ಕೂಡಿಗೆ, ಜೂ. ೪: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿರುವ ಪೈಸಾರಿ ಜಾಗದಲ್ಲಿ ಸರಕಾರದ ಹೊಸ ಯೋಜನೆಯಾದ ಗ್ರಾಮ ಪಂಚಾಯಿತಿಗೊAದು ಶ್ರೀ ಶಕ್ತಿ ಭವನ ನಿರ್ಮಾಣಕ್ಕೆ ಯೋಜನೆ ರೂಪುಗೊಂಡಿರುವ ಹಿನ್ನೆಲೆಯಲ್ಲಿ ಕೂಡಿಗೆ ಗ್ರಾಮ ಪಂಚಾಯಿತಿ ವತಿಯಿಂದ ಭುವನಗಿರಿ ಗ್ರಾಮದಲ್ಲಿ ಭವನ ನಿರ್ಮಾಣಕ್ಕೆ ಜಾಗವನ್ನು ಗುರುತಿಸಲಾಗಿದೆ.

ಸರಕಾರ ಜಿಲ್ಲಾ ಪಂಚಾಯತಿ ವತಿಯಿಂದ ಆಯಾ ಗ್ರಾಮ ಪಂಚಾಯಿತಿಗಳ ಪೈಸಾರಿ ಜಾಗವನ್ನು ಗುರುತಿಸಿ ಅದರ ದಾಖಲೆಗಳನ್ನು ಸರಿಪಡಿಸಿಕೊಂಡರೆ ಜಿಲ್ಲಾ ಪಂಚಾಯಿತಿಯಿAದ ೧೩ ಲಕ್ಷ ಕ್ಕೂ ಹೆಚ್ಚು ವೆಚ್ಚದ ಕಟ್ಟಡ ನಿರ್ಮಾಣಕ್ಕೆ ಹಣವನ್ನು ನೀಡುತ್ತಿರುವ ಹಿನ್ನೆಲೆಯಲ್ಲಿ ಕೂಡಿಗೆ ಗ್ರಾಮ ಪಂಚಾಯಿತಿಯ ಆಡಳಿತ ಮಂಡಳಿಯ ತೀರ್ಮಾನದಂತೆ ಭುವನಗಿರಿ ಗ್ರಾಮದಲ್ಲಿ ಜಾಗವನ್ನು ಗುರುತಿಸಿ ತಡೆಗೋಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲು ಸದಸ್ಯರ ಒಪ್ಪಿಗೆಯನ್ನು ಪಡೆಯಲಾಗಿದೆ.