ಸೋಮವಾರಪೇಟೆ, ಜೂ.೬: ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೂ. ೧.೩೧ ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಯಂತ್ರೋ ಪಕರಣಗಳನ್ನು ಒಳಗೊಂಡ ತೀವ್ರ ನಿಗಾ ಚಿಕಿತ್ಸಾ ಘಟಕವನ್ನು ಸ್ಥಾಪಿಸಲಾಗಿದ್ದು, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಚಾಲನೆ ನೀಡಿದರು.
ಈ ಹಿಂದೆ ಕೇವಲ ೩ ಬೆಡ್‌ಗಳನ್ನು ಒಳಗೊಂಡ ತೀವ್ರ ನಿಗಾ ಚಿಕಿತ್ಸಾ ಘಟಕವಿದ್ದು, ಇತರ ಉಪಕರಣಗಳು ಇಲ್ಲದಿದ್ದರಿಂದ ರೋಗಿಗಳ ಪಾಲಿಗೆ ಘಟಕ ಇದ್ದೂ ಇಲ್ಲದಂತಾಗಿತ್ತು. ಇದೀಗ ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯ ಕೆ.ಹೆಚ್.ಎಸ್.ಡಿ.ಆರ್.ಪಿ. ಇಂಜಿನಿಯರಿAಗ್ ವಿಭಾಗದ ಮೂಲಕ ಬಿಡುಗಡೆಯಾದ ಅನುದಾನದಡಿ ಸುಸಜ್ಜಿತ ಐಸಿಯು ಘಟಕವನ್ನು ಸ್ಥಾಪಿಸಲಾಗಿದೆ.
ಐಸಿಯು ಘಟಕಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಅಪ್ಪಚ್ಚುರಂಜನ್ ಅವರು, ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯನ್ನು ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಮೇಲ್ದರ್ಜೆ ಗೇರಿಸಿದ್ದು, ನುರಿತ ತಜ್ಞ ವೈದ್ಯರನ್ನು ನಿಯೋಜಿಸಲಾಗಿದೆ. ಇದರೊಂದಿಗೆ ವೈದ್ಯರುಗಳಿಗೆ ಬೇಕಾದ ಇತರ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ ಎಂದರು.
ಪ್ರಸ್ತುತ ಆಸ್ಪತ್ರೆಯಲ್ಲಿ ೬ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ ಮಕ್ಕಳ ತಜ್ಞರನ್ನು ನಿಯೋಜಿಸಲು ಕ್ರಮ ವಹಿಸಲಾಗಿದೆ. ಈಗಾಗಲೇ ಆಕ್ಸಿಜನ್ ಘಟಕವೂ ರೋಗಿಗಳ ಸೇವೆಗೆ ಸಿದ್ಧವಾಗಿದೆ ಎಂದು ಶಾಸಕರು ಹೇಳಿದರು.
ರಾಜ್ಯ ಸರ್ಕಾರದ ಆರೋಗ್ಯ ಇಲಾಖೆ ಮೂಲಕ ಸರ್ಕಾರಿ ಆಸ್ಪತ್ರೆಯನ್ನು ಖಾಸಗಿ ಆಸ್ಪತ್ರೆಗಳಿಗೆ ಸರಿಸಮನಾಗಿ ರೂಪುಗೊಳಿಸಲಾ ಗುತ್ತಿದೆ. ಆಸ್ಪತ್ರೆಯಲ್ಲಿ ಈ ಹಿಂದೆ ೩ ಐಸಿಯು ಬೆಡ್‌ಗಳಿದ್ದು, ಇದೀಗ ಕರುಣ ಟ್ರಸ್ಟ್ ಮೂಲಕ ೧೦ ಬೆಡ್‌ಗಳನ್ನು
(ಮೊದಲ ಪುಟದಿಂದ) ಅಳವಡಿಸಲಾಗಿದೆ. ಇಲಾಖೆಯ ಮೂಲಕ ೧೨ ಐಸಿಯು ಬೆಡ್‌ಗಳನ್ನು ಅಳವಡಿಸಿದ್ದು, ರೋಗಿಗಳ ಸೇವೆಗೆ ಒದಗಿಸಲಾಗಿದೆ. ಸಣ್ಣಪುಟ್ಟ ಕೆಲಸಗಳು ಬಾಕಿಯಿದ್ದು, ತಕ್ಷಣ ಪೂರ್ಣಗೊಳಿಸಲು ಸಂಬAಧಿಸಿದ ಅಭಿಯಂತರರಿಗೆ ನಿರ್ದೇಶನ ನೀಡಲಾಗಿದೆ ಎಂದು ಅಪ್ಪಚ್ಚು ರಂಜನ್ ತಿಳಿಸಿದರು.
ಇನ್ನು ಸಣ್ಣಪುಟ್ಟ ಖಾಯಿಲೆಗಳಿಗೆ ಮಡಿಕೇರಿ ಜಿಲ್ಲಾಸ್ಪತ್ರೆಗೆ ತೆರಳಬೇಕಾಗಿಲ್ಲ. ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಬಹುದಾಗಿದೆ. ಆಸ್ಪತ್ರೆಯನ್ನು ಉನ್ನತೀಕರಣಗೊಳಿಸುವುದರಿಂದ ಗ್ರಾಮೀಣ ಭಾಗದ ಬಡ ರೈತರು, ಕಾರ್ಮಿಕರಿಗೆ ಹೆಚ್ಚಿನ ಪ್ರಯೋಜನವಾಗಲಿದೆ ಎಂದರು.
ಈ ಸಂದರ್ಭ ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್, ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಸತೀಶ್, ಡಾ. ಶಿವಪ್ರಸಾದ್ ಸೇರಿದಂತೆ ಇತರ ವೈದ್ಯರು, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಚಂದ್ರು, ಸದಸ್ಯರಾದ ಬಿ.ಆರ್. ಮಹೇಶ್, ನಾಮನಿರ್ದೇಶಿತ ಸದಸ್ಯರಾದ ಎಸ್.ಆರ್. ಸೋಮೇಶ್, ಎಸ್. ಮಹೇಶ್, ಇಲಾಖೆಯ ಅಭಿಯಂತರರಾದ ರಾಜೇಶ್, ಶ್ರೀನಿವಾಸ್‌ಗೌಡ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.