ಮಡಿಕೇರಿ, ಜೂ. ೭: ಹಾಡಿ ಜನಗಳ ಆರೋಗ್ಯ ಬಗ್ಗೆ ಗಮನ ಹರಿಸುವುದರೊಂದಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವಂತೆ ಕ್ರಮವಹಿಸಬೇಕಾಗಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.

ಇಂದು ವೀರಾಜಪೇಟೆ ತಾಲೂಕಿನ ನಾಲ್ಕೇರಿ ಹಾಗೂ ಕೆ.ಬಾಡಗ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಬೊಮ್ಮಾಡು ಮತ್ತು ಕೊಡಂಗೆ ಹಾಡಿಗಳಿಗೆ ಭೇಟಿ ನೀಡಿ, ಹಾಡಿ ಜನರ ಯೋಗಕ್ಷೇಮ ವಿಚಾರಿಸಿ , ಗರ್ಭಿಣಿಯರು ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಲು ತಾಲೂಕು ಆರೋಗ್ಯಧಿಕಾರಿಗಳಿಗೆ ತಿಳಿಸಿದರು.

ನಂತರ ಬೊಮ್ಮಾಡು ಆಶ್ರಮ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳ ಆರೋಗ್ಯದ ಬಗ್ಗೆ ವಿಚಾರಿಸಿ ಮಕ್ಕಳಿಗೆ ಮುಂದಿನ ದಿನಗಳಲ್ಲಿ ಪ್ರೋಟೀನ್ ಪೌಡರ್‌ಗಳನ್ನು ನೀಡುವಂತೆ ಶಿಶು ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿ ದರು. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಉತ್ತಮವಾದ ಪೌಷ್ಠಿಕಾಂಶವುಳ್ಳ ಆಹಾರಗಳನ್ನು ನೀಡಿ , ಮಕ್ಕಳ ಬೆಳವಣಿಗೆಗೆ ಸಹಕರಿಸುವಂತೆ ಅಂಗನವಾಡಿ ಆಶಾ ಕಾರ್ಯಕರ್ತೆಯರಿಗೆ ಹೇಳಿದರು.

ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸಮಗ್ರ ಕೆರೆ ಅಭಿವೃದ್ಧಿ , ಅಮೃತ ಸರೋವರ, ಮೈದಾನ ಅಭಿವೃದ್ಧಿ ಸಂಬAಧ ತಾಲೂಕಿನ ಶ್ರೀಮಂಗಲ, ಹುದಿಕೇರಿ, ಕೆ.ಬಾಡಗ, ಪೊನ್ನಂಪೇಟೆ ಗ್ರಾ.ಪಂ.ಗಳಿಗೆ ತೆರಳಿ ಸ್ಥಳಗಳನ್ನು ಪರಿಶೀಲಿಸಿದರು.

ಇದೇ ಸಂದರ್ಭದಲ್ಲಿ ಗ್ರಾ.ಪಂ.ಗಳ ಅಧ್ಯಕ್ಷರು, ಸದಸ್ಯರು, ವೀರಾಜಪೇಟೆ ತಾ.ಪಂ. ಕಾಯನಿರ್ವಾಹಕ ಅಧಿಕಾರಿಗಳಾದ ಕೆ.ಸಿ.ಅಪ್ಪಣ್ಣ, ಡಿಎಚ್‌ಓ ವೆಂಕಟೇಶ್, ಟಿಎಚ್‌ಓ ಯತಿರಾಜ್, ಐಟಿಡಿಪಿ ಇಲಾಖೆಯ ಗುರುಶಾಂತಪ, ಸಿಡಿಪಿಓ ರಾಜೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಸತೀಶ್, ರಾಜೇಶ್, ಪುಟ್ಟರಾಜು , ಪೂಣಚ್ಚ, ಸ್ಥಳೀಯ ವೈದ್ಯರು, ತಾಂತ್ರಿಕ ಸಂಯೋಜಕ ನಿರಂಜನ್, ತಾಂತ್ರಿಕ ಸಹಾಯಕ ಅಭಿಯಂತರÀ ಹೇಮಂತ್, ತಾಲೂಕು ಐ.ಇ.ಸಿ.ಸಂಯೋಜಕ ನರೇಂದ್ರ, ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಗೂ ಸ್ಥಳೀಯರು ಹಾಜರಿದ್ದರು.