ಸುಂಟಿಕೊಪ್ಪ,ಜೂ.೫: ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಾಲಯದ ೫೪ನೇ ವಾರ್ಷಿಕೋತ್ಸವ ಪ್ರಯುಕ್ತ ಶ್ರೀ ಚಾಮುಂಡೇಶ್ವರಿ, ಶ್ರೀ ಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವಕ್ಕೆ ಶನಿವಾರ ಚಾಲನೆ ದೊರೆತಿದೆ.

ಬೆಳಿಗ್ಗೆ ೬.೧೫ ಗಂಟೆಗೆ ಗಣಪತಿ ಹವನ ೭.೧೫ ಗಂಟೆಗೆ ಶುದ್ಧಿ ಪುಣ್ಯಾಹ, ೭.೩೦ ಗಂಟೆಗೆ ಬಾವುಟ ಏರಿಸುವುದು, ಸಂಜೆ ೪ ಗಂಟೆಗೆ ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವಿಕೆ, ರಾತ್ರಿ ೭ ಗಂಟೆಗೆ ಶ್ರೀಮುತ್ತಪ್ಪ ವೆಳ್ಳಾಟಂ, ೮ ಗಂಟೆಗೆ ಚಂಡೆಮೇಳವನ್ನು ನಡೆಸಲಾಯಿತು.

ಭಾನುವಾರ ವಾದ್ಯಮೇಳ, ಶ್ರೀಶಾಸ್ತಪ್ಪನ ವೆಳ್ಳಾಟಂ, ಶ್ರೀ ಗುಳಿಗನ ವೆಳ್ಳಾಟಂ, ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವಿಕೆ, ಅಡಿಯರ ಮೆರವಣಿಗೆ, ಶ್ರೀ ಚಾಮುಂಡೇಶ್ವರಿ ವೆಳ್ಳಾಟಂ ಸೇರಿದಂತೆ ಹಲವು ಧಾರ್ಮಿಕ ಕಾರ್ಯಗಳು ನೆರವೇರಿದವು.

ತಾ. ೬ ರಂದು (ಇಂದು) ಬೆಳಿಗ್ಗೆ ೭ ಗಂಟೆಗೆ ಶ್ರೀ ರಕ್ತ ಚಾಮುಂಡಿಕೋಲ, ೮.೩೦ಕ್ಕೆ ಶ್ರೀ ವಿಷ್ಣುಮೂರ್ತಿಕೋಲ, ೧೦ ಗಂಟೆಗೆ ಶ್ರೀ ಚಾಮುಂಡೇಶ್ವರಿ ಕೋಲ, ೧೧ ಗಂಟೆಗೆ ಶ್ರೀ ವಸೂರಿ ಮಾಲೆ ಕೋಲ, ಮಧ್ಯಾಹ್ನ ೧೨ ಗಂಟೆಗೆ ಗುರುಶ್ರೀ ದರ್ಪಣ, ಅಪರಾಹ್ನ ೨ ಗಂಟೆಗೆ ಬಾವುಟ ಇಳಿಸಲಾಗುವುದೆಂದು ಶ್ರೀ ಚಾಮುಂಡೇಶ್ವರಿ ಹಾಗೂ ಮುತ್ತಪ್ಪ ದೇವಾಲಯ ಸಮಿತಿ ಆಡಳಿತ ಮಂಡಳಿಯವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.