ಬಳಸಿಕೊಂಡು ಶಾಲಾ ಪಠ್ಯ ಪರಿಷ್ಕರಣೆಯ ವಿಷಯದ ನೆಪದಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನದಲ್ಲಿ ಕಾಂಗ್ರೆಸ್ಸಿಗರು ನಿರತರಾಗಿದ್ದಾರೆ ಎಂದು ದೂರಿದರು. ಕೆಲವು ಸಾಹಿತಿಗಳು ತಾವು ಬರೆದಿರುವ ಲೇಖನ ಕವಿತೆಗಳನ್ನು ಪಠ್ಯದಿಂದ ತೆಗೆಯಬೇಕೆಂದು ಸರಕಾರಕ್ಕೆ ಪತ್ರ ಬರೆದಿರುವುದು ತಾವು ಬರೆದಿರುವ ಒಳ್ಳೆಯ ವಿಚಾರಗಳನ್ನು ವಿದ್ಯಾರ್ಥಿಗಳು ಓದಬಾರದು ಎಂಬAತಿದೆ. ಇಲ್ಲಿ ಲೇಖನ / ಬರಹ/ ಕವಿತೆ ರಚನೆಯ ಮೂಲ ಉದ್ದೇಶವೇ ಪ್ರಶ್ನಾರ್ಹವಾಗಿದೆ. ಬಹಿರಂಗ ಚರ್ಚೆಗೆ ಆಹ್ವಾನಿಸಿದಾಗ ಬಾರದೆ ಇದೀಗ ಪಠ್ಯ ಪರಿಷ್ಕರಣೆಯ ವಿಷಯದಲ್ಲಿ ಗೊಂದಲ ಸೃಷ್ಟಿಸುತ್ತಿರುವುದು ಸರಿಯಲ್ಲ ಎಂದು ದರ್ಶನ್ ಜೋಯಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ಯುವ ಮೋರ್ಚಾ ರಾಜ್ಯ ಸಮಿತಿ ಸದಸ್ಯ ಮಹೇಶ್ ತಿಮ್ಮಯ್ಯ ಮಾತನಾಡಿ, ಪಠ್ಯ ಪರಿಷ್ಕರಣೆ ಉತ್ತಮವಾಗಿದ್ದರೂ ಕೂಡ ಗೊಂದಲ ಸೃಷ್ಟಿಸುತ್ತಿರುವ ಕಾಂಗ್ರೆಸ್‌ನ ನಡೆ ಸರಿಯಲ್ಲ ಎಂದು ಹೇಳಿದರು.

ಗೋಷ್ಠಿಯಲ್ಲಿ ಉಪಾಧ್ಯಕ್ಷ ವಿನಯ್ ರಾಜ್, ರಾಮನಾಥನ್, ಕಾರ್ಯದರ್ಶಿ ನವೀನ್ ಪೊನ್ನೆಟ್ಟಿ ಉಪಸ್ಥಿತರಿದ್ದರು.