ಮಡಿಕೇರಿ, ಜೂ.೬: ಆಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ತಾ. ೮ ರಂದು ಬೆಳಗ್ಗೆ ೧೦.೩೦ ಗಂಟೆಗೆ ನಗರದ ಕೊಡವ ಸಮಾಜದ ಸಭಾಂಗಣದಲ್ಲಿ ‘ಸಾಲ ಸಂಪರ್ಕ ಕಾರ್ಯಕ್ರಮ’ ನಡೆಯಲಿದೆ ಎಂದು ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಆರ್.ಶಿವಕುಮಾರ್ ತಿಳಿಸಿದ್ದಾರೆ.
ಕ್ರೆಡಿಟ್ ಔಟ್‌ರೀಚ್ ಕಾರ್ಯಕ್ರಮದಲ್ಲಿ ಪಿಎಂಎAವೈ (ಮುದ್ರಾ), ಸ್ಟಾö್ಯಂಡ್ ಅಪ್ ಇಂಡಿಯಾ, ಪಿಎಂ ಸ್ವನಿಧಿ, ಇಸಿಎಲ್‌ಜಿಎಸ್, ಪಿಎಂಇಜಿಪಿ, ಕೃಷಿ ಮೂಲಸೌಕರ್ಯ ನಿಧಿ ಯೋಜನೆ(ಎಐಎಫ್), ಪಶು ಸಂಗೋಪನಾ ಮೂಲ ಸೌಕರ್ಯ ಅಭಿವೃದ್ಧಿ ನಿಧಿ ಯೋಜನೆ (ಎಎಚ್‌ಐಡಿಎಫ್), ಕೃಷಿ, ಎಂಎಸ್‌ಎAಇ, ಚಿಲ್ಲರೆ, ಶಿಕ್ಷಣ, ವಸತಿ ಸಾಲಗಳು ಮತ್ತು ಇತರ ಆತ್ಮನಿರ್ಭರ ಭಾರತ್ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ. ಜೊತೆಗೆ ಪಿಎಂಎಸ್‌ಬಿವೈ, ಪಿಎಂಜೆಜೆಬಿವೈ, ಎಪಿವೈನಂತಹ ವಿವಿಧ ಪಿಎಂ ಜನ ಸುರಕ್ಷಾ ಯೋಜನೆಗಳ ಬಗ್ಗೆ ವಿಶೇಷ ಜಾಗೃತಿ ಅಭಿಯಾನ ನಡೆಯಲಿದೆ.
ಸಾರ್ವಜನಿಕರು ತಮ್ಮ ತಮ್ಮ ಬ್ಯಾಂಕುಗಳಲ್ಲಿ ಹೊಸದಾಗಿ ಸಾಲ ಬೇಕಿದ್ದರೆ ಸಾಲದ ಅರ್ಜಿಗಳನ್ನು ಸಲ್ಲಿಸಲು ಲೀಡ್ ಬ್ಯಾಂಕ್ ತಿಳಿಸಿದೆ. ಇದರಿಂದ ತ್ವರಿತವಾಗಿ ಮಂಜೂರಾತಿ ಅಥವಾ ತಾತ್ವಿಕವಾಗಿ ಮಂಜೂರಾತಿ ಪತ್ರಗಳನ್ನು ವಿತರಿಸಲು ಸಹಾಯವಾಗುತ್ತದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕಾರ್ಯನಿರ್ವ ಹಿಸುತ್ತಿರುವ ಎಲ್ಲಾ ಸಾರ್ವಜನಿಕ ವಲಯದ ಬ್ಯಾಂಕುಗಳು, ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು, ಡಿಸಿಸಿಬಿಗಳು, ಎಂಎಫ್‌ಐಗಳು, ಎನ್‌ಬಿಎಫ್‌ಗಳು ಮತ್ತು ಖಾಸಗಿ ವಲಯದ ಬ್ಯಾಂಕುಗಳು ಮತ್ತು ನಬಾರ್ಡ್ ಮತ್ತು ಕೆವಿಐಸಿ, ಕೆವಿಐಬಿ ಮತ್ತು ಡಿಐಸಿಯಂತರ ಇತರ ಸರ್ಕಾರಿ ಇಲಾಖೆಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದೆ.
ಬ್ಯಾಂಕುಗಳಲ್ಲಿ ಲಭ್ಯವಿರುವ ವಿವಿಧ ಸಾಲ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಲು ಮತ್ತು ಸಾಲದ ಅರ್ಜಿಗಳನ್ನು ಸ್ವೀಕರಿಸಲು, ಮಂಜೂರಾತಿ ಅಥವಾ ತಾತ್ವಿಕವಾಗಿ ಮಂಜೂರಾತಿ ಪತ್ರಗಳನ್ನು ವಿತರಿಸಲು ಸಾಲ ಸಂಪರ್ಕ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕರು ಮಾಹಿತಿ ನೀಡಿದ್ದಾರೆ.