ಮಡಿಕೇರಿ, ಜೂ.೬ : ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ರವರ ಕೋರಿಕೆಯಂತೆ ತಾ. ೮ ರಂದು ಬೆಳಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ೬೬/೧೧ ಕೆವಿ ಪೊನ್ನಂಪೇಟೆ, ೬೬/೧೧ ಕೆವಿ ವೀರಾಜಪೇಟೆ, ೩೩/೧೧ಕೆವಿ ಶ್ರೀಮಂಗಲ, ೩೩/೧೧ಕೆವಿ ಸಿದ್ದಾಪುರ, ೩೩/೧೧ ಕೆವಿ ಮೂರ್ನಾಡು ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಆದ್ದರಿಂದ ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳಲೆ, ಕಾನೂರು, ಬಿರುನಾಣಿ, ಕುಟ್ಟ, ವೀರಾಜಪೇಟೆ, ಬಿ.ಶೆಟ್ಟಿಗೇರಿ, ಬೇತ್ರಿ, ಕಡಂಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಐಯ್ಯಂಗೇರಿ ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.