ಮಡಿಕೇರಿ, ಜೂ. ೮: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ‘ಒಂದೇ ಒಂದು ಭೂಮಿ’ ವಿಷಯದ ಕುರಿತು ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಪಿ. ಅನಿತಾ ಅವರು ಚಿತ್ರ ಬಿಡಿಸುವ ಮೂಲಕ ಚಾಲನೆ ನೀಡಿದರು. ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ವಿಜ್ಞಾನ ಪರಿಷತ್ತು ಜಿಲ್ಲಾ ಘಟಕ, ನಗರಸಭೆ, ಸರ್ಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ ಇವರ ಮಡಿಕೇರಿ, ಜೂ. ೮: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ‘ಒಂದೇ ಒಂದು ಭೂಮಿ’ ವಿಷಯದ ಕುರಿತು ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಪಿ. ಅನಿತಾ ಅವರು ಚಿತ್ರ ಬಿಡಿಸುವ ಮೂಲಕ ಚಾಲನೆ ನೀಡಿದರು. ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ವಿಜ್ಞಾನ ಪರಿಷತ್ತು ಜಿಲ್ಲಾ ಘಟಕ, ನಗರಸಭೆ, ಸರ್ಕಾರಿ ಪದವಿಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ ಇವರ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ. ಪ್ರೇಮ್ಕುಮಾರ್ ಪರಿಸರ ದಿನಾಚರಣೆ ಮಹತ್ವ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿ ಪಿ.ಕೆ. ಉಮಾಶಂಕರ, ಶಿಕ್ಷಣ ಇಲಾಖೆಯ ಉಪ ಯೋಜನಾ ಸಮನ್ವಯಾಧಿಕಾರಿ ಎಂ. ಕೃಷ್ಣಪ್ಪ, ಸ್ಕೌಟ್ಸ್ ಮತ್ತು ಗೈಡ್ಸ್ನ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯೂ, ಆಯುಕ್ತ ಜಿಮ್ಮಿ ಸಿಕ್ವೇರಾ, ಉಪ ಪ್ರಾಂಶುಪಾಲ ನಳಿನಿ, ಜಿಲ್ಲಾ ಸಂಯೋಜಕರಾದ ಕೆ.ಬಿ. ರಾಮಕೃಷ್ಣ, ಎಂ.ಹೆಚ್. ಹರೀಶ್, ಸ್ಕೌಟ್ಸ್ ಮತ್ತು ಗೈಡ್ಸ್ನ ದಮಯಂತಿ, ವಿಜ್ಞಾನ ಪರಿಷತ್ತಿನ ಸುರೇಶ್, ಇತರರು ಪಾಲ್ಗೊಂಡಿದ್ದರು.