ನಾಪೋಕ್ಲು, ಜೂ. ೩: ಸಮೀಪದ ಪಾರಾಣೆ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ೧೦೫ ವಿದ್ಯಾರ್ಥಿಗಳಿಗೆ ಕಾಂಗ್ರೆಸ್ ಪ್ರಮುಖ ಕದ್ದಣಿಯಂಡ ಹರೀಶ್ ಬೋಪಣ್ಣ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಿದರು.

ನಂತರ ಮಾತನಾಡಿದ ಅವರು, ಶಿಕ್ಷಣದಿಂದ ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಬಹುದು. ಎಲ್ಲಾ ವಿದ್ಯಾರ್ಥಿಗಳು ಏಕಾಗ್ರತೆಯಿಂದ ವಿದ್ಯೆ ಪಡೆಯಬೇಕು ಎಂದರು. ಈ ಸಂದರ್ಭ ಮುಖ್ಯ ಶಿಕ್ಷಕಿ ರಜನಿ, ಮಾಜಿ ಪಂಚಾಯಿತಿ ಸದಸ್ಯ ಬಲ್ಯಾಟಂಡ ಕುಟ್ಟಯ್ಯ, ಚೋಕಂಡ ಸಂಜು, ಶಿಕ್ಷಕ ವೃಂದ ಪಾಲ್ಗೊಂಡಿದ್ದರು. ಶಿಕ್ಷಕ ತಿಪ್ಪೇಸ್ವಾಮಿ ಸ್ವಾಗತಿಸಿದರು. ಶಿಕ್ಷಕ ಬೈರ ವಂದಿಸಿದರು.