ಸೋಮವಾರಪೇಟೆ,ಜೂ.೬: ಸಮೀಪದ ಹಾನಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾನಗಲ್ಲು ಶೆಟ್ಟಳ್ಳಿ ಗ್ರಾಮದಲ್ಲಿ ಕೆಲವರು ದೇವರಕಾಡು ಹಾಗೂ ಸ್ಮಶಾನ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು, ಈ ಬಗ್ಗೆ ಗ್ರಾಮಸ್ಥರು ಶಾಸಕ ಅಪ್ಪಚ್ಚು ರಂಜನ್ ಅವರಿಗೆ ದೂರು ನೀಡಿದ್ದಾರೆ.
ಹಾನಗಲ್ಲು ಶೆಟ್ಟಳ್ಳಿ ಗ್ರಾಮದಲ್ಲಿ ಸುಮಾರು ೧೩ ಎಕರೆಯಷ್ಟು ದೇವರಕಾಡು ಜಾಗವಿದ್ದು, ಇದನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಗ್ರಾಮದ ರೈತರಿಗೆ ಸಮಸ್ಯೆಯಾಗಿದೆ. ಇದರೊಂದಿಗೆ ಸ್ಮಶಾನ ಜಾಗವನ್ನೂ ಕಬಳಿಸಿಕೊಂಡಿದ್ದಾರೆ. ಇವುಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಶಾಸಕರಿಗೆ ಮನವಿ ಮಾಡಿದರು.
ತಕ್ಷಣ ಜಾಗವನ್ನು ಸರ್ವೆ ನಡೆಸಿ ಒತ್ತುವರಿಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ತಾಲೂಕು ತಹಶೀಲ್ದಾರ್‌ಗೆ ಶಾಸಕ ರಂಜನ್ ಸೂಚನೆ ನೀಡಿದರು.