ಸೋಮವಾರಪೇಟೆ, ಜೂ. ೭: ಇಲ್ಲಿನ ವರ್ತಕರ ಸಂಘದ ವತಿಯಿಂದ ರೂ. ೧.೨೦ ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಭವನ ನಿರ್ಮಾಣ ಕಾರ್ಯಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಚಾಲನೆ ನೀಡಿದರು.

ಇಲ್ಲಿನ ಮಾನಸ ಸಭಾಂಗಣದಲ್ಲಿ ಆಯೋಜಿಸಿದ್ದ ಸಂಘದ ಮಹಾಸಭೆಯಲ್ಲಿ ಭಾಗಿಯಾಗಿದ್ದ ಶಾಸಕರು, ನೂತನ ಸಮುದಾಯ ಭವನದ ನೀಲನಕ್ಷೆಯನ್ನು ಬಿಡುಗಡೆ ಮಾಡುವ ಮೂಲಕ ಸಮುದಾಯ ಭವನ ನಿರ್ಮಾಣಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ವರ್ತಕ ಸಮುದಾಯವು ತಮ್ಮ ವೃತ್ತಿಯನ್ನು ಗೌರವಿಸಬೇಕು. ಗ್ರಾಹಕರೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳಬೇಕು. ಸಮುದಾಯದ ಅಭಿವೃದ್ಧಿಗೆ ಚಿಂತನೆ ನಡೆಸಬೇಕು ಶಾಸಕರು, ನೂತನ ಸಮುದಾಯ ಭವನದ ನೀಲನಕ್ಷೆಯನ್ನು ಬಿಡುಗಡೆ ಮಾಡುವ ಮೂಲಕ ಸಮುದಾಯ ಭವನ ನಿರ್ಮಾಣಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ವರ್ತಕ ಸಮುದಾಯವು ತಮ್ಮ ವೃತ್ತಿಯನ್ನು ಗೌರವಿಸಬೇಕು. ಗ್ರಾಹಕರೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳಬೇಕು. ಸಮುದಾಯದ ಅಭಿವೃದ್ಧಿಗೆ ಚಿಂತನೆ ನಡೆಸಬೇಕು ಯೋಜನೆ ತಯಾರಿಸಲಾಗಿದೆ. ಶೀಘ್ರದಲ್ಲೇ ಕಟ್ಟಡ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.

ಸಭೆಯಲ್ಲಿ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟಿçÃಸ್‌ನ ಪ್ರಧಾನ ಕಾರ್ಯದರ್ಶಿ ಅಂಬೇಕಲ್ ನವೀನ್, ಮಾಜಿ ಅಧ್ಯಕ್ಷ ಚಿದ್ವಿಲಾಸ್, ಜಿಲ್ಲಾ ಉಪಾಧ್ಯಕ್ಷ ನಾಗೇಂದ್ರ ಪ್ರಸಾದ್ ಅವರುಗಳು ಮಾತನಾಡಿ, ಸಂಘದ ಬೆಳವಣಿಗೆಗೆ ಸಲಹೆ ನೀಡಿದರು.

ಸಭೆಯಲ್ಲಿ ವರ್ತಕರ ಸಂಘದ ಸದಸ್ಯರುಗಳಾದ ಬಿ.ಎಸ್. ಉದಯಕುಮಾರ್, ಎ.ಬಿ. ಪ್ರಸನ್ನ ಅವರುಗಳನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ ಸಂಘದ ಸದಸ್ಯರಾದ ಬಾಬುರಾಯ ಅವರ ಪುತ್ರಿ ಸಿಂಚನಾಳನ್ನು ಅಭಿನಂದಿಸಲಾಯಿತು. ವೇದಿಕೆಯಲ್ಲಿ ಉದ್ಯಮಿ ಶ್ರೀಧರ್, ಸಂಘದ ಖಜಾಂಚಿ ಜಯರಾಂ ಉಪಸ್ಥಿತರಿದ್ದರು.