ಮಡಿಕೇರಿ, ಜೂ.೭: ಇತ್ತೀಚೆಗೆ ಭೋಪಾಲ್‌ನಲ್ಲಿ ನಡೆದ ಭಾರತೀಯ ೧೨ನೇ ಹಾಕಿ ಹಿರಿಯರ ಬಾಲಕಿಯರ ವಿಭಾಗದಲ್ಲಿ ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ(ಸಾಯಿ) ಐವರು ವಿದ್ಯಾರ್ಥಿನಿಯರು ಪಾಲ್ಗೊಂಡು ಬೆಳ್ಳಿ ಪದಕ ಪಡೆದಿದ್ದಾರೆ. ಈ ವಿದ್ಯಾರ್ಥಿನಿಯರಿಗೆ ಅಭಿನಂದಿಸುವ ಕಾರ್ಯಕ್ರಮವು ತಾ. ೮ ರಂದು ಮಧ್ಯಾಹ್ನ ೩ ಗಂಟೆಗೆ ನಗರದ ಭಾರತೀಯ ಕ್ರೀಡಾ ಪ್ರಾಧಿಕಾರ ವಿದ್ಯಾರ್ಥಿ ನಿಲಯದಲ್ಲಿ ನಡೆಯಲಿದೆ.

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಭಾರತೀಯ ಕ್ರೀಡಾ ಪ್ರಾಧಿಕಾರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕಿ ಮಿನಿ ಉನ್ನಿರಾಜ್ ತಿಳಿಸಿದ್ದಾರೆ.