ಶನಿವಾರಸಂತೆ ಜೂ. ೭: ಸ್ಕೂಟರ್ ಚಲಾಯಿಸುವ ಸಂದರ್ಭ ನಿಯಂತ್ರಣ ತಪ್ಪಿ ಅಪಘಾತವಾಗಿ ಗಂಭೀರ ಗಾಯಗೊಂಡಿದ್ದ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬೆಂಬಳೂರು ಗ್ರಾಮದ ಬಿ.ವಿ. ಮೋಹನ್ ಚಂದ್ರ (೫೮) ಅವರು ಚಿಕಿತ್ಸೆ ಫಲಕಾರಿಯಾಗದೆ ಹಾಸನ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ತಾ. ೧ ರಂದು ಘಟನೆ ನಡೆದು ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆಯುತ್ತಿದ್ದ ಮೋಹನ್ ಚಂದ್ರ ಅವರನ್ನು ತಾ. ೪ ರಂದು ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.