ಸುಂಟಿಕೊಪ್ಪ, ಜೂ. ೪: ಅಸ್ಸಾಂ ಮೂಲದ ತಾಯಿ ಮಗಳು ಕಾಫಿ ತೋಟವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಮೃತ ದೇಹ ದೊರೆತಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಮ್ಮೆಗುಂಡಿ ರಾಕೇಶ್ ಎಂಬವರಿಗೆ ಸೇರಿದ ಕಾಫಿ ತೋಟದಲ್ಲಿ ಅಸ್ಸಾಂ ಮೂಲದ ತಾಯಿ ಹಾಗೂ ಮಗಳು ಅಂದಾಜು ೨ ದಿನಗಳ ಹಿಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತ ದೇಹಗಳು ಪತ್ತೆಯಾಗಿದೆ. ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸ್ಥಳಕ್ಕೆ ತೆರಳಿ ಮಹಜರು ನಡೆಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.