ವೀರಾಜಪೇಟೆ, ಜೂ. ೪: ಗ್ರಾಮಲೆಕ್ಕಿಗ ಸರ್ಕಾರಿ ಕಡತಗಳನ್ನು sಸಮರ್ಪಕವಾಗಿ ವಿಲೇವಾರಿ ಮಾಡದೆ ಬೆೆÃಜವಾಬ್ದಾರಿಯಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿರುವ ಗ್ರಾಮಸ್ಥರು ವರ್ಗಾವಣೆಗೆ ಒತ್ತಾಯಿಸಿದ್ದಾರೆ.
ವೀರಾಜಪೇಟೆ ತಾಲೂಕು ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿ ರುವ ಗ್ರಾಮಲೆಕ್ಕಿಗ ಸುಧೀರ್ ಲಾಮಣಿ ವರ್ಗಾವಣೆಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕೆದಮುಳ್ಳೂರು ಗ್ರಾಮಸ್ಥರು ಗ್ರಾಮಲೆಕ್ಕಿಗ ಕಡತಗಳನ್ನು ವಿಲೇವಾರಿ ಮಾಡಲು ವಿಳಂಬಧೋರಣೆ ಹಾಗೂ ಗ್ರಾಮಸ್ಥರೊಂದಿಗೆ ಅನುಚಿತ ವರ್ತನೆ ಮಾಡುತ್ತಿರುವುದಾಗಿ ಆರೋಪಿಸಿ ಸೂಕ್ತ ಕ್ರಮ ಜರುಗಿಸುವಂತೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಪರಿಶೀಲನೆ ಮಾಡಿದ ಶಾಸಕರು ವೀರಾಜಪೇಟೆ ತಹಶೀಲ್ದಾರ್ ಮತ್ತು ಜಿಲ್ಲಾಧಿಕಾರಿಗೆ ದೂರು ಅರ್ಜಿಯನ್ನು ಪರಿಶೀಲನೆ ಮಾಡುವಂತೆ ಸೂಚಿಸಿದ್ದರು. ತಹಶೀಲ್ದಾರ್ ಕಾರ್ಯಾಲಯದಿಂದ ಕದೆಮುಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಸೇರಿದಂತೆ ಒಟ್ಟು ೨೭ ಮಂದಿಗೆ ವಿಚಾರಣಾ ನೋಟೀಸ್ ಜಾರಿ ಮಾಡಿದ್ದರು. ವಿಚಾರಣೆಗೆ ತಾ. ೩ ರಂದು ್ಲ ಹಾಜರಾಗುವಂತೆ ನೋಟೀಸಿನಲ್ಲಿ ಉಲ್ಲೇಖಿಸಲಾಗಿತ್ತು. ತಹಶೀಲ್ದಾರ್ ಅವರು ಸರ್ಕಾರಿ ಕಾರ್ಯನಿಮಿತ್ತ ಇಲ್ಲದ ಹಿನ್ನೆಲೆ ಪ್ರಕ್ರಿಯೆ ನಡೆದಿಲ್ಲ.
ಕೆದಮುಳ್ಳೂರು ಗ್ರಾ.ಪಂ. ಅಧ್ಯಕ್ಷೆ ನಡಿಕೇರಿಯಂಡ ಶೀಲಾ ಮೇದಪ್ಪ, ಮಾಜಿ ಎ.ಪಿ.ಎಂ.ಸಿ. ಸದಸ್ಯ ಮಾಳೇಟಿರ ಬೋಪಣ್ಣ, ಕೆದಮುಳ್ಳೂರು ಗ್ರಾಮ ಪಂಚಾಯಿತಿ ಸದಸ್ಯ ಮಾಳೇಟೀರ ಪ್ರಶಾಂತ್ ಉತ್ತಪ್ಪ, ಶಕ್ತಿ ಕೇಂದ್ರದ ಅಧ್ಯಕ್ಷ ಚಂಗಚAಡ ರತ್ನ ಅಯ್ಯಣ್ಣ ಗ್ರಾಮ ಲೆಕ್ಕಿಗನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ.