ಒಡಿಶಾದಲ್ಲಿ ಹೊಸ ಸಚಿವ ಸಂಪುಟ

ಭುವನೇಶ್ವರ, ಜೂ. ೫: ಮಹತ್ವದ ಬೆಳವಣಿಗೆಯಲ್ಲಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಶನಿವಾರ ತಮ್ಮ ಸಚಿವ ಸಂಪುಟದ ಎಲ್ಲ ೨೦ ಸಚಿವರ ರಾಜೀನಾಮೆ ಪಡೆದ ಒಂದು ದಿನದ ನಂತರ ಹೊಸ ಸಂಪುಟ ಅಸ್ತಿತ್ವಕ್ಕೆ ತಂದು ಭಾನುವಾರ ೧೩ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇಂದು ಭುವನೇಶ್ವರದ ಲೋಕಸೇವಾ ಭವನದ ನೂತನ ಸಮಾವೇಶ ಕೇಂದ್ರದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಡಿ ಶಾಸಕರಾದ ಜಗನ್ನಾಥ್ ಸರಕಾ, ನಿರಂಜನ್ ಪೂಜಾರಿ ಮತ್ತು ಆರ್.ಪಿ. ಸ್ವೆöÊನ್ ಸೇರಿದಂತೆ ೧೩ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಗಣೇಶಿ ಲಾಲ್ ಅವರು ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ನವೀನ್ ಪಟ್ನಾಯಕ್ ಅವರು ಮೂವರು ಮಹಿಳಾ ಶಾಸಕ ರಾದ ಪ್ರಮೀಳಾ ಮಲ್ಲಿಕ್, ಉಷಾದೇವಿ ಮತ್ತು ತುಕುನಿ ಸಾಹು ಅವರನ್ನು ಇಂದು ತಮ್ಮ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. ಬಿಜೆಡಿಯ ಮೂಲಗಳ ಪ್ರಕಾರ, ಸರಕಾ ಒಬ್ಬ ಹೆಸರಾಂತ ಬುಡಕಟ್ಟು ನಾಯಕರಾಗಿದ್ದು ಅವರು ಭಗವಾನ್ ಜಗನ್ನಾಥನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಮೊದಲ ವ್ಯಕ್ತಿಯಾಗಿದ್ದಾರೆ. ಆದರೆ ರಾಜೀನಾಮೆಗೆ ಯಾವುದೇ ಕಾರಣವನ್ನು ಉಲ್ಲೇಖಿಸ ಲಿಲ್ಲ. ೨೦೨೪ರ ಚುನಾವಣೆಗೆ ಪಕ್ಷ ಬಲಪಡಿಸಲು ಪಟ್ನಾಯಕ್ ಈ ‘ಕಾಮರಾಜ್ ಸೂತ್ರ’ ಅನುಸರಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

೧೨ ಮಂದಿಗೆ ಓಮಿಕ್ರಾನ್ ರೂಪಾಂತರಿ ಪತ್ತೆ

ಚೆನ್ನೆöÊ, ಜೂ. ೫: ತಮಿಳುನಾಡಿನಲ್ಲಿ ಸಂಗ್ರಹಿಸಿದ ಕೋವಿಡ್ ಮಾದರಿಗಳಲ್ಲಿ ೧೨ ಮಂದಿಗೆ ಓಮಿಕ್ರಾನ್ ಉಪತಳಿಯ ಹೊಸ ರೂಪಾಂತರಿಗಳಾದ ಬಿಎ೪ ಮತ್ತು ಬಿಎ೫ ಪತ್ತೆಯಾಗಿದ್ದು, ಹೈದರಾಬಾದ್‌ನ ಲ್ಯಾಬ್‌ನ ಅವರ ಫಲಿತಾಂಶ ಪಾಸಿಟಿವ್ ಬಂದಿದೆ ಎಂದು ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಅವರು ತಿಳಿಸಿದ್ದಾರೆ. ಹೈದರಾಬಾದ್‌ನ ಲ್ಯಾಬ್‌ಗೆ ಕಳುಹಿಸಲಾಗಿದ್ದ ೧೫೦ ಮಾದರಿಗಳ ಪೈಕಿ ೧೨ ಮಾದರಿಗಳಲ್ಲಿ ಹೊಸ ಕೊರೊನಾ ವೈರಸ್ ರೂಪಾಂತರಿ ಉಪಸ್ಥಿತಿಯನ್ನು ದೃಢಪಡಿಸಿದೆ ಎಂದು ವೈದ್ಯಕೀಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹೇಳಿದ್ದಾರೆ. ನಾಲ್ವರಿಗೆ ಬಿಎ ೪ ರೂಪಾಂತರಿ ಹಾಗೂ ಎಂಟು ಜನರಿಗೆ ಬಿಎ ೫ ರೂಪಾಂತರ ದೃಢಪಟ್ಟಿದೆ. ಅವರೆಲ್ಲರನ್ನು ಪ್ರತ್ಯೇಕಿಸಲಾಗಿದೆ. ನಾವು ಈ ೧೨ ಜನರನ್ನು ಸೂಕ್ಷö್ಮವಾಗಿ ಗಮನಿಸುತ್ತಿದ್ದೇವೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿರುವವರ ಸಂಪರ್ಕಕ್ಕೆ ಬಂದ ದ್ವಿತೀಯ ಸಂಪರ್ಕಿತರನ್ನು ಗುರುತಿಸಲಾಗಿದ್ದು, ಆರೋಗ್ಯಾಧಿಕಾರಿಗಳು ನಿಗಾ ವಹಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಗೆಲುವಿನಲ್ಲಿ ಯಾವುದೇ ಅನುಮಾನವಿಲ್ಲ - ಅರುಣ್ ಸಿಂಗ್

ಬೆAಗಳೂರು, ಜೂ. ೫: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿಯ ಎಲ್ಲ ಮೂವರು ಅಭ್ಯರ್ಥಿಗಳು ಆಯ್ಕೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಬಿಜೆಪಿ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಆದ್ಯತೆ ಕೊಟ್ಟಿದೆ. ಕೇಂದ್ರ ಸರ್ಕಾರ ಹಾಗೂ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಮಾಡಿರುವ ಉತ್ತಮ ಕಾರ್ಯಗಳನ್ನು ಗಮನದಲ್ಲಿಟ್ಟುಕೊಂಡು ಶಾಸಕರು ಬಿಜೆಪಿ ಪರವಾಗಿ ಮತ ಚಲಾಯಿಸಲಿದ್ದಾರೆ ಎಂದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ೮ ವರ್ಷಗಳನ್ನು ಪೂರೈಸಿದೆ. ಬಡವರು, ರೈತರು, ಶೋಷಿತರು ಮತ್ತು ದಲಿತರು ಸೇರಿದಂತೆ ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ಕೆಲಸ ಮಾಡಿದೆ ಎಂದು ಅವರು ತಿಳಿಸಿದರು.

ಜಮ್ಮು ಕಾಶ್ಮೀರದಲ್ಲಿ ಉಗ್ರನ ಬಂಧನ

ಜಮ್ಮು-ಕಾಶ್ಮೀರ, ಜೂ. ೫: ಜಮ್ಮು-ಕಾಶ್ಮೀರದ ಕಿಶ್ತಾ÷್ವರ್ ಜಿಲ್ಲೆಯಲ್ಲಿ ಕಳೆದ ಆರು ವರ್ಷಗಳಿಂದ ಉಗ್ರ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರನೊಬ್ಬನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಪೊಲೀಸರು, ರಾಷ್ಟಿçÃಯ ರೈಫಲ್ಸ್ ಮತ್ತು ಸಿಆರ್‌ಪಿಎಫ್ ಜಂಟಿ ಕಾರ್ಯಾಚರಣೆಯಲ್ಲಿ ನಾಗಸೇನಿ ತಹಸಿಲ್‌ನ ರಾಶ್‌ಗ್ವಾರಿ ನಿವಾಸಿ ತಾಲಿಬ್ ಹುಸೇನ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಈ ಉಗ್ರನ ಬಂಧನವು ಹಿಜ್ಬುಲ್ ಮುಜಾಹಿದ್ದೀನ್ ಮತ್ತು ಜಿಲ್ಲೆಯಲ್ಲಿ ಭಯೋತ್ಪಾ ದನೆಯನ್ನು ಪುನರುಜ್ಜೀವನಗೊಳಿಸುವ ಅದರ ಯೋಜನೆಗೆ ದೊಡ್ಡ ಹೊಡೆತ ಎಂದು ಹೇಳಿದ ಅಧಿಕಾರಿ, ೨೦೧೬ ರಲ್ಲಿ ಉಗ್ರಗಾಮಿ ಸಂಘಟನೆ ಸೇರಿದ ಉಗ್ರ, ಯುವಕರನ್ನು ನಿಷೇಧಿತ ಗುಂಪಿಗೆ ಸೇರಿಸುವ ಮೂಲಕ ಭಯೋತ್ಪಾದನಾ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ ಎಂದು ಹೇಳಿದರು. ಉಗ್ರನ ವಿರುದ್ಧ ಕಿಶ್ತಾ÷್ವರ್ ಪೊಲೀಸ್ ಠಾಣೆಯಲ್ಲಿ ಕಾನೂನಿನ ಸಂಬAಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಗೌರಿ ಹತ್ಯೆ ಪ್ರಕರಣದ ವಿಚಾರಣೆ

ಬೆಂಗಳೂರು, ಜೂ. ೫: ಸಾಮಾಜಿಕ ಹೋರಾಟಗಾರ್ತಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಸಾಕ್ಷಿದಾರರ ಪಟ್ಟಿಯನ್ನು ಬೆಂಗಳೂರು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸಲ್ಲಿಸಿದ್ದಾರೆ. ಆರೋಪಿ ಪರ ವಕೀಲರು, ತನಿಖೆಯ ಭಾಗವಾಗಿರುವ ಎಲೆಕ್ಟಾçನಿಕ್ ಸಾಕ್ಷö್ಯಗಳ ಪಟ್ಟಿಯನ್ನು ಮನವಿ ಮಾಡಿದರು. ಅರ್ಜಿಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸುವಂತೆ ಹೇಳಿ ನ್ಯಾಯಾಲಯ ಜೂನ್ ೬ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಜುಲೈ ೪ ರಿಂದ ಜುಲೈ ೮ ರವರೆಗೆ ಮತ್ತು ಪ್ರತಿ ತಿಂಗಳು ಒಂದು ವಾರದವರೆಗೆ ವಿಚಾರಣೆ ನಡೆಯಲಿದೆ. ಗೌರಿ ಲಂಕೇಶ್ ಅವರನ್ನು ಸೆಪ್ಟೆಂಬರ್ ೫, ೨೦೧೭ ರಂದು ನಗರದ ರಾಜರಾಜೇಶ್ವರಿ ನಗರದಲ್ಲಿನ ಅವರ ನಿವಾಸದ ಹೊರಗೆ ಹತ್ಯೆ ಮಾಡಲಾಗಿತ್ತು.

ಕಂಟೈನರ್ ಡಿಪೋದಲ್ಲಿ ಅಗ್ನಿ ಅವಘಡ

ಢಾಕಾ, ಜೂ. ೫: ಆಗ್ನೇಯ ಬಾಂಗ್ಲಾದೇಶದ ಕಂಟೈನರ್ ಡಿಪೋದಲ್ಲಿ ಆಕಸ್ಮಿಕವಾಗಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ ೨೫ ಮಂದಿ ಸಾವನ್ನಪ್ಪಿ, ೪೫೦ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ. ದೇಶದ ಪ್ರಮುಖ ಬಂದರು ಚಿತ್ತಗಾಂಗ್‌ನ ಹೊರಗೆ ೪೦ ಕಿಲೋಮೀಟರ್ (೨೫ ಮೈಲಿ) ದೂರದಲ್ಲಿರುವ ದೇಶೀಯ ಕಂಟೇನರ್ ಸಂಗ್ರಹಣಾ ಘಟಕದಲ್ಲಿ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಯೂ ಲಘುವಾಗಿ ಗಾಯಗೊಂಡಿದ್ದಾರೆAದು ತಿಳಿದುಬಂದಿದೆ. ಅಪಘಾತದಲ್ಲಿ ೨೫ ಮಂದಿ ಸಾವನ್ನಪ್ಪಿದ್ದು, ೪೫೦ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಾಳುಗಳಲ್ಲಿ ೨೦ ಮಂದಿ ಸ್ಥಿತಿ ಗಂಭೀರವಾಗಿದ್ದು, ಶೇ. ೬೦-೯೦ ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ.

ರಾಜ್ಯದಲ್ಲಿ ಪ್ರತಿ ೩ನೇ ಶನಿವಾರ ವಿದ್ಯುತ್ ಅದಾಲತ್

ಬೆಂಗಳೂರು, ಜೂ. ೫: ರಾಜ್ಯದಲ್ಲಿ ಪ್ರತಿ ೩ನೇ ಶನಿವಾರ ವಿದ್ಯುತ್ ಅದಾಲತ್ ನಡೆಸಬೇಕು ಎಂದು ಇಂಧನ ಸಚಿವ ಸುನೀಲ್ ಕುಮಾರ್ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಈ ಕುರಿತು ಆದೇಶ ನೀಡಿರುವ ಅವರು, ಪ್ರತಿ ತಿಂಗಳ ೩ನೇ ಶನಿವಾರ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಭೇಟಿ ನೀಡಬೇಕು. ವಿದ್ಯುತ್ ಅದಾಲತ್ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್ ಸಮಸ್ಯೆಗಳ ಬಗ್ಗೆ ಅರಿತು, ತಕ್ಷಣ ಪರಿಹಾರ ಮಾಡಲು ಆಂದೋಲನ ರೀತಿಯ ಕಾರ್ಯಕ್ರಮ ರೂಪಿಸಬೇಕು. ಪ್ರತಿ ತಿಂಗಳ ೩ನೇ ಶನಿವಾರ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಭೇಟಿ ನೀಡಬೇಕು. ವಿದ್ಯುತ್ ಅದಾಲತ್ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.