ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ

ಬೆAಗಳೂರು, ಜೂ. ೭: ಭಯೋತ್ಪಾದನೆ ಚಟುವಟಿಕೆಗಳಲ್ಲಿ ತೊಡಗಿದ್ದನೆನ್ನಲಾದ ಜಮ್ಮು ಕಾಶ್ಮೀರದ ನಿವಾಸಿ, ವ್ಯಕ್ತಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದ್ದು, ರಾಜ್ಯದ ಪೊಲೀಸರೂ ಈ ಕುರಿತು ತನಿಖೆ ಆರಂಭಿಸಿದ್ದಾರೆ. ನಗರದಲ್ಲಿ ನೆಲೆಸಿದ್ದ ಶಂಕಿತ ಉಗ್ರರಿಗೆ ಆಶ್ರಯ ನೀಡಿದ್ದ ವ್ಯಕ್ತಿಗಳು ಹಾಗೂ ಸಂಸ್ಥೆಗಳ ಬಗ್ಗೆ ತನಿಖೆ ನಡೆಯುತ್ತಿದ್ದು, ಕರ್ನಾಟಕ ರಾಜ್ಯ ಪೊಲೀಸರು, ಜಮ್ಮು ಕಾಶ್ಮೀರ ರಾಜ್ಯದ ಪೊಲೀಸರ ಜತೆ ಸಮನ್ವಯ ಸಾಧಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಬಂಧಿಸಲಾದ, ಶಂಕಿತ ಉಗ್ರನಿಗೆ ನೆಲೆಸಲು ಅವಕಾಶ ಮಾಡಿಕೊಟ್ಟಿದ್ದಲ್ಲದೆ ಮೊಬೈಲ್ ಫೋನ್ ಪಡೆಯಲು ಹಾಗೂ ಇತರ ದಾಖಲೆಗಳನ್ನು ಪಡೆಯಲು ಸ್ಥಳೀಯರೂ, ಸಹಾಯ ಮಾಡಿದ್ದಾರೆ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ.

ಸಿಡಿಎಸ್ ನೇಮಕಾತಿ ಸಡಿಲ

ನವದೆಹಲಿ, ಜೂ. ೭: ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥರ (ಸಿಡಿಎಸ್) ನೇಮಕಕ್ಕೆ ಸಂಬAಧಿಸಿದAತೆ ಕೇಂದ್ರ ಸರ್ಕಾರ ನಿಯಮಗಳನ್ನು ಸಡಿಲಗೊಳಿಸಿದ್ದು, ೬೨ ವರ್ಷಕ್ಕಿಂತ ಕಡಿಮೆ ವಯಸ್ಸಿನ ಮೂರು ಸೇನೆಗಳಲ್ಲಿ ಯಾವುದೇ ಸೇವೆ ಸಲ್ಲಿಸುತ್ತಿರುವ ಅಥವಾ ನಿವೃತ್ತ ಲೆಫ್ಟಿನೆಂಟ್ ಜನರಲ್, ಏರ್ ಮಾರ್ಷಲ್ ಮತ್ತು ವೈಸ್ ಅಡ್ಮಿರಲ್ ಸಹ ಸಿಡಿಎಸ್ ಹುದ್ದೆಗೆ ಅರ್ಹರಾಗಿರುತ್ತಾರೆ ಎಂದು ಹೇಳಿದೆ. ಈ ಸಂಬAಧ ಕೇಂದ್ರ ಸರ್ಕಾರ ಹೊರಡಿಸಿದ ಅಧಿಸೂಚನೆಗಳ ಪ್ರಕಾರ, ಸೇನಾಪಡೆ, ನೌಕಾಪಡೆ ಮತ್ತು ಭಾರತೀಯ ವಾಯುಪಡೆಯ ಮುಖ್ಯಸ್ಥರ ಜೊತೆಗೆ ಈ ಮೂರು ಸೇನೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಇತರೆ ಉನ್ನತ ಅಧಿಕಾರಿಗಳನ್ನು ಸಹ ಸಿಡಿಎಸ್ ಹುದ್ದೆಗೆ ಪರಿಗಣಿಸಬಹುದು ಎಂದು ಹೇಳಿದೆ. ಈ ಮೂಲಕ ಸೇನಾ ಪಡೆ, ವಾಯು ಪಡೆ ಅಥವಾ ನೌಕಾ ಪಡೆಯಲ್ಲಿನ ಎರಡನೇ ಅತ್ಯುನ್ನತ ದರ್ಜೆಯ ಅಧಿಕಾರಿಗಳು ತಮ್ಮ ಹಿರಿಯ ಅಧಿಕಾರಿಗಳನ್ನು ಹಿಂದಿಕ್ಕಿ ಸಿಡಿಎಸ್ ಹುದ್ದೆಗೆ ಏರಲು ದಾರಿ ಮಾಡಿಕೊಡಲಾಗಿದೆ. ಡಿಸೆಂಬರ್ ೮ ರಂದು ಹೆಲಿಕಾಪ್ಟರ್ ಅಪಘಾತದಲ್ಲಿ ಜನರಲ್ ಬಿಪಿನ್ ರಾವತ್ ಸಾವನ್ನಪ್ಪಿದ ನಂತರ ಸಿಡಿಎಸ್ ಹುದ್ದೆ ಖಾಲಿ ಇದೆ. ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಅಥವಾ ನಿವೃತ್ತರಾಗಿರುವ ಲೆಫ್ಟಿನೆಂಟ್ ಜನರಲ್, ಏರ್ ಮಾರ್ಷಲ್ ಅಥವಾ ವೈಸ್ ಅಡ್ಮಿರಲ್ ಅವರನ್ನು ಸಿಡಿಎಸ್ ಆಗಿ ನೇಮಕ ಮಾಡಲು ಅರ್ಹರಾಗುವಂತೆ ಮಾಡಲು ಏರ್ ಫೋರ್ಸ್ ಆಕ್ಟ್, ಆರ್ಮಿ ಆಕ್ಟ್ ಮತ್ತು ನೌಕಾಪಡೆಯ ಕಾಯಿದೆಯನ್ನು ತಿದ್ದುಪಡಿ ಮಾಡಿ ಸರ್ಕಾರ ಸೋಮವಾರ ಪ್ರತ್ಯೇಕ ಅಧಿಸೂಚನೆಗಳನ್ನು ಹೊರಡಿಸಿದೆ. ರಕ್ಷಣಾ ಪಡೆಗಳ ಮುಖ್ಯಸ್ಥರ ಸೇವೆಯ ಅವಧಿಯು ಗರಿಷ್ಠ ೬೫ ವರ್ಷವಾಗಿದೆ. ಆದರೆ, ಸರ್ಕಾರ ಬಯಸಿದ್ದಲ್ಲಿ ಅದನ್ನು ವಿಸ್ತರಣೆ ಮಾಡಲು ಅವಕಾಶವಿದೆ.

ದೆಹಲಿ ಆರೋಗ್ಯ ಸಚಿವ ಮನೆ ಮೇಲೆ ಇಡಿ ದಾಳಿ

ನವದೆಹಲಿ, ಜೂ. ೭: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ನಿವಾಸ ಮತ್ತು ಅವರ ಸಹವರ್ತಿಗಳ ನಿವಾಸ, ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿ ತೀವ್ರ ಶೋಧ ನಡೆಸಿದ್ದು, ಈ ವೇಳೆ ಎರಡು ಕೋಟಿಗೂ ಹೆಚ್ಚು ನಗದು ಮತ್ತು ೧.೮ ಕೆ.ಜಿ. ತೂಕದ ೧೩೩ ಚಿನ್ನದ ನಾಣ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಂಗಳವಾರ ಇಡಿ ತಿಳಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದ ಮುಂದುವರಿದ ಭಾಗವಾಗಿ ದೆಹಲಿಯಲ್ಲಿರುವ ಜೈನ್ ಅವರ ವಸತಿ ಆವರಣಗಳು ಮತ್ತು ಇತರ ಕೆಲವು ಸ್ಥಳಗಳಲ್ಲಿ ದಾಳಿಗಳನ್ನು ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯಸಭೆ ಚುನಾವಣೆ-ಹಣಕ್ಕೆ ಅಮಿಷ ಆರೋಪ

ಜೈಪುರ, ಜೂ. ೭: ರಾಜಸ್ಥಾನ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಸುಭಾಷ್‌ಚಂದ್ರ ಅವರ ಗೆಲುವಿಗಾಗಿ ಕುದುರೆ ವ್ಯಾಪಾರ ನಡೆಸಲಾಗಿದೆ ಎಂದು ಆರೋಪಿಸಿ ಆಡಳಿತಾರೂಢ ಕಾಂಗ್ರೆಸ್ ಇದೀಗ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಈ ಮಧ್ಯೆ ಬಿಜೆಪಿಯ ಮಾಜಿ ಮಿತ್ರ ಪಕ್ಷವಾಗಿರುವ ನಾಗೌರ್ ಸಂಸದ ಹನುಮಾನ್ ಬೇನಿವಾಲ್ ಅವರ ರಾಷ್ಟಿçÃಯ ಲೋಕತಾಂತ್ರಿಕ್ ಪಾರ್ಟಿ (ಆರ್‌ಎಲ್‌ಪಿ), ಮೂವರು ಶಾಸಕರು ಸುಭಾಷ್ ಚಂದ್ರ ಅವರನ್ನು ಬೆಂಬಲಿಸುವುದಾಗಿ ಘೋಷಿಸಿದ್ದರು. ಈ ಮೂವರು ಶಾಸಕರ ಮತಗಳಿಗೆ ರೂ. ೪೦ ಕೋಟಿ ಡೀಲ್ ನಡೆದಿದೆ ಎಂದು ಆರೋಪಿಸಿದೆ. ರಾಜ್ಯದಲ್ಲಿ ರಾಜ್ಯಸಭಾ ಚುನಾವಣೆಯ ನಾಲ್ಕನೇ ಸ್ಥಾನ ಗೆಲ್ಲುವ ಹಗ್ಗಜಗ್ಗಾಟದಲ್ಲಿ ಕುದುರೆ ವ್ಯಾಪಾರದ ಬಗ್ಗೆ ಆರೋಪ-ಪ್ರತ್ಯಾ ರೋಪಗಳು ತೀವ್ರಗೊಂಡಿವೆ. ಸರ್ಕಾರದ ಮುಖ್ಯ ಸಚೇತಕ ಹಾಗೂ ಜಲ ಸಂಪನ್ಮೂಲ ಸಚಿವ ಡಾ. ಮಹೇಶ್ ಜೋಶಿ ಮಂಗಳವಾರ ಶಾಸಕರ ಕುದುರೆ ವ್ಯಾಪಾರದ ಸಾಧ್ಯತೆಗಳ ಕುರಿತು ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ರೋಹಿತ್ ಚಕ್ರತೀರ್ಥ ಸಮಿತಿಯಿಂದ ಹೊರಕ್ಕೆ

ಬೆಂಗಳೂರು, ಜೂ. ೭: ಶಾಲಾ ಪಠ್ಯಪುಸ್ತಕ ಸಮಿತಿಯ ಸಾಲು-ಸಾಲು ವಿವಾದಗಳ ಕೇಂದ್ರ ಬಿಂದುವಾಗಿದ್ದ ರೋಹಿತ್ ಚಕ್ರತೀರ್ಥ ಅವರನ್ನು ಪಿಯುಸಿ ಪಠ್ಯ ಪರಿಷ್ಕರಣಾ ಸಮಿತಿಯಿಂದ ಕೈಬಿಡಲಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದು, ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಅವರನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ. ಪಠ್ಯ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಅವರನ್ನು ಈ ಮೊದಲು ಸರ್ಕಾರವು ನೇಮಿಸಿತ್ತು. ಆದರೆ ಸಾಲುಸಾಲು ವಿವಾದಗಳು ಎದುರಾಗಿತ್ತು. ಇದೀಗ ರೋಹಿತ್ ಚಕ್ರತೀರ್ಥ ಅವರನ್ನು ಕೈಬಿಡಲು ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.