ಮಡಿಕೇರಿ, ಜೂ. ೩: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ನೆಹರು ಯುವ ಕೇಂದ್ರ, ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ಸೋಮವಾರಪೇಟೆ ಮತ್ತು ವೀರಾಜಪೇಟೆ
(ಮೊದಲ ಪುಟದಿಂದ) ತಾಲೂಕು ಯುವ ಒಕ್ಕೂಟ ಹಾಗೂ ಮಡಿಕೇರಿ ಕಾವೇರಿ ಕಲಾವೃಂದ ಸಂಯುಕ್ತಾಶ್ರಯದಲ್ಲಿ ‘ಆಜಾದಿ ಕ ಅಮೃತ ಮಹೋತ್ಸವ’ ಕಾರ್ಯಕ್ರಮದ ಪ್ರಯುಕ್ತ ವಿಶ್ವ ಬೈಸಿಕಲ್ ದಿನಾಚರಣೆ ಅಂಗವಾಗಿ ನಗರದಲ್ಲಿ ಸೈಕಲ್ ಜಾಥಾ ನಡೆಯಿತು.
ನಗರದ ಕೋಟೆ ಆವರಣದಲ್ಲಿ ಜಿಲ್ಲಾಧಿಕಾರಿ ಡಾ.ಬಿ. ಸಿ. ಸತೀಶ ಅವರು ಜಾಥಾಕ್ಕೆ ಚಾಲನೆ ನೀಡಿದರು. ನೂರಾರು ವಿದ್ಯಾರ್ಥಿಗಳು, ಸಂಘ ಸಂಸ್ಥೆಯ ಪ್ರಮುಖರು, ನಾಗರಿಕರು ಸೈಕಲಿಂಗ್ನಲ್ಲಿ ಪಾಲ್ಗೊಂಡಿದ್ದರು. ಕೋಟೆ ಆವರಣದಿಂದ ಆರಂಭಗೊAಡ ಸೈಕಲ್ ಜಾಥಾ ಅಜ್ಜಮಾಡ ದೇವಯ್ಯ ವೃತ್ತ ಮೂಲಕ ಇಂದಿರಾ ಗಾಂಧಿ ವೃತ್ತ, ಕಾಲೇಜು ರಸ್ತೆ, ಎಲ್.ಐ.ಸಿ. ರಸ್ತೆ, ರಾಜಾಸೀಟ್, ಮಂಗೇರಿರ ಮುತ್ತಣ್ಣ ವೃತ್ತದಿಂದ ಫೀ.ಮಾ. ಕಾರ್ಯಪ್ಪ ವೃತ್ತದ ತನಕ ಸಾಗಿ ಮತ್ತೇ ಕೋಟೆ ಆವರಣದಲ್ಲಿ ಸಮಾರೋಪಗೊಂಡಿತು. ಸೈಕಲ್ ಜಾಥಾ ಸಂದರ್ಭ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಸೈಕಲ್ ತುಳಿದ ಡಿಸಿ, ಎಸ್ಪಿ
ಜಿಲ್ಲಾಧಿಕಾರಿ ಬಿ.ಸಿ. ಸತೀಶ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲಚೀರ ಅಯ್ಯಪ್ಪ ಅವರು ಸೈಕಲ್ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಸೈಕಲ್ ಜಾಥಾದಲ್ಲಿ ಎಲ್ಲರೊಂದಿಗೆ ಸೈಕಲ್ ಸವಾರಿ ಮಾಡಿ ಗಮನ ಸೆಳೆದರು.
ಜಾಥಾದ ಉದ್ದಕ್ಕೂ ಸೈಕಲ್ ತುಳಿದು ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಿದರು. ಜಿಲ್ಲಾಧಿಕಾರಿ ತಮ್ಮ ಇಬ್ಬರು ಮಕ್ಕಳೊಂದಿಗೆ ಸೈಕಲಿಂಗ್ನಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಡಿಸಿ ಅವರ ಕಿರಿಯ ಪುತ್ರ ಕೂಡ ಸೈಕಲ್ ನಿಲ್ಲಿಸದೆ ಓಡಿಸಿದನು. ಪುತ್ರಿ ಕೂಡ ಸಾಮಾನ್ಯರಂತೆ ಜಾಥಾದಲ್ಲಿ ಭಾಗವಹಿಸಿದ್ದಳು.
ಸೈಕಲ್ ಜಾಥಾ ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ, ಪ್ರತಿಯೊಬ್ಬರು ಆರೋಗ್ಯವಂತನಾಗಿದ್ದರೆ ಸಮಾಜದ ಆರೋಗ್ಯ ಕಾಪಾಡಬಹುದು. ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಸೈಕಲ್ ಸವಾರಿ ಸೂಕ್ತ ವಾಗಿದ್ದು, ಇಂಧನ ಉಳಿತಾಯಕ್ಕೂ ಸಹಕಾರಿಯಾಗಿದೆ. ೭೫ನೇ ಸ್ವಾತಂತ್ರೊö್ಯÃತ್ಸವದ ಅಂಗವಾಗಿ ಬೈಸಿಕಲ್ ಜಾಥಾ ಹಮ್ಮಿಕೊಳ್ಳ ಲಾಗಿದ್ದು, ಸ್ವಾತಂತ್ರ್ಯಕ್ಕಾಗಿ ಹಲವರು ಪ್ರಾಣ ತೆತ್ತಿದ್ದಾರೆ. ತ್ಯಾಗ, ಬಲಿದಾನದಿಂದ ಸ್ವಾತಂತ್ರö್ಯ ಪಡೆದುಕೊಂಡಿದ್ದೇವೆ. ಭವ್ಯ ಭಾರತ ನಿರ್ಮಾಣ ಇಂದಿನ ಯುವಕರ ಕೈಯಲ್ಲಿದೆ. ಪ್ರತಿಯೊಬ್ಬರು ದೇಶಭಕ್ತಿ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿಕುಶಾಲಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಪರಿಸರಕ್ಕೆ ಪೂರಕವಾದ ವಾತಾವರಣ ಪ್ರಪಂಚದಲ್ಲಿ ಸೃಷ್ಟಿಯಾಗುತ್ತಿದೆ. ಪರಿಸರ ನಾಶದ ಪರಿಣಾಮ ಸೇವಿಸುವ ಗಾಳಿಗೆ ಹಣ ನೀಡಬೇಕಾಗಿದೆ. ಗಿಡ ನೆಡುವ ಮೂಲಕ ಜನರನ್ನು ಜಾಗೃತಿಗೊಳಿಸಬೇಕು. ೪೩% ಅರಣ್ಯ ಇದ್ದರೆ ಮಾತ್ರ ಉತ್ತಮ ಗಾಳಿ ದೊರೆಯುತ್ತದೆ. ಜಿಲ್ಲೆಯಲ್ಲಿ ೪೦% ಅರಣ್ಯ ಪ್ರದೇಶವಿದೆ. ಹವಾಮಾನ ವೈಪರೀತ್ಯಕ್ಕೆ ಪರಿಸರ ನಾಶ ಕಾರಣವಾಗಿದೆ ಎಂದ ಅವರು, ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ ಅವರ ಪರಿಸರ ಕಾಳಜಿಯನ್ನು ಶ್ಲಾಘಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲಚೀರ ಅಯ್ಯಪ್ಪ ಮಾತನಾಡಿ, ಸೈಕಲಿಂಗ್ ಆರೋಗ್ಯ ವೃದ್ಧಿಸುತ್ತದೆ. ಕ್ರಿಯಾತ್ಮಕ ಚಟುವಟಿಕೆಗಳಿಂದ ಮನಸ್ಸು ಸದೃಢವಾಗಿರುತ್ತದೆ ಎಂದರು.
ಜಾನಪದ ಪರಿಷತ್ತು ಜಿಲ್ಲಾಧ್ಯಕ್ಷ ಅನಂತಶಯನ ಮಾತನಾಡಿ, ಮಾನಸಿಕ ಹಾಗೂ ದೈಹಿಕ ಆರೋಗ್ಯ ಸಮತೋಲನ ಕಾಯ್ದುಕೊಳ್ಳಲು ಸೈಕಲಿಂಗ್ ಸಹಕಾರಿಯಾಗಿದೆ. ಸೈಕಲ್ ಸವಾರಿಯನ್ನು ಜೀವನದ ಭಾಗವನ್ನಾಗಿ ಮಾಡಿಕೊಂಡರೆ ಆರೋಗ್ಯದ ಜೊತೆ ಆಯುಷ್ಯ ವೃದ್ಧಿಯಾಗುತ್ತದೆ ಎಂದು ಹೇಳಿದರು. ಕೊಡಗು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಮಾತನಾಡಿ ದಿನದ ಮಹತ್ವ ವಿವರಿಸಿದರು.
ನಗರಸಭಾ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಪೌರಾಯುಕ್ತ ರಾಮದಾಸ್, ಮಡಿಕೇರಿ ತಾಲೂಕು ಕ.ಸಾ.ಪ. ಅಧ್ಯಕ್ಷ ಅಂಬೇಕಲ್ ನವೀನ್ ಕುಶಾಲಪ್ಪ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಗುರುಸ್ವಾಮಿ, ಯುವಜನ ಅಧಿಕಾರಿ ಉಲ್ಲಾಸ್, ಗ್ರೀನ್ ಸಿಟಿ ಫೋರಂನ ಪ್ರಮುಖರಾದ ಚೆಯ್ಯಂಡ ಸತ್ಯ, ಬಡುವಂಡ ಅಪ್ಪಚ್ಚು , ಯುವ ಒಕ್ಕೂಟ ಜಿಲ್ಲಾಧ್ಯಕ್ಷ ಸುಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.