ಕುವೈತ್ನಲ್ಲಿ ಭಾರತೀಯ ಉತ್ಪನ್ನಗಳ ಬಹಿಷ್ಕಾರ
ಕುವೈತ್, ಜೂ. ೬: ಭಾರತದ ಆಡಳಿತ ಪಕ್ಷದ ನಾಯಕಿಯೊಬ್ಬರು ಪ್ರವಾದಿ ಮೊಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆಗೆ ಸಂಬAಧಿಸಿದAತೆ ಇರಾನ್ ವಿದೇಶಾಂಗ ಸಚಿವಾಲಯ ಭಾರತದ ರಾಯಭಾರಿಗೆ ಸಮನ್ಸ್ ಜಾರಿ ಮಾಡಿದ ಬೆನ್ನಲ್ಲೇ ಕುವೈತ್ ಸೂಪರ್ ಮಾರ್ಕೆಟ್ವೊಂದು ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸಿದೆ. ಅಲ್-ಅರ್ದಿಯಾ ಕೋ-ಆಪರೇಟಿವ್ ಸೊಸೈಟಿ ಅಂಗಡಿಯ ಕಾರ್ಮಿಕರು ಪ್ರವಾದಿ ಮೊಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆಯನ್ನು ಖಂಡಿಸಿದ್ದು, ಭಾರತೀಯ ಚಹಾ ಮತ್ತು ಇತರ ಉತ್ಪನ್ನಗಳನ್ನು ಟ್ರಾಲಿಗಳಲ್ಲಿ ರಾಶಿ ಹಾಕಿ ಪ್ರತಿಭಟಿಸಿದ್ದಾರೆ. ಸೌದಿ ಅರೇಬಿಯಾ, ಕತಾರ್ ಮತ್ತು ಇತರ ದೇಶಗಳು, ಕೈರೋದ ಪ್ರಭಾವಿ ಅಲ್-ಅಜರ್ ವಿಶ್ವವಿದ್ಯಾಲಯ, ಬಿಜೆಪಿ ರಾಷ್ಟಿçÃಯ ವಕ್ತಾರರಾಗಿದ್ದ ನೂಪುರ್ ಶರ್ಮಾ ಅವರ ಹೇಳಿಕೆಯನ್ನು ಖಂಡಿಸಿವೆ. ಕುವೈತ್ ಸಿಟಿಯ ಹೊರಗಿರುವ ಸೂಪರ್ ಮಾರ್ಕೆಟ್ನಲ್ಲಿ ಭಾರತದ ಅಕ್ಕಿಯ ಚೀಲಗಳು ಮತ್ತು ಮಸಾಲೆಗಳು, ಮೆಣಸಿನಕಾಯಿ ಹಾಗೂ ಇತರ ಉತ್ಪನ್ನಗಳನ್ನು ಪ್ಲಾಸ್ಟಿಕ್ ಹಾಳೆಗಳಿಂದ ಮುಚ್ಚಲಾಗಿದೆ. ಅಲ್ಲದೆ "ನಾವು ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸಿದ್ದೇವೆ" ಎಂದು ಅರೇಬಿಕ್ ಭಾಷೆಯಲ್ಲಿ ಬರೆಯಲಾಗಿದೆ.
ಚರ್ಚ್ನಲ್ಲಿ ಪ್ರಾರ್ಥನೆ ವೇಳೆ ಗುಂಡಿನ ದಾಳಿ
ಲಾಗೋಸ್, ಜೂ. ೬: ನೈರುತ್ಯ ನೈಜೀರಿಯಾದಲ್ಲಿ ಭಾನುವಾರ ಕ್ಯಾಥೋಲಿಕ್ ಚರ್ಚ್ಗೆ ನುಗ್ಗಿದ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದು, ಕನಿಷ್ಟ ೨೧ ಮಂದಿ ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಬಂದೂಕುಧಾರಿಗಳು ಕ್ಯಾಥೋಲಿಕ್ ಚರ್ಚ್ನಲ್ಲಿ ಸಾಮೂಹಿಕ ಪ್ರಾರ್ಥನೆಗೆ ಸೇರಿದ್ದವರ ಮೇಲೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಹಲವರು ಮೃತಪಟ್ಟಿದ್ದಾರೆ ಎಂದು ಸರ್ಕಾರ ಮತ್ತು ಪೊಲೀಸರು ತಿಳಿಸಿದ್ದಾರೆ. ಒಂಡೋ ರಾಜ್ಯದ ಓವೊ ಪಟ್ಟಣದಲ್ಲಿರುವ ಸೇಂಟ್ ಫ್ರಾನ್ಸಿಸ್ ಕ್ಯಾಥೋಲಿಕ್ ಚರ್ಚ್ನಲ್ಲಿ ಬಂದೂಕುಧಾರಿಗಳು ಗುಂಡು ಹಾರಿಸಿದ ಬಳಿಕ ಸ್ಫೋಟಕಗಳನ್ನು ಬಳಸಿ ದಾಳಿ ನಡೆಸಿದ್ದಾರೆ. ಈ ದಾಳಿಗೆ ಕಾರಣ ಇನ್ನೂ ತಿಳಿದು ಬಂದಿಲ್ಲ ಮತ್ತು ದಾಳಿಯ ಹೊಣೆಯನ್ನು ಇದುವರೆಗೂ ಯಾವ ಸಂಘಟನೆಯೂ ಹೊತ್ತುಕೊಂಡಿಲ್ಲ. ನೈಜೀರಿಯಾದ ಕ್ಯಾಥೋಲಿಕ್ ಚರ್ಚ್ನ ವಕ್ತಾರ ರೆವರೆಂಡ್ ಆಗಸ್ಟೀನ್ ಇಕ್ವು ಈ ಬಗ್ಗೆ ಮಾತನಾಡಿದ್ದು, ಪವಿತ್ರ ಪೂಜೆ ನಡೆಯುತ್ತಿದ್ದಾಗ ಅಪರಿಚಿತ ಬಂದೂಕುಧಾರಿಗಳು ಸೇಂಟ್ ಫ್ರಾನ್ಸಿಸ್ ಕ್ಯಾಥೋಲಿಕ್ ಚರ್ಚ್ ಮೇಲೆ ದಾಳಿ ನಡೆಸಿರುವುದು ತುಂಬಾ ದುಃಖಕರವಾಗಿದೆ. ಬಿಷಪ್ಗಳು ಮತ್ತು ಪಾದ್ರಿಗಳು ಕೂದಲೆಳೆ ಅಂತರದಲ್ಲಿ ಬದುಕುಳಿದಿದ್ದಾರೆ ಎಂದು ಹೇಳಿದ್ದಾರೆ.
ಸರ್ಕಾರಿ ಉದ್ಯೋಗ ಪಡೆದ ಪತ್ನಿ ಅಂಗೈಯನ್ನೇ ಕತ್ತರಿಸಿದ ಪತಿ
ಕೋಲ್ಕತ್ತಾ, ಜೂ. ೬: ಇತ್ತೀಚೆಗಷ್ಟೇ ಸರ್ಕಾರಿ ಉದ್ಯೋಗ ಗಿಟ್ಟಿಸಿದ್ದ ಪತ್ನಿಯ ಅಂಗೈಯನ್ನೇ ಕತ್ತರಿಸಿ ಹಾಕಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಪೂರ್ವ ಬುರ್ದ್ವಾನ್ನ ಕೇತುಗ್ರಾಮ್ನಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಮತ್ತು ಅವನ ಹೆತ್ತವರು ವಿರೋಧಿಸಿದ್ದ ಸರ್ಕಾರಿ ನೌಕರಿ ಪಡೆದ ನಂತರ ಸಿಟ್ಟಿನಿಂದ ಪತಿ ಈ ದಾಳಿ ಮಾಡಿದ್ದಾನೆ ಎನ್ನಲಾಗಿದೆ. ಸಂತ್ರಸ್ತ ಮಹಿಳೆ ರೇಣು ಖಾತುನ್ ಅವರು ಕಳೆದ ಮೂರು ವರ್ಷಗಳಿಂದ ತಯಾರಿ ನಡೆಸಿ ಇತ್ತೀಚೆಗಷ್ಟೇ ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ನ ಕೆಲಸ ಪಡೆದಿದ್ದರು. ಆಕೆ ಮುಂದಿನ ವಾರ ಸೇವೆಗೆ ಸೇರಬೇಕಿತ್ತು. ಆದರೆ ಆಕೆ ಕೆಲಸಕ್ಕೆ ಹೋಗುವುದು ಪತಿ ಮತ್ತು ಆತನ ಪೋಷಕರಿಗೆ ಇಷ್ಟವಿರಲಿಲ್ಲ. ಹೀಗಾಗಿ ಆ ಕೆಲಸವನ್ನು ತಡೆಯಲು ಆಕೆಯ ಅಂಗೈಯನ್ನು ಕತ್ತರಿಸಿ ಹಾಕಿದ್ದಾನೆ ಎನ್ನಲಾಗಿದೆ.
ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರ ವಿರುದ್ಧ ನೋಟೀಸ್
ಮಂಗಳೂರು, ಜೂ. ೬: ಹೈಕೋರ್ಟ್ ಆದೇಶದ ಹೊರತಾಗಿಯೂ ಕಾಲೇಜಿಗೆ ಹಿಜಾಬ್ ಧರಿಸಿ ಬಂದು ಸುದ್ದಿಗೋಷ್ಠಿ ಮಾಡಿದ್ದ ವಿದ್ಯಾರ್ಥಿನಿಯರಿಗೆ ಮಂಗಳೂರು ವಿಶ್ವ ವಿದ್ಯಾಲಯ ನೋಟೀಸ್ ಜಾರಿ ಮಾಡಿದೆ. ಮಂಗಳೂರು ವಿವಿ ಕಾಲೇಜಿಗೆ ವಿದ್ಯಾರ್ಥಿನಿಯರು ಮತ್ತೆ ಹಿಜಾಬ್ ಧರಿಸಿ ಬಂದ ಹಿನ್ನೆಲೆ ಕಾಲೇಜಿನ ಪ್ರಾಂಶುಪಾಲೆ ಡಾ. ಅನುಸೂಯ ರೈ ವಿದ್ಯಾರ್ಥಿನಿಯರಿಗೆ ನೋಟೀಸ್ ಜಾರಿ ಮಾಡಿದ್ದಾರೆ. ಕಾಲೇಜಿನ ಶಿಸ್ತು ಉಲ್ಲಂಘಿಸಿ, ಘನತೆಗೆ ಧಕ್ಕೆ ತಂದ ಹಿನ್ನೆಲೆ ನೋಟೀಸ್ ಜಾರಿ ಮಾಡಲಾಗಿದೆ ಎಂದು ಹೇಳಲಾಗಿದೆ. ಗೌಸಿಯಾ ಸೇರಿದಂತೆ ಕೆಲ ವಿದ್ಯಾರ್ಥಿನಿಯರಿಗೆ ಪ್ರಾಂಶುಪಾಲರು ನೋಟೀಸ್ ಜಾರಿ ಮಾಡಿದ್ದಾರೆ. ನೋಟೀಸ್ ಬಳಿಕವೂ ನಿಯಮ ಮೀರಿದರೆ ಅಮಾನತು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮಂಗಳೂರು ವಿವಿ ಘಟಕದ ಕಾಲೇಜಿನಲ್ಲಿ ನಿರ್ಬಂಧದ ನಡುವೆಯು ಜೂನ್ ೪ ರಂದು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ತೆರಳಿದ್ದರು. ಆದರೆ ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಣೆ ಮಾಡಲಾಗಿತ್ತು. ತರಗತಿಗೆ ಹೋಗದಂತೆ ಪ್ರಾಂಶುಪಾಲೆ ಡಾ. ಅನುಸೂಯ ರೈ ತಡೆದಿದ್ದಾರೆ. ಬಳಿಕ ಮೇ ೩೦ ರಂದು ಜಿಲ್ಲಾಧಿಕಾರಿ ಜೊತೆ ಸಭೆ ನಡೆಸಿದ ಬಳಿಕ ವಿದ್ಯಾರ್ಥಿನಿಯರು ಕಾಲೇಜಿಗೆ ಬಂದಿರಲಿಲ್ಲ. ಮತ್ತೆ ಜೂನ್ ೪ ರಂದು ೧೬ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಇದೇ ವಿಚಾರವಾಗಿ ವಿದ್ಯಾರ್ಥಿನಿಯರು ಮಂಗಳೂರು ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯೊಂದನ್ನು ನಡೆಸಿದ್ದರು.
ತಾ. ೧೩ಕ್ಕೆ ರಾಜ್ಯಕ್ಕೆ ರಾಷ್ಟçಪತಿ ಭೇಟಿ
ಬೆಂಗಳೂರು, ಜೂ. ೬: ರಾಷ್ಟçಪತಿ ರಾಮ್ ನಾಥ್ ಕೋವಿಂದ್ ಅವರು ಎರಡು-ದಿನಗಳ ಅಧಿಕೃತ ರಾಜ್ಯ ಭೇಟಿಗಾಗಿ ತಾ. ೧೩ ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ರಾಷ್ಟçಪತಿ ಪ್ರವಾಸ ವಿವರಗಳ ಪ್ರಕಾರ, ರಾಷ್ಟçಪತಿಯವರು ಸೋಮವಾರ ಬೆಳಿಗ್ಗೆ ಬೆಂಗಳೂರು ತಲುಪಲಿದ್ದಾರೆ. ನಂತರ, ಅವರು ರಾಷ್ಟಿçÃಯ ಮಿಲಿಟರಿ ಶಾಲೆಯ ಅಮೃತ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಅಂದು ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ತಾ. ೧೪ ರಂದು, ಮಂಗಳವಾರ ಬೆಳಗ್ಗೆ ಬೆಂಗಳೂರಿನ ಕನಕಪುರ ರಸ್ತೆ ಸಮೀಪದ ದೊಡ್ಡಕಲ್ಲಸಂದ್ರದ ವೈಕುಂಠ ಬೆಟ್ಟದಲ್ಲಿ ತಿರುಪತಿ ತಿರುಮಲ ದೇವಾಲಯವನ್ನು ಹೋಲುವ ಇಸ್ಕಾನ್ ದೇಗುಲದ ಲೋಕಾರ್ಪಣಾ ಸಮಾರಂಭದಲ್ಲಿ ರಾಷ್ಟçಪತಿಯವರು ಭಾಗವಹಿಸಲಿದ್ದಾರೆ. ಅಲ್ಲದೆ, ಅದೇ ಅಪರಾಹ್ನ ಅವರು ದೆಹಲಿಗೆ ತೆರಳಲಿದ್ದಾರೆ.
ಮೀಸಲಾತಿ ಬೇಡಿಕೆ ವಿಳಂಬ - ಸಿ.ಎಂ. ಮನೆ ಮುಂದೆ ಪ್ರತಿಭಟನೆಗೆ ನಿರ್ಧಾರ
ಬೆಂಗಳೂರು, ಜೂ. ೬: ಕಳೆದ ಹಲವು ದಿನಗಳಿಂದ ಲಿಂಗಾಯತ ಪಂಚಮಸಾಲಿ ಸಮುದಾಯ ೨ಎ ಮೀಸಲಾತಿಗಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಿದೆ. ಈ ವಿಚಾರದಲ್ಲಿ ರಾಜ್ಯ ಸರಕಾರದ ವಿಳಂಬ ಧೋರಣೆ ಖಂಡಿಸಿ ಮುಖ್ಯಮಂತ್ರಿ ನಿವಾಸದ ಮುಂದೆ ಸತ್ಯಾಗ್ರಹ ನಡೆಸಲು ಸಮುದಾಯದ ಸದಸ್ಯರು ನಿರ್ಧರಿಸಿದ್ದಾರೆ. ತಾ. ೨೭ ರಂದು ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದ ಮುಂದೆ ಸತ್ಯಾಗ್ರಹ ನಡೆಸಲಾಗುವುದು ಹಾಗೂ ಅದೇ ದಿನ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಯುವ ಹೋರಾಟಕ್ಕೂ ಚಾಲನೆ ನೀಡಲಾಗುವುದು ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿಗಳು ತಿಳಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳಿಗೆ ಬರೆದಿರುವ ಮನವಿ ಪತ್ರದಲ್ಲಿ, ತಾವುಗಳು ಹಿಂದೆ ಕಾನೂನು ಸಚಿವರಾಗಿದ್ದಾಗ ಹಾಗೂ ಇಂದು ಮುಖ್ಯಮಂತ್ರಿಯಾಗಿರುವಾಗ ಸಮಾಜಕ್ಕೆ ಕೊಟ್ಟ ಮಾತಿನಂತೆ ೨ಎ ಮೀಸಲಾತಿಯನ್ನು ಅನುಷ್ಠಾನಗೊಳಿಸಲು ತಾ. ೨೭ ರೊಳಗಾಗಿ ಕೂಡಲೇ ಸಮಾಜದ ಪ್ರಮುಖರೊಂದಿಗೆ ಅಂತಿಮ ಸುತ್ತಿನ ಮಾತುಕತೆಗೆ ಸಮಯ ನಿಗದಿ ಮಾಡಬೇಕೆಂದು ಹಾಗೂ ಸರಕಾರದ ಸ್ಪಷ್ಟ ನಿಲುವನ್ನು ತಿಳಿಸಬೇಕೆಂದು ಶ್ರೀಗಳು ಪತ್ರದ ಮೂಲಕ ಒತ್ತಾಯಿಸಿದ್ದಾರೆ.
ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ : ಮತ್ತೋರ್ವನ ಬಂಧನ
ಬೆAಗಳೂರು, ಜೂ. ೬: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬAಧ ಮತ್ತೋರ್ವ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ಮೂಲದ ದರ್ಶನ್ ಗೌಡನನ್ನು ಈ ಹಿಂದೆ ಪೊಲೀಸರು ವಿಚಾರಣೆ ನಡೆಸಿದ್ದರು. ಈ ವೇಳೆ ಆತ ಸಚಿವ ಡಾ. ಅಶ್ವತ್ಥ ನಾರಾಯಣ ಹೆಸರು ಹೇಳಿದ್ದ ಬಳಿಕ ಆತನನ್ನು ಸಿಐಡಿ ಅಧಿಕಾರಿಗಳು ಬಿಟ್ಟು ಕಳುಸಿದ್ದರು. ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ನಿನ್ನೆ ದರ್ಶನ್ ಗೌಡನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದ ಪೊಲೀಸರು ಬಂಧಿಸಿದ್ದಾರೆ.