ಮಡಿಕೇರಿ, ಜೂ. ೫: ವಿಶ್ವ ಪರಿಸರ ದಿನಾಚರಣೆ ಮತ್ತು ರಾಷ್ಟಿçÃಯ ಪೋಷಣ್ ಅಭಿಯಾನದ ಭಾಗವಾಗಿ ಕೊಡಗು ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ೧೦೪ ಗ್ರಾ.ಪಂ.ಗಳ ಅಂಗನವಾಡಿಗಳಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ತಿಳಿಸಿದರು. ಭಾನುವಾರ ಕೆ.ನಿಡುಗಣೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಸಿ ನೆಡುವ ಮೂಲಕ ವಿಶ್ವಪರಿಸರ ದಿನಾಚರಣೆ ಆಚರಿಸಿ, ಅಭಿಯಾನದ ಕುರಿತು ಮಾತನಾಡಿದ ಅವರು, ಅಂಗನವಾಡಿಗಳಲ್ಲಿ ವ್ಯವಸ್ಥಿತ ರೀತಿಯಲ್ಲಿ ಸಸಿಗಳನ್ನು ಈ ದಿನ ನೆಡಲಾಗಿದೆ ಎಂದರು.
ಸಾಮಾಜಿಕ ಅರಣ್ಯ ಮತ್ತು ತೋಟಗಾರಿಕಾ ಇಲಾಖಾ ವ್ಯಾಪ್ತಿಯ ನರ್ಸರಿಗಳಿಂದ ಉತ್ತಮ ಗುಣಮಟ್ಟದ ಸಸಿಗಳನ್ನು ಗ್ರಾಮ ಪಂಚಾಯತ್‌ಗಳಿಗೆ ನೀಡಲಾಗಿದೆ.