ಮಡಿಕೇರಿ, ಜೂ. ೫: ಜಿಲ್ಲಾ ಪಂಚಾಯಿತಿ, ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಸಂಪಾಜೆ, ಉಪಕೇಂದ್ರ ಪೆರಾಜೆ ವತಿಯಿಂದ ಪೆರಾಜೆ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ತಾ. ೮ ರಂದು ಕುಂಬಳಚೇರಿಯ ಪೆರಾಜೆ ಪ್ರಾ.ಕೃ.ಸ. ಸಂಘದ ಸಭಾಭವನದಲ್ಲಿ ಮಧುಮೇಹ, ರಕ್ತದೊತ್ತಡ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ. ಅಂದು ಬೆಳಿಗ್ಗೆ ೧೦ ಗಂಟೆಯಿAದ ಅಪರಾಹ್ನ ೩ ಗಂಟೆವರೆಗೆ ಶಿಬಿರ ನಡೆಯಲಿದೆ ಎಂದು ಪೆರಾಜೆ ಸಮುದಾಯ ಆರೋಗ್ಯ ಅಧಿಕಾರಿ ಸುನಿಲ್ ಅವರು ತಿಳಿಸಿದ್ದಾರೆ.