ಗೋಣಿಕೊಪ್ಪಲು, ಜೂ. ೫: ವೀರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳ (ರಿob ಜಡಿive) ಬಹಳ ಯಶಸ್ವಿಯಾಗಿ ನಡೆಯಿತು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವೀರಾಜಪೇಟೆಯ ಆಂತರಿಕ ಗುಣಮಟ್ಟ ಭರವಸಾಕೋಶ ಹಾಗೂ ಉದ್ಯೋಗ ಕೋಶ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಎob ಆಡಿive ಉದ್ಯೋಗ ಮೇಳವು ಇದಾಗಿತ್ತು.
ಉದ್ಯೋಗಮೇಳವನ್ನು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಿ ಮಾತನಾಡಿ ಪ್ರಸ್ತುತ ಜಗತ್ತಿನಲ್ಲಿ ಉದ್ಯೋಗ ಎಂಬುದು ಲಿಂಗ ಬೇಧ ವಿಲ್ಲದೆ ಅನಿವಾರ್ಯವಾಗಿದೆ.
ಶಿಕ್ಷಣ ಸಂಸ್ಥೆಗಳು ಶಿಕ್ಷಣ ನೀಡುವುದರೊಂದಿಗೆ ಉದ್ಯೋಗ ಖಾತ್ರಿ ಮಾಡುತ್ತಿರುವುದು ಶ್ಲಾಘನೀಯ. ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು, ಇದರಿಂದಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲ ಕಲ್ಪಿಸಿದಂತಾಗಲಿದೆ ಎಂದು ಶ್ಲಾಘನೆ ವ್ಯಕ್ತ ಪಡಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಣeಛಿhಟಿo ಣಚಿsಞ ಕಂಪೆನಿಯ ವ್ಯವಸ್ಥಾಪಕ ಯತೀಸ್ ಕುಮಾರ್ ಮಾತನಾಡಿ ತಮ್ಮ ಕಂಪೆನಿಯ ಬಗ್ಗೆ ಮಾಹಿತಿ ಒದಗಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ದಯಾನಂದ ಕೆ.ಸಿ ಅಧ್ಯಕ್ಷತೆ ವಹಿಸಿ ಮಾತನಾಡಿ "ಉದ್ಯೋಗಂ ಪುರುಷ ಲಕ್ಷಣಂ" ಎಂಬ ಪರಿಕಲ್ಪನೆ ತುಂಬಾ ಹಳೆಯದಾಗಿದೆ. ಇದೀಗ ಉದ್ಯೋಗ "ಮಾನವ ಲಕ್ಷಣಂ" ಆಗಿದೆ. ಹಾಗಾಗಿ ಮನುಷ್ಯನಾಗಿ ಹುಟ್ಟಿದ ಮೇಲೆ ಪ್ರತಿಯೊಬ್ಬರಿಗೂ ಉದ್ಯೋಗ ಇರಲೇಬೇಕು. ಕಾಲೇಜಿನ ಪ್ರತಿಯೊಬ್ಬ ವಿದ್ಯಾರ್ಥಿಗೂ ಉದ್ಯೋಗ ಖಾತ್ರಿ ಮಾಡಿಕೊಡುವುದು ನಮ್ಮ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳು ಕಾಲೇಜಿನಲ್ಲಿ ನಿರಂತರವಾಗಿ ನಡೆಯಲಿವೆ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಶಶಿ ಸುಬ್ರಮಣಿ, ವಿಷ್ಣು ಕಾಲೇಜಿನ ಐಕ್ಯುಏಸಿ ಸಂಚಾಲಕ ವೇಣುಗೋಪಾಲ್ ಹಾಗೂ ಉದ್ಯೋಗ ಸಮಿತಿಯ ಸಂಚಾಲಕ ನಾಗರಾಜು ಮೂರ್ತಿ ಸೇರಿದಂತೆ ಉಪನ್ಯಾಸಕರು ಹಾಜರಿದ್ದರು.
ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದರು.