ಮಡಿಕೇರಿ, ಜೂ. ೫ : ಜಾಗತಿಕ ತಾಪಮಾನಗಳ ವೈಪರೀತ್ಯದಿಂದ ಉಸಿರಾಡಲು ಶುದ್ಧ ಗಾಳಿ ಸಿಗದಂತಹ ಪರಿಸ್ಥಿತಿ ಎದುರಾಗಿದೆ. ಆ ನಿಟ್ಟಿನಲ್ಲಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.ನಗರದ ಗಾಂಧಿ ಮಂಟಪದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ, ಅರಣ್ಯ ಇಲಾಖೆ ಕೊಡಗು ವೃತ್ತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್ ಕೊಡಗು ಜಿಲ್ಲಾ ಘಟಕ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾಮಟ್ಟದ ಪರಿಸರ ಜಾಗೃತಿ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇಂಧನ ಬಳಕೆಯನ್ನು ಮಿತಗೊಳಿಸಿ ಸೈಕಲ್ ಬಳಕೆಯೂ ಪರಿಸರ ಸ್ನೇಹಿಯಾಗಿದೆ, ಇದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಪರಿಸರವನ್ನು ಕೂಡ ರಕ್ಷಿಸಬಹುದು. ಇರುವುದೊಂದು ಭೂಮಿ ಅದನ್ನು ಉಳಿಸಿ ಸಂರಕ್ಷಿಸುವುದು ನಮ್ಮೆಲ್ಲರ ಹೊಣೆ ಎಂದು ಶಾಸಕರು ಹೇಳಿದರು.

ನಗರದ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಗಿಡಗಳನ್ನು ನೆಟ್ಟು ಮಾತನಾಡಿದ ಪಶ್ಚಿಮ ಘಟ್ಟಗಳ ಸಂರಕ್ಷಣೆ ಕಾರ್ಯಪಡೆಯ ಅಧ್ಯಕ್ಷ ರವಿಕುಶಾಲಪ್ಪ ಅವರು ಪರಿಸರ ದಿನ ಒಂದು ದಿನದ ಕಾರ್ಯಕ್ರಮವಾಗ ಬಾರದು, ಪರಿಸರವಿಲ್ಲದೆ ಮನುಷ್ಯ ಜೀವಿಸುವುದು ಕಷ್ಟಕರ, ಮನುಷ್ಯನ ಜೀವನದಲ್ಲಿ ಪರಿಸರವೂ ಬಹು ಮುಖ್ಯ ಪಾತ್ರ ವಹಿಸಿದೆ ಎಂದರು. ಕೇವಲ ಪಶ್ಚಿಮ ಘಟ್ಟಗಳು ಮಾತ್ರವಲ್ಲದೇ ರಾಜ್ಯದ ಎಲ್ಲಾ ಕಡೆ ಪರಿಸರವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಾಗಿದೆ ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ ಅವರು ಮಾತನಾಡಿ ವಿಶ್ವ ಪರಿಸರ ದಿನದ ಅಂಗವಾಗಿ

(ಮೊದಲ ಪುಟದಿಂದ) ಗಿಡ ನೆಡುವುದರ ಮೂಲಕ ಪರಿಸರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಜಿಲ್ಲಾಡಳಿತ ವತಿಯಿಂದ ಮಾಡಲಾಗಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಸರ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತದೆ ಅವರು ಹೇಳಿದರು.

ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್. ಮೂರ್ತಿ ಅವರು ಮಾತನಾಡಿ ಪರಿಸರ ಕಾಳಜಿ ಮೂಡಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇರುವುದೊಂದೇ ಭೂಮಿ ಈ ಭೂಮಿಯನ್ನು ಸಂರಕ್ಷಿಸುವ ಕೆಲಸವಾಗಬೇಕು ಹಾಗೂ ಅರಣ್ಯಪ್ರದೇಶವನ್ನು ಕೂಡ ನಾವು ಸಂರಕ್ಷಿಸಬೇಕು ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಬೀಜ ಬಿತ್ತುವ ಬೀಜೋತ್ಸವ ಕಾರ್ಯಕ್ರಮವನ್ನು ಇಂದಿನಿAದ ಜೂನ್ ೧೨ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅನಿತಾ ಎನ್.ಪಿ. ಅವರು ಮಾತನಾಡಿ ನಮ್ಮ ಕೆಲಸ ಕೇವಲ ಮಾತನಾಡುವುದಲ್ಲ ಬದಲು ಅದನ್ನು ಅನುಷ್ಠಾನ ಗೊಳಿಸುವುದಾಗಬೇಕು. ಮನುಷ್ಯನಿಗೆ ಯಾವ ರೀತಿ ಬದುಕುವ ಹಕ್ಕಿದೆಯೋ, ಅದೇ ರೀತಿ ಎಲ್ಲಾ ಜೀವಸಂಕುಲಗಳಿಗೆ ಪರಿಸರದಲ್ಲಿ ಬದುಕುವ ಹಕ್ಕಿದೆ ಎಂದರು.

ಪರಿಸರ ಜಾಗೃತಿ ಜಾಥಾವು ನಗರದ ಪ್ರಮುಖ ಬೀದಿಯಲ್ಲಿ ಸಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸಮಾಪನಗೊಂಡಿತು. ಜಾಥಾದಲ್ಲಿ ‘ಒಂದೇ ಒಂದು ಭೂಮಿ ಇದರ ಸಂರಕ್ಷಣೆ ನಮ್ಮೆಲ್ಲರ ಹೊಣೆ’ ಎಂಬ ಉದ್ಘೋಷಣೆಯೊಂದಿಗೆ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ, ಜೈವಿಕ ಇಂಧನ ಭವಿಷ್ಯದ ಇಂಧನ ಎಂಬಿತ್ಯಾದಿ ಪರಿಸರ ಘೋಷಣೆಯೊಂದಿಗೆ ಜಾಥಾ ಸಾಗಿತು.

ಇದೇ ವೇಳೆಯಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಜಿಲ್ಲಾಮಟ್ಟದಲ್ಲಿ ಏರ್ಪಡಿಸಿದ್ದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೆಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಪೂವಯ್ಯ, ನಗರಸಭೆ ಆಯುಕ್ತ ರಾಮದಾಸ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ-ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಉಮಾಶಂಕರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೆಶಕರಾದ ವೇದಮೂರ್ತಿ ಸ್ಕೌಟ್ ಮತ್ತು ಗೈಡ್ ಮುಖ್ಯ ಆಯುಕ್ತರಾದ ಬೇಬಿ ಮ್ಯಾಥ್ಯು, ಜಿಲ್ಲಾ ಸಂಘಟಕರಾದ ದಮಯಂತಿ, ರಾಷ್ಟಿçÃಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್ ಇತರರು ಇದ್ದರು.

ಮುಳ್ಳೂರು: ಶನಿವಾರಸಂತೆ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಕಾರ್ಯಕರ್ತರು ಮತ್ತು ಪಕ್ಷದ ಪ್ರಮುಖರು ಪಟ್ಟಣದ ಕೆಆರ್‌ಸಿ ವೃತ್ತದಲ್ಲಿ ಶ್ರಮದಾನ ಮಾಡುವ ಮೂಲಕ ಪರಿಸರ ದಿನವನ್ನು ಆಚರಿಸಿದರು.. ನಂತರ ಪಟ್ಟಣದ ತ್ಯಾಗರಾಜ ಕಾಲೋನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದ ಜಾಗದಲ್ಲಿ ಉಪಯುಕ್ತ ಗಿಡಗಳನ್ನು ನೆಟ್ಟರು. ಕಾರ್ಯಕ್ರಮದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಮನುಕುಮಾರ್ ರೈ, ಶಕ್ತಿ ಕೇಂದ್ರದ ಅಧ್ಯಕ್ಷ ಯತೀ±,ï ಬಿ.ಜೆ.ಪಿ ಪ್ರಮುಖರಾದ ಎಸ್.ಎನ್.ರಘು, ಗ್ರಾ.ಪಂ.ಉಪಾಧ್ಯಕ್ಷ ಎಸ್.ಆರ್.ಮಧು, ದುಂಡಳ್ಳಿ ಗ್ರಾ.ಪಂ.ಉಪಾಧ್ಯಕ್ಷ ನಿತಿನ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.ಗಿಡ ನೆಟ್ಟು ಮಗುವಿನ ನಾಮಕರಣ

ಕಾಲೂರು ಗ್ರಾಮದ ಕಾಕೇರ ಮುದ್ದಯ್ಯ ಹಾಗೂ ಪುಷ್ಪ ದಂಪತಿಯ ಮಗುವಿನ ನಾಮಕರಣವನ್ನು ಗಿಡ ನೆಡುವ ಮೂಲಕ ಆಚರಿ¸ Àಲಾಯಿತು. ಹುದುಗೂರು ಗ್ರಾಮದ ಉಮಾಮಹೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಾಮಕರಣ ನಂತರ ಗಿಡ ನೆಟ್ಟು ವಿಶಿಷ್ಟವಾಗಿ ಪರಿಸರ ದಿನ ಆಚರಿಸ ಲಾಯಿತು. ಜೊತೆಗೆ ಮಗುವಿನ ನಾಮಕರಣ ಸಮಾರಂಭಕ್ಕೆ ಬಂದಿದ್ದ ಅತಿಥಿಗಳು ಒಂದೊAದು ಗಿಡ ನೆಟ್ಟು ಪರಿಸರ ದಿನವನ್ನು ವಿಶೇಷವಾಗಿ ಆಚರಿಸಿದರು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ ಎಂ ನೆಹರು, ಪರಿಸರ ಪೂರಕ ಗಿಡಗಳನ್ನು ನೆಡುವ ಮೂಲಕ ಕೇಂದ್ರದ ಆವರಣದಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡುವಂತೆ ಸಲಹೆ ನೀಡಿದರು. ಅರಣ್ಯ ಇಲಾಖೆ ಮೂಲಕ ಈಗಾಗಲೇ ೮೦೦ಕ್ಕೂ ಅಧಿಕ ಗಿಡಗಳನ್ನು ನೆಟ್ಟು ಬೆಳೆಸಲಾಗಿದ್ದು, ಮುಂದಿನ ಜುಲೈ ತಿಂಗಳಲ್ಲಿ ಕೇಂದ್ರದ ಆವರಣದಲ್ಲಿ ಹೆಚ್ಚಿನ ಗಿಡಗಳನ್ನು ನೆಟ್ಟು ಬೆಳೆಸುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪಿ ಸುಬ್ರಮಣ್ಯ ಯಡಪಡಿತ್ತಾಯ ಪರಿಸರ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ಗಿಡ ನೆಟ್ಟು ಸಂರಕ್ಷಣೆ ಮಾಡುವುದು ಅಗತ್ಯವಾಗಿದ್ದು, ಪ್ರತಿ ವಿದ್ಯಾರ್ಥಿ ಕನಿಷ್ಟ ಒಂದು ಗಿಡ ನೆಡುವ ಮೂಲಕ ಶೈಕ್ಷಣಿಕ ಅವಧಿಯಲ್ಲಿ ಅದನ್ನು ಸಂರಕ್ಷಿಸಿ ಪೋಷಣೆ ಮಾಡಬೇಕು ಎಂದು ಸಲಹೆ ನೀಡಿದರು. ಪ್ರತ್ಯೇಕ ವಿಶ್ವವಿದ್ಯಾನಿಲಯ ಸ್ಥಾಪನೆ ಕುರಿತು ಮಾತನಾಡಿದ ಅವರು ಸದ್ಯದಲ್ಲೇ ವಿಶೇಷ ಅಧಿಕಾರಿ ನೇಮಕ ಆಗಲಿದೆ ೨೦೨೩ರ ಒಳಗೆ ಪ್ರತ್ಯೇಕ ವಿಶ್ವವಿದ್ಯಾನಿಲಯ ರೂಪುಗೊಳ್ಳುವ ಆಶಯ ವ್ಯಕ್ತಪಡಿಸಿದರು. ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಕೆ.ಎಸ್ ಚಂದ್ರಶೇಖರಯ್ಯ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಅರಣ್ಯ ಇಲಾಖೆ ಸಂಪನ್ಮೂಲ ವ್ಯಕ್ತಿ ಗೋವಿಂದರಾಜ್ ಪರಿಸರ ದಿನದ ಬಗ್ಗೆ ಉಪನ್ಯಾಸ ನೀಡಿದರು. ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಡಾ ಪಾರ್ವತಿ ಅಪ್ಪಯ್ಯ ಪರಿಸರ ದಿನದ ಬಗ್ಗೆ ಮಕ್ಕಳಿಗೆ ಹಿತವಚನ ನೀಡಿದರು.

ಅತಿಥಿಗಳಾಗಿ ಪಾಲ್ಗೊಂಡ ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಗೋವಿಂದರಾಜು ಮಾತನಾಡಿದರು. ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಹೆಚ್ಚು ಪಿ ಚೇತನ್, ಶನಿವಾರಸಂತೆ ವಲಯದ ಪ್ರಫುಲ್ ಶೆಟ್ಟಿ ಮತ್ತು ಇತರರು ಇದ್ದರು.ಕುಶಾಲನಗರ: ಕುಶಾಲನಗರ ಸಮೀಪದ ಚಿಕ್ಕ ಅಳುವಾರದ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕೇಂದ್ರದ ಆವರಣದಲ್ಲಿ ಸರ್ವಋತು ರಸ್ತೆ ನಿರ್ಮಾಣಕ್ಕೆ ಸರ್ಕಾರದ ಮೂಲಕ ರೂ. ೨.೫ ಕೋಟಿ ಅನುದಾನ ಕಲ್ಪಿಸಲಾಗಿದೆ ಎಂದು ಶಾಸಕ ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಕರ್ನಾಟಕ ಅರಣ್ಯ ಇಲಾಖೆ ಸಹಯೋಗದೊಂದಿಗೆ ನಡೆದ ವಿಶ್ವ ಪರಿಸರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಇನ್ನೆರಡು ವರ್ಷಗಳ ಒಳಗೆ ಕೊಡಗು ಜಿಲ್ಲೆಯ ಅಳವಾರದಲ್ಲಿ ಪ್ರತ್ಯೇಕ ವಿಶ್ವವಿದ್ಯಾನಿಲಯ ನಿರ್ಮಾಣಕ್ಕೆ ಸರ್ಕಾರದಿಂದ ಎಲ್ಲಾ ಸಿದ್ಧತೆ ನಡೆದಿದೆ ಎಂದು ಅವರು ಹೇಳಿದರು. ಈ ಸಂಬAಧ ಸದ್ಯದಲ್ಲಿಯೇ ವಿಶೇಷ ಅಧಿಕಾರಿಯೊಬ್ಬರ ನೇಮಕವಾಗಲಿದೆ. ಪ್ರಸಕ್ತ ೧೦೦ ಎಕರೆ ಪ್ರದೇಶದ ವ್ಯಾಪ್ತಿಯಲ್ಲಿ ಸ್ನಾತಕೋತ್ತರ ಕೇಂದ್ರ ಕೆಲಸ ನಿರ್ವಹಿಸುತ್ತಿದ್ದು ಹೆಚ್ಚಿನ ಜಾಗ ನೀಡಲು ಕೂಡ ಚಿಂತನೆ ಹರಿಸಲಾಗಿದೆ ಎಂದರು. ಅಳುವಾರ ಕೇಂದ್ರಕ್ಕೆ ವಿದ್ಯಾರ್ಥಿಗಳಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಬೆಳಗ್ಗೆ ಮತ್ತು ಸಂಜೆ ಸರಕಾರಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸುವ ಬಗ್ಗೆ ಶಾಸಕ ರಂಜನ್ ಭರವಸೆ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ಅರಣ್ಯ ಇಲಾಖೆ ಸೋಮವಾರಪೇಟೆ ಚೆಟ್ಟಳ್ಳಿ: ಗಾಂಧಿ ಯುವಕ ಸಂಘ ಕಂಡಕರೆ ಇವರ ವತಿಯಿಂದ ಸರ್ಕಾರಿ ಪ್ರಾಥಮಿಕ ಶಾಲೆ ಕಂಡಕರೆಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಹಿಂದೂ ಮಲಯಾಳಿ ಸಮಾಜದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ವೇಗವಾಗಿ ಬೆಳೆಯುತ್ತಿರುವ ಜಗತ್ತಿನಲ್ಲಿ ಪರಿಸರವನ್ನು ಎಲ್ಲರೂ ಕಡೆಗಣಿಸುತ್ತಿದ್ದಾರೆ. ಪರಿಸರ ಸಂರಕ್ಷಣೆ ಮಾಡಿದರೆ ಮಾತ್ರ, ನಾವು ಜೀವಂತವಾಗಿ ಉಳಿಯಲು ಸಾಧ್ಯ ಎಂದರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ, ಗಾಂಧಿ ಯುವಕ ಸಂಘದ ಅಧ್ಯಕ್ಷ ಇಸ್ಮಾಯಿಲ್ ಕಂಡಕರೆ, ಒಂದೇ ಒಂದು ಭೂಮಿ, ಇದರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತಿದೆ. ಸದ್ಯದಲ್ಲೇ ಗಾಂಧಿ ಯುವಕ ಸಂಘದಿAದ ಬೃಹತ್ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗುವುದೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಸ್ತಿçÃಶಕ್ತಿ ಸಂಘದ ಸದಸ್ಯರಾದ ದೇವಕಿ, ಸಾವಿತ್ರಿ, ಗಾಂಧಿ ಯುವಕ ಸಂಘದ ಕಾರ್ಯದರ್ಶಿ ಅಜಿನಾನ್ ಪಿ.ಎಮ್., ಉಪಾಧ್ಯಕ್ಷರಾದ ಹಕೀಂ ವಿ.ಹೆಚ್, ಉಬೈಸ್.ಸಿ.ಎ ಹಾಗೂ ಸವೀದ್ ಈ.ಯು ಹಾಜರಿದ್ದರು.

ಸೋಮವಾರಪೇಟೆ: ದೇಶದ ಸುರಕ್ಷತೆ ಮತ್ತು ಪರಿಸರ ಸಂರಕ್ಷಣೆಗೆ ಮೋದಿ ಸರ್ಕಾರ ಆದ್ಯತೆ ನೀಡಿದ್ದು, ಮಹಾತ್ಮ ಗಾಂಧಿ ಅವರ ಸ್ವಚ್ಛ ಭಾರತ್ ನಿರ್ಮಾಣ ಸಂಕಲ್ಪವನ್ನು ಈಡೇರಿಸುವ ಕಾರ್ಯ ಮಾಡುತ್ತಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಹೇಳಿದರು.

ಸಮೀಪದ ಮಾದಾಪುರ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿವಿಧ ಜಾತೀಯ ಗಿಡಗಳನ್ನು ನೆಟ್ಟ ಶಾಸಕರು, ನಂತರ ಮಾದಾಪುರ ಪಟ್ಟಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಿ ಮಾತನಾಡಿದರು. ದೇಶವು ಇಂದು ವಿಶ್ವ ಮಟ್ಟದಲ್ಲಿ ಪ್ರಮುಖ ಪಾತ್ರ ವಹಿಸಲು ನರೇಂದ್ರ ಮೋದಿಯಂತಹ ಗಟ್ಟಿ ನಾಯಕತ್ವ ಸಾಕ್ಷಿಯಾಗಿದೆ ಎಂದರು.

ಕೋವಿಡ್ ಸಂದರ್ಭವೂ ಸಹ ಬಿಜೆಪಿ ಕಾರ್ಯಕರ್ತರು ಅಶಕ್ತರ ನೆರವಿಗೆ ಧಾವಿಸಿದ್ದರು. ಆಹಾರ, ಆರೋಗ್ಯ ಸಂಬAಧಿತ ಸಮಸ್ಯೆಗಳಿಗೆ ಹೆಚ್ಚು ಸ್ಪಂದಿಸುವ ಕಾರ್ಯ ಮಾಡಿದ್ದಾರೆ. ಸಾಮಾಜಿಕ ಕಾರ್ಯಗಳಲ್ಲಿ ಮೋದಿ ಅವರ ಮಾರ್ಗದರ್ಶನದಂತೆ ಪ್ರತಿ ಕಾರ್ಯಕರ್ತನೂ ಮುಂದಡಿಯಿಡುತ್ತಿದ್ದಾರೆ. ಅಂತೆಯೇ ಪ್ರಾಕೃತಿಕ ವಿಕೋಪ ಸಂದರ್ಭವೂ ಜನಸಾಮಾನ್ಯರ ನೆರವಿಗೆ ಸರ್ಕಾರದೊಂದಿಗೆ ಪಕ್ಷದ ಕಾರ್ಯಕರ್ತರು ಹೆಚ್ಚು ಕೈಜೋಡಿಸಿದ್ದಾರೆ. ಇಂತಹ ಸಮಾಜಸೇವೆಯ ಗುಣಗಳನ್ನು ಹೊಂದಿರುವ ಕಾರ್ಯಕರ್ತರೇ ಪಕ್ಷದ ಆಸ್ತಿ ಎಂದು ರಂಜನ್ ಮೆಚ್ಚುಗೆ ವ್ಯಕ್ತಪಡಿಸಿದರು.

ನಂತರ ಮಾದಾಪುರ ಪಟ್ಟಣ ವ್ಯಾಪ್ತಿಯಲ್ಲಿ ಶ್ರಮದಾನ ನಡೆಸುವ ಮೂಲಕ ಸ್ವಚ್ಛತಾ ಕಾರ್ಯಕ್ಕೆ ಶಾಸಕ ರಂಜನ್ ಚಾಲನೆ ನೀಡಿದರು. ಈ ಸಂದರ್ಭ ಪಂಚಾಯಿತಿ ಅಧ್ಯಕ್ಷೆ ನಿರೂಪ, ಸದಸ್ಯರುಗಳು, ಪ್ರಮುಖರಾದ ನಾಪಂಡ ಉಮೇಶ್, ಸ್ಥಾನೀಯ ಸಮಿತಿ ಅಧ್ಯಕ್ಷ ಕೊಪ್ಪತಂಡ ಗಣೇಶ್ ಸೇರಿದಂತೆ ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು. ಬಳಿಕ ಕೆದಕಲ್, ಸುಂಟಿಕೊಪ್ಪ, ಕೊಡಗರಹಳ್ಳಿ, ೭ನೇ ಹೊಸಕೋಟೆ, ಗುಡ್ಡೆಹೊಸೂರು, ಕುಶಾಲನಗರ, ಮುಳ್ಳುಸೋಗೆ, ಕೂಡುಮಂಗಳೂರು, ಕೂಡಿಗೆ, ಹೆಬ್ಬಾಲೆ, ತೊರೆನೂರು, ಶಿರಂಗಾಲ ವ್ಯಾಪ್ತಿಯಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ಪರಿಸರ ದಿನಾಚರಣೆ ಮತ್ತು ಸ್ವಚ್ಛತಾ ಕಾರ್ಯದಲ್ಲಿ ಶಾಸಕರು ಭಾಗವಹಿಸಿದ್ದರು.

ಗೋಣಿಕೊಪ್ಪಲು: ಗೋಣಿಕೊಪ್ಪಲುವಿನ ಕೀರೆಹೊಳೆಯ ದಡದಲ್ಲಿ ಇಪ್ಪತ್ತಕ್ಕೂ ಅಧಿಕ ವಿವಿಧ ತಳಿಯ ನೂರಾರು ಗಿಡಗಳನ್ನು ನೆಡುವ ಮೂಲಕ ರಾಷ್ಟಿçÃಯ ಪರಿಸರ ದಿನವನ್ನು ಆಚರಿಸಲಾಯಿತು.

ಕಾವೇರಿ ಜಲಮೂಲ ಸಂರಕ್ಷಣಾ ಹೋರಾಟ ವೇದಿಕೆ, ಸುದ್ದಿ ಸಂಸ್ಥೆ, ವೀರಾಜಪೇಟೆ ಸಾಮಾಜಿಕ ಅರಣ್ಯ ವಲಯ ಹಾಗೂ ತಿತಿಮತಿ ಪ್ರಾದೇಶಿಕ ಅರಣ್ಯ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಪ್ರಶಾಂತ್ ಗಿಡವನ್ನು ನೆಡುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಗೋಣಿಕೊಪ್ಪ ಪೊಲೀಸ್ ಠಾಣಾಧಿಕಾರಿ ಸುಬ್ಬಯ್ಯ ಮಾತನಾಡಿ ಪರಿಸರ ದಿನದಂದು ನಾಡಿನ ಪ್ರತಿ ವ್ಯಕ್ತಿಯು ಒಂದಾದರೂ ಸಸಿಯನ್ನು ನೆಡುವ ಮೂಲಕ ಪರಿಸರವನ್ನು ಸಂರಕ್ಷಿಸಲು ಪಣ ತೊಡಬೇಕು ಎಂದರು. ಕಾವೇರಿ ಜಲಮೂಲ ಸಂರಕ್ಷಣಾ ವೇದಿಕೆಯ ಗೌರವ ಅಧ್ಯಕ್ಷÀ ಕೊಲ್ಲಿರ ಗೋಪಿ ಚಿಣ್ಣಪ್ಪ ಮಾತನಾಡಿ ಗಿಡಗಳನ್ನು ನೆಟ್ಟರೆ ಸಾಲದು ಅದನ್ನು ಪೋಷಿಸಿ ಬೆಳೆಸಬೇಕು ಹಾಗೂ ಗಿಡಗಳನ್ನು ದತ್ತು ಪಡೆದು ಸಂರಕ್ಷಣೆ ಮಾಡಬೇಕು ಎಂದರು.

ಜಲಮೂಲ ಸಂರಕ್ಷಣಾ ವೇದಿಯ ಅಧ್ಯಕ್ಷ ಪುಳಿಂಜನ ಪೂವಯ್ಯ ಗೋಣಿಕೊಪ್ಪಲು: ಗೋಣಿಕೊಪ್ಪಲುವಿನ ಕೀರೆಹೊಳೆಯ ದಡದಲ್ಲಿ ಇಪ್ಪತ್ತಕ್ಕೂ ಅಧಿಕ ವಿವಿಧ ತಳಿಯ ನೂರಾರು ಗಿಡಗಳನ್ನು ನೆಡುವ ಮೂಲಕ ರಾಷ್ಟಿçÃಯ ಪರಿಸರ ದಿನವನ್ನು ಆಚರಿಸಲಾಯಿತು.

ಕಾವೇರಿ ಜಲಮೂಲ ಸಂರಕ್ಷಣಾ ಹೋರಾಟ ವೇದಿಕೆ, ಸುದ್ದಿ ಸಂಸ್ಥೆ, ವೀರಾಜಪೇಟೆ ಸಾಮಾಜಿಕ ಅರಣ್ಯ ವಲಯ ಹಾಗೂ ತಿತಿಮತಿ ಪ್ರಾದೇಶಿಕ ಅರಣ್ಯ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಪ್ರಶಾಂತ್ ಗಿಡವನ್ನು ನೆಡುವ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಗೋಣಿಕೊಪ್ಪ ಪೊಲೀಸ್ ಠಾಣಾಧಿಕಾರಿ ಸುಬ್ಬಯ್ಯ ಮಾತನಾಡಿ ಪರಿಸರ ದಿನದಂದು ನಾಡಿನ ಪ್ರತಿ ವ್ಯಕ್ತಿಯು ಒಂದಾದರೂ ಸಸಿಯನ್ನು ನೆಡುವ ಮೂಲಕ ಪರಿಸರವನ್ನು ಸಂರಕ್ಷಿಸಲು ಪಣ ತೊಡಬೇಕು ಎಂದರು. ಕಾವೇರಿ ಜಲಮೂಲ ಸಂರಕ್ಷಣಾ ವೇದಿಕೆಯ ಗೌರವ ಅಧ್ಯಕ್ಷÀ ಕೊಲ್ಲಿರ ಗೋಪಿ ಚಿಣ್ಣಪ್ಪ ಮಾತನಾಡಿ ಗಿಡಗಳನ್ನು ನೆಟ್ಟರೆ ಸಾಲದು ಅದನ್ನು ಪೋಷಿಸಿ ಬೆಳೆಸಬೇಕು ಹಾಗೂ ಗಿಡಗಳನ್ನು ದತ್ತು ಪಡೆದು ಸಂರಕ್ಷಣೆ ಮಾಡಬೇಕು ಎಂದರು.

ಜಲಮೂಲ ಸಂರಕ್ಷಣಾ ವೇದಿಯ ಅಧ್ಯಕ್ಷ ಪುಳಿಂಜನ ಪೂವಯ್ಯ ವೀರಾಜಪೇಟೆ: ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ.ದಯಾನಂದ. ಕೆ.ಸಿ ಅವರು ಗಿಡ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿ, ವಾತಾವರಣದಲ್ಲಿ ತಾಪಮಾನ ಹೆಚ್ಚಾಗುತ್ತಿದ್ದು ಪರಿಸರವನ್ನು ಉಳಿಸುವ ಅಗತ್ಯತೆ ಹೆಚ್ಚಿದೆ ಎಂದರು.

ಈ ಸಂದರ್ಭ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ಸಂಚಾಲಕ ವನಿತ್‌ಕುಮಾರ್ ಎಂ.ಎನ್, ಐ.ಕ್ಯೂ.ಎ.ಸಿ ಸಂಚಾಲಕರಾದ ವೇಣುಗೋಪಾಲ್ ಮತ್ತು ಕಾಲೇಜಿನ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

ವೀರಾಜಪೇಟೆ: ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ.ದಯಾನಂದ. ಕೆ.ಸಿ ಅವರು ಗಿಡ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿ, ವಾತಾವರಣದಲ್ಲಿ ತಾಪಮಾನ ಹೆಚ್ಚಾಗುತ್ತಿದ್ದು ಪರಿಸರವನ್ನು ಉಳಿಸುವ ಅಗತ್ಯತೆ ಹೆಚ್ಚಿದೆ ಎಂದರು.

ಈ ಸಂದರ್ಭ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ಸಂಚಾಲಕ ವನಿತ್‌ಕುಮಾರ್ ಎಂ.ಎನ್, ಐ.ಕ್ಯೂ.ಎ.ಸಿ ಸಂಚಾಲಕರಾದ ವೇಣುಗೋಪಾಲ್ ಮತ್ತು ಕಾಲೇಜಿನ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.ವೀರಾಜಪೇಟೆ: ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ.ದಯಾನಂದ. ಕೆ.ಸಿ ಅವರು ಗಿಡ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿ, ವಾತಾವರಣದಲ್ಲಿ ತಾಪಮಾನ ಹೆಚ್ಚಾಗುತ್ತಿದ್ದು ಪರಿಸರವನ್ನು ಉಳಿಸುವ ಅಗತ್ಯತೆ ಹೆಚ್ಚಿದೆ ಎಂದರು.

ಈ ಸಂದರ್ಭ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ಸಂಚಾಲಕ ವನಿತ್‌ಕುಮಾರ್ ಎಂ.ಎನ್, ಐ.ಕ್ಯೂ.ಎ.ಸಿ ಸಂಚಾಲಕರಾದ ವೇಣುಗೋಪಾಲ್ ಮತ್ತು ಕಾಲೇಜಿನ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

ಗುಡ್ಡೆಹೊಸೂರು: ಅಂಗನವಾಡಿ ಕೇಂದ್ರದ ಆವರಣದಲ್ಲಿ ವಿಶ್ವಪರಿಸರ ದಿನಾಚರಣೆಯ ಅಂಗವಾಗಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು. ಈ ಸಂಧರ್ಭ ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿ ಲಕ್ಷಿö್ಮ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನಂದಿನಿ, ಪಿ.ಡಿ.ಓ ಶ್ಯಾಂ ಗ್ರಾ.ಪಂ. ಸದಸ್ಯ ಬಿ.ಎಂ.ಪ್ರದೀಪ್ ಸಿಬ್ಬಂದಿ ಸಮಂತ್ ಮುಂತಾದವರು ಹಾಜರಿದ್ದರು. ಕೊಡಗಿನಾದ್ಯಂತ ವಿಶ್ವಪರಿಸರ ದಿನದ ಅಂಗವಾಗಿ ಒಟ್ಟು ೨ ಲಕ್ಷ ಗಿಡಗಳನ್ನು ನೆಡಲಾಗಿದೆ ಎಂದು ಲಕ್ಷಿö್ಮ ಮಾಹಿತಿ ನೀಡಿದರು.

ಕೂಡಿಗೆ: ಕೂಡಿಗೆ ಬಿಜೆಪಿ ವತಿಯಿಂದ ಪರಿಸರ ದಿನಾಚರಣೆಯ ಅಂಗವಾಗಿ ಕೂಡಿಗೆ ಸರ್ಕಲ್‌ನಿಂದ ಹಳೆ ಕೂಡಿಗೆಯವರೆಗೆ ಹೆದ್ದಾರಿಯ ರಸ್ತೆ ಮತ್ತು ಅದಕ್ಕೆ ಹೊಂದಿಕೊAಡಿರುವ ಉಪ ರಸ್ತೆಗಳಲ್ಲಿ ಗಿಡ ನಡುವಿಕೆ ಮತ್ತು ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಎಂ. ವಿಜಯ ಚಾಲನೆ ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿದರು.ಈ ಸಂದರ್ಭ ಸ್ಥಳೀಯ ಉದ್ಯಮಿ ಕಿಶೋರ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯ, ಶ್ರೀ ಬಸವೇಶ್ವರ ದೇವಾಲಯ ಸಮಿತಿಯ ಅಧ್ಯಕ್ಷ ಕೆ.ಟಿ. ಗಿರೀಶ್, ವಾರ್ಡ್ ಸಮಿತಿಯ ಅಧ್ಯಕ್ಷ ಕೆ.ಡಿ. ಲೋಕೇಶ್, ಪ್ರಕಾಶ್ ಕೇಶÀವ ರೈ , ಬಿಜೆಪಿ ಪ್ರಮುಖರಾದ ಸುಬ್ಬಯ್ಯ, ಸಂತೋಷ್ ಯೋಗೇಶ್, ಧರ್ಮಣ್ಣ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮಂಜಳಾ ಮತ್ತಿತರರು ಇದ್ದರು.