ಸೋಮವಾರಪೇಟೆ, ಜೂ. ೭: ಕೆಲ ಕಾಂಗ್ರೆಸ್ಸಿಗರ ದೌರ್ಬಲ್ಯವನ್ನು ಉಪಯೋಗಿಸಿಕೊಂಡು ಬಿಜೆಪಿ ಎಲ್ಲಾ ಹಂತದಲ್ಲೂ ಜಯಗಳಿಸುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಒಗ್ಗಟ್ಟು ಪ್ರದರ್ಶಿಸಿದರೆ ಮಾತ್ರ ಬಿಜೆಪಿ ವಿರುದ್ಧ ಗೆಲ್ಲಲು ಸಾಧ್ಯ ಎಂದು ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಭಿಪ್ರಾಯಿಸಿದರು.
ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾನಸ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬಿಜೆಪಿಯ ದುರಾಡಳಿದಿಂದ ಜನ ಬೇಸತ್ತಿದ್ದಾರೆ. ಆಡಳಿತ ವಿರೋಧಿ ಅಲೆ ಇದೆ. ಇದನ್ನು ಸಮರ್ಥವಾಗಿ ಬಳಸಿಕೊಳ್ಳಬೇಕಿದೆ. ಕಾರ್ಯಕರ್ತರೇ ಕಾಂಗ್ರೆಸ್ ಪಕ್ಷದ ಬೆನ್ನೆಲುಬು. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಮುಂದಿನ ದಿನಗಳಲ್ಲಿ ಒಳ್ಳೆಯ ಸ್ಥಾನಮಾನ ಸಿಗಲಿದೆ ಎಂದು ಹೇಳಿದರು.
ಸಭೆಯಲ್ಲಿ ಭಾಗಿಯಾಗಿದ್ದ ಮಾಜಿ ಸಚಿವ ಬಿ.ಎ. ಜೀವಿಜಯ ಮಾತನಾಡಿ, ಸ್ವತಂತ್ರ ಭಾರತದ ಬಲಿಷ್ಠ ಸಂವಿಧಾನವನ್ನು ಉಳಿಸಿಕೊಳ್ಳಲು ದೇಶದ ನಿಜವಾದ ಪ್ರಜೆಗಳು ಹೋರಾಟ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಸಂಘಟಿಸಿ ಚುನಾವಣೆಯಲ್ಲಿ ಅಭ್ಯರ್ಥಿಗಳು ಗೆಲುವು ಸಾಧಿಸುವಂತೆ ಮಾಡಬೇಕಿದೆ ಎಂದು ಅಭಿಪ್ರಾಯಿಸಿದರು.
ಅಭಿವೃದ್ಧಿಯ ಪೊಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಪ್ರತಿ ಹಂತದಲ್ಲೂ ದೇಶವನ್ನು ಹಿಂದುಳಿಯುವAತೆ ಮಾಡಿದೆ. ಕಳೆದ ೮ ವರ್ಷಗಳಿಂದ ಭಾರತೀಯರ ಸ್ವತಂತ್ರ ಹರಣವಾಗುತ್ತಿದೆ. ಅಲ್ಪಸಂಖ್ಯಾತರು ಮತ್ತು ದಲಿತರ ಮೇಲೆ ನಿರಂತರ ಹಲ್ಲೆ ನಡೆಯುತ್ತಿದೆ. ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರು ಬರೆದ ಸಂವಿಧಾನವನ್ನು ಬುಡಮೇಲು ಮಾಡುವ ಕುತಂತ್ರöನಡೆಯುತ್ತಿದೆ. ದೇಶ ರಕ್ಷಣೆಗೆ ಹಿರಿಯ, ಕಿರಿಯ ಕಾಂಗ್ರೆಸ್ಸಿಗರು ಒಂದಾಗಬೇಕು ಎಂದು ಮನವಿ ಮಾಡಿದರು.
ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಟಿ.ಪಿ. ರಮೇಶ್ ಮಾತನಾಡಿ, ರಾಷ್ಟçಪಿತ ಮಹಾತ್ಮಗಾಂಧಿ, ಬಸವಣ್ಣ, ಪೆರಿಯಾರ್, ರಾಷ್ಟçಕವಿ ಕುವೆಂಪು ಇನ್ನಿತರ ಮಹಾನ್ ದಾರ್ಶನಿಕರಿಗೆ ಅವಮಾನ ಮಾಡುವ ಕೆಲಸದಲ್ಲಿ ಬಿಜೆಪಿ ಮತ್ತು ಸಂಘಪರಿವಾರ ಮುಂದಾಗಿದೆ. ಇವರನ್ನು ಪ್ರಶ್ನೆ ಮಾಡುವವರು ಇಲ್ಲದಂತಾಗಿದೆ. ಇವರ ದುರಾಡಳಿತ ನಿಲ್ಲಬೇಕಾದರೆ ಕಾಂಗ್ರೆಸ್ ಅಧಿಕಾರಕ್ಕೆ ಬರಲೇಬೇಕು. ಈ ಸಂಕಲ್ಪವನ್ನು ಪ್ರತಿಯೋರ್ವ ಕಾಂಗ್ರೆಸ್ ಕಾರ್ಯಕರ್ತ ಮಾಡಬೇಕೆಂದು ಕರೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್, ಪಕ್ಷದ ಮುಖಂಡರಾದ ಡಾ. ಮಂಥರ್‌ಗೌಡ, ಎಸ್.ಎಂ. ಚಂಗಪ್ಪ, ಕೆ.ಪಿ.ಚಂದ್ರಕಲಾ, ಕೆ.ಎಂ.ಲೋಕೇಶ್, ಎಚ್.ಎಸ್. ಚಂದ್ರಮೌಳಿ, ಕೆ.ಕೆ.ಮಂಜುನಾಥ್ ಕುಮಾರ್, ಕಾಂತರಾಜ್, ಕೆ.ಎ. ಯಾಕೂಬ್, ಅನಂತ್ ಕುಮಾರ್, ಸುರಯ್ಯಅಬ್ರಾರ್, ಬಿ.ಎ.ಪೃಥ್ವಿ, ಮೊಣ್ಣಪ್ಪ, ಎಚ್.ಎ.ನಾಗರಾಜ್, ಶೀಲಾ ಡಿಸೋಜ, ಬಿ.ಸಿ.ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.