ವೀರಾಜಪೇಟೆ, ಜೂ. ೫: ತಂಬಾಕು ಸೇವನೆಯಿಂದ ಆರೋಗ್ಯಕ್ಕೆ ಹಾನಿಕರ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಶಿಕ್ಷಣದ ಕಡೆಗೆ ಹೆಚ್ಚು ಗಮನ ಹರಿಸುವುದರೊಂದಿಗೆ ಉತ್ತಮ ಪ್ರಜೆಯಾಗಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂತೋಷ್ ಕೊಠಾರಿ ಹೇಳಿದರು.
ತಂಬಾಕು ನಿಷೇಧ ದಿನಾಚರಣೆ ಅಂಗವಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ, ವೀರಾಜಪೇಟೆ ವಕೀಲರ ಸಂಘದ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಕಾನೂನು ಅರಿವು ವೀರಾಜಪೇಟೆ, ಜೂ. ೫: ತಂಬಾಕು ಸೇವನೆಯಿಂದ ಆರೋಗ್ಯಕ್ಕೆ ಹಾನಿಕರ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಶಿಕ್ಷಣದ ಕಡೆಗೆ ಹೆಚ್ಚು ಗಮನ ಹರಿಸುವುದರೊಂದಿಗೆ ಉತ್ತಮ ಪ್ರಜೆಯಾಗಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂತೋಷ್ ಕೊಠಾರಿ ಹೇಳಿದರು.
ತಂಬಾಕು ನಿಷೇಧ ದಿನಾಚರಣೆ ಅಂಗವಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ, ವೀರಾಜಪೇಟೆ ವಕೀಲರ ಸಂಘದ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಎಂದು ಕಷ್ಟ ಪಟ್ಟು ಶಾಲೆಗೆ ಕಳುಹಿಸು ತ್ತಾರೆ ಅದನ್ನು ವಿದ್ಯಾರ್ಥಿಗಳು ಅರಿತುಕೊಂಡು ಉತ್ತಮ ಸಮಾಜ ಕಟ್ಟಲು ಮುಂದಾಗಬೇಕೆAದು ಅವರು ಕಿವಿಮಾತು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬಿಳಗಿ ಮಾತನಾಡಿ, ತಂಬಾಕು ಸೇವನೆಯಿಂದ ಕ್ಯಾನ್ಸರ್ ರೋಗ ಕಾಣಿಸುವುದರಿಂದ ತಂಬಾಕು ಸೇವನೆ ಮಾಡಬಾರದೆಂದು ಯುವ ಜನಾಂಗ ದೃಡ ಸಂಕಲ್ಪ ಮಾಡಬೇಕು ಎಂದರು.
ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಬಿ.ಇ. ಪ್ರತಿಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳು ತಂಬಾಕು ಸೇವನೆ ಬಗ್ಗೆ ಎಚ್ಚರದಿಂದ ದೂರ ಇರಬೇಕು ಎಂದರು. ವಕೀಲ ವಿ.ದರ್ಶನ್ ಕುಮಾರ್ ತಮ್ಮ ಉಪನ್ಯಾಸದಲ್ಲಿ ತಂಬಾಕು ದೂಮಪಾನದಿಂದ ಕ್ಯಾನ್ಸರ್ ರೋಗ ಹರಡುವ ಸಾಧ್ಯತೆ ಇರುವುದರಿಂದ ತಂಬಾಕು ನಿಷೇಧ ಮಾಡಬೇಕು ಎಂದರು. ವಕೀಲರ ಸಂಘದ ಕಾರ್ಯದರ್ಶಿ ಎಂ.ಕೆ. ದಿನೇಶ್ ಶಿಕ್ಷಕರಾದ ಅನಿತಾ ನರೋನಾ, ರಂಜನಿ, ನಸೀಮಾ ಇದ್ದರು.