ಕುಶಾಲನಗರ, ಜೂ. ೮: ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ವನ್ನು ಬಿಜೆಪಿ ಕಾರ್ಯಕ್ರಮವಾಗಿ ಪರಿವರ್ತಿಸಲು ಕಾರಣರಾದ ೭ನೇ ಹೊಸಕೋಟೆ ಗ್ರಾಮ ಪಂಚಾಯಿತಿ ಅಧಿಕಾರಿಗಳ ಮೇಲೆ ಕೂಡಲೇ ಸರ್ಕಾರ ಸೂಕ್ತ ಶಿಸ್ತು ಕ್ರಮಕೈಗೊಳ್ಳಬೇಕು ಎಂದು ಕಾಂಗ್ರೆಸ್ ಪಕ್ಷದ ಪ್ರಮುಖರಾದ ವಿ.ಪಿ ಶಶಿಧರ್ ಆಗ್ರಹಿಸಿದ್ದಾರೆ.

ಅವರು ಕುಶಾಲನಗರ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕುಶಾಲನಗರ ತಾಲೂಕಿನ ಹೊಸಕೋಟೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿ ವಿಶ್ವ ಪರಿಸರ ದಿನಾಚರಣೆಯ ದಿನದಂದು ಸರ್ಕಾರಿ ಶಾಲಾ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮದಂದು ಶಾಸಕರು ಮತ್ತು ಬಿಜೆಪಿ ಪ್ರಮುಖರೊಂದಿಗೆ ಬಿಜೆಪಿ ಟೋಪಿ ಧರಿಸಿ ಪಾಲ್ಗೊಂಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸುನಿತಾ ಬಿಜೆಪಿ ಟೋಪಿ ಧರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಕಂಡುಬAದಿವೆ. ೭ನೇ ಹೊಸಕೋಟೆ ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಕ್ರಮವನ್ನು ಖಂಡಿಸಿದ್ದು ತಕ್ಷಣ ಸಂಬAಧಿಸಿದ ಪಂಚಾಯಿತಿ ಕಾರ್ಯದರ್ಶಿ ಮೇಲೆ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕ್ರಮಕೈಗೊಳ್ಳಬೇಕು. ಅವರನ್ನು ತಕ್ಷಣ ಕೆಲಸದಿಂದ ವಜಾ ಮಾಡಬೇಕು ಎಂದು ಶಶಿಧರ್ ಆಗ್ರಹಿಸಿದ್ದಾರೆ.

ಸಂಬAಧಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅವರ ಮೇಲೆ ಇಲಾಖೆ ಕ್ರಮ ಕೈಗೊಳ್ಳಬೇಕು ಮತ್ತು ಕಾರ್ಯದರ್ಶಿ ಸುನೀತಾ ಅವರನ್ನು ತಕ್ಷಣ ವಜಾಗೊಳಿಸಿ ಕ್ರಮ ಕೈಗೊಳ್ಳದಿದ್ದಲ್ಲಿ ೭ನೇ ಹೊಸಕೋಟೆ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಪಕ್ಷದ ನೇತೃತ್ವದಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು ನಾಗರಿಕರ ಸಹಯೋಗ ದೊಂದಿಗೆ ಮುತ್ತಿಗೆ ಹಾಕಲಾಗುವುದು. ಈ ನಡುವೆ ಮಡಿಕೇರಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಈ ಸಂದರ್ಭ ಮಾತನಾಡಿದ ಪಂಚಾಯಿತಿ ಸದಸ್ಯ ಮುಸ್ತಾಪ ಪಂಚಾಯತಿ ಕಾರ್ಯದರ್ಶಿ ಬಗ್ಗೆ ಹಲವು ಸಾರ್ವಜನಿಕ ದೂರುಗಳು ಇರುವುದಾಗಿ ಹೇಳಿದರು. ಪಕ್ಷದ ಪ್ರಮುಖರಾದ ಎ.ಪಿ. ರಮೇಶ್, ಸಿದ್ದಿಕ್, ಅಬ್ದುಲ್ ರಜಾಕ್ ಇದ್ದರು.