ಮಡಿಕೇರಿ ಜೂ. ೪: ಸಂವಿಧಾನ ಪರಮಾರ್ಶೆ ಆಯೋಗ ವರದಿಯನ್ವಯ ಕೊಡವ ಭೂರಾಜಕೀಯ ಸ್ವಾಯತ್ತತೆ ಕಲ್ಪಿಸಬೇಕು ಮತ್ತು ಸಂವಿಧಾನದ ೩೩೮ ನೇ ವಿಧಿಯನ್ನು ಆವಾಹಿಸಲು ರಾಷ್ಟಿçÃಯ ಬುಡಕಟ್ಟು ಆಯೋಗಕ್ಕೆ ನಿರ್ದೇಶಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ತಾ. ೬ ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸುವುದಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು. ನಾಚಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬೆಳಿಗ್ಗೆ ೧೦.೩೦ ಗಂಟೆಗೆ ಶಾಂತಿಯುತ ಧರಣಿಯನ್ನು ನಡೆಸಿ ಜಿಲ್ಲಾಡಳಿತದ ಮೂಲಕ ಯುಜಿಒಐ ಹಾಗೂ ಜಿಒಕೆಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.
ಕೊಡವ ಭೂರಾಜಕೀಯ ಸ್ವಾಯತ್ತತೆ ಕಲ್ಪಿಸಬೇಕು, ಕೊಡವ ಜನಾಂಗಕ್ಕೆ ಎಸ್‌ಟಿ ಟ್ಯಾಗ್ ನೀಡಬೇಕು, ಕೊಡವ "ಜನಾಂಗೀಯ ಸಂಸ್ಕಾರ ಗನ್" ನ್ನು ಸಂವಿಧಾನದ ೨೫ ಮತ್ತು ೨೬ ನೇ ವಿಧಿಗಳಲ್ಲಿ ಅಳವಡಿಸಬೇಕು. ಈ ನಿಟ್ಟಿನಲ್ಲಿ ಸಂವಿಧಾನ ತಿದ್ದುಪಡಿಗೆ ಮುಂದಾಗಬೇಕೆAದು ಸಿಎನ್‌ಸಿ ಒತ್ತಾಯಿಸಲಿದೆ ಎಂದು ನಾಚಪ್ಪ ತಿಳಿಸಿದ್ದಾರೆ.