ಮಡಿಕೇರಿ, ಜೂ. ೪: ಮನುಷ್ಯನಿಗೆ ಎಲ್ಲದಕ್ಕಿಂತಲೂ ಮಿಗಿಲಾಗಿ ಆರೋಗ್ಯ ಬಹುಮುಖ್ಯವಾಗಿದ್ದು, ಪ್ರತಿಯೊಬ್ಬರೂ ತಮ್ಮ ಆರೋಗ್ಯ ರಕ್ಷಣೆಯ ಬಗ್ಗೆ ಗಮನಹರಿಸಬೇಕೆಂದು ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಜಿ. ರಾಜೇಂದ್ರ ಅವರು ಸಲಹೆ ನೀಡಿದರು.
ನಗರದ ಎಸ್.ಎಸ್. ಆಸ್ಪತ್ರೆ ಹಾಗೂ ಆರ್.ಕೆ. ಲ್ಯಾಬೊರೇಟರಿಯ ಮೊದಲ ವಾರ್ಷಿಕೋತ್ಸವದ ಅಂಗ ವಾಗಿ ಪತ್ರಕರ್ತರಿಗಾಗಿ ಆಯೋಜಿಸ ಲಾಗಿದ್ದ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯಾವುದೇ ಸಂಸ್ಥೆ ಯಾದರೂ ಸೇವಾ ಮನೋಭಾವ ಅಳವಡಿಸಿಕೊಂಡರೆ ಮಾತ್ರ ಬೆಳವಣಿಗೆ ಸಾಧಿಸುತ್ತದೆ ಎಂದು ಅಭಿಪ್ರಾಯಪಟ್ಟ ಅವರು, ವೈದ್ಯರುಗಳು ರೋಗಿಗಳಿಗೆ ಆತ್ಮಸ್ಥೆöÊರ್ಯ ತುಂಬುವ ಕೆಲಸ ಮಾಡಬೇಕೆಂದು ಕಿವಿಮಾತು ಹೇಳಿದರು.
ಅತಿಥಿಯಾಗಿ ಪಾಲ್ಗೊಂಡಿದ್ದ ಅಪರ ಜಿಲ್ಲಾಧಿಕಾರಿ ನಂಜುAಡೇಗೌಡ ಅವರು ಮಾತನಾಡಿ, ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಆರೋಗ್ಯ ಸಂರಕ್ಷಣೆಯ ನಿಯಮಗಳು ಪಾಲಿಸುವಂತಾಗಬೇಕು ಎಂದು ಹೇಳಿದರು.
ನಗರಸಭೆಯ ಮಾಜಿ ಅಧ್ಯಕ್ಷ ಹೆಚ್.ಎಂ. ನಂದಕುಮಾರ್ ಮಾತನಾಡಿ, ಆಸ್ಪತ್ರೆಗಳೆಂದರೆ ಹಣ ಸಂಪಾದಿಸುವ ಕೇಂದ್ರಗಳು ಎಂಬ ಭಾವನೆ ಜನವಲಯದಲ್ಲಿದ್ದು, ಆ ಸಾಧಿಸುತ್ತದೆ ಎಂದು ಅಭಿಪ್ರಾಯಪಟ್ಟ ಅವರು, ವೈದ್ಯರುಗಳು ರೋಗಿಗಳಿಗೆ ಆತ್ಮಸ್ಥೆöÊರ್ಯ ತುಂಬುವ ಕೆಲಸ ಮಾಡಬೇಕೆಂದು ಕಿವಿಮಾತು ಹೇಳಿದರು.
ಅತಿಥಿಯಾಗಿ ಪಾಲ್ಗೊಂಡಿದ್ದ ಅಪರ ಜಿಲ್ಲಾಧಿಕಾರಿ ನಂಜುAಡೇಗೌಡ ಅವರು ಮಾತನಾಡಿ, ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಆರೋಗ್ಯ ಸಂರಕ್ಷಣೆಯ ನಿಯಮಗಳು ಪಾಲಿಸುವಂತಾಗಬೇಕು ಎಂದು ಹೇಳಿದರು.
ನಗರಸಭೆಯ ಮಾಜಿ ಅಧ್ಯಕ್ಷ ಹೆಚ್.ಎಂ. ನಂದಕುಮಾರ್ ಮಾತನಾಡಿ, ಆಸ್ಪತ್ರೆಗಳೆಂದರೆ ಹಣ ಸಂಪಾದಿಸುವ ಕೇಂದ್ರಗಳು ಎಂಬ ಭಾವನೆ ಜನವಲಯದಲ್ಲಿದ್ದು, ಆ ಭಾವನೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಆರೋಗ್ಯ ಕೇಂದ್ರಗಳು ಜನತೆಗೆ ಉತ್ತಮ ಆರೋಗ್ಯ ಸೇವೆ ನೀಡುವಂತಾಗಬೇಕು ಎಂದು ಸಲಹೆಯಿತ್ತರು. ಕ್ರೆಸೆಂಟ್ ಶಾಲೆಯ ಪ್ರಧಾನ ಕಾರ್ಯದರ್ಶಿ ಹನೀಫ್ ಅವರು ಮಾತನಾಡಿ, ಪ್ರತಿಯೊಬ್ಬರು ಬದುಕಿನಲ್ಲಿ ತಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಬೇಕು. ಮನುಷ್ಯತ್ವಕ್ಕೆ ಬೆಲೆ ನೀಡಬೇಕೆಂದು ಕಿವಿಮಾತು ಹೇಳಿದರು.
ಮೆಡಿಕಲ್ ಕಾಲೇಜಿನ ಡೀನ್ ಕಳ್ಳಿಚಂಡ ಕಾರ್ಯಪ್ಪ ಅವರು ಶಿಬಿರಕ್ಕೆ ಶುಭ ಹಾರೈಸಿದರು. ಹಂಸ ಉಪಸ್ಥಿತರಿದ್ದರು. ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸತೀಶ್ ನಿರೂಪಿಸಿ, ಡಾ. ಶಿಲ್ಪ ವಂದಿಸಿದರು.