ಮುಳ್ಳೂರು: ಸಮೀಪದ ಆಲೂರು-ಸಿದ್ದಾಪುರದ ಸಮುದಾಯ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಸುಪರ್ಣ ಕೃಷ್ಣಾನಂದ್ ಅವರು ಆಲೂರು-ಸಿದ್ದಾಪುರ ಸಮುದಾಯ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ವ್ಯಾಪ್ತಿಯಲ್ಲಿ ಹೊಸದಾಗಿ ಜನಿಸುವ ಶಿಶುವಿನ ಪೋಷಕರಿಗೆ ಒಂದು ಸಸಿಯನ್ನು ಕೊಟ್ಟು, ನೆಟ್ಟು ಪೋಷಣೆ ಮಾಡುವ ಉದ್ದೇಶದಿಂದ ‘ಶಿಶುವಿಗೊಂದು ಸಸಿ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಪರಿಸರ ದಿನಾಚಣೆ ಪ್ರಯುಕ್ತ ‘ಶಿಶುವಿಗೊಂದು ಸಸಿ’ ಕಾರ್ಯಕ್ರಮಕ್ಕೆ ಆಸ್ಪತ್ರೆ ವ್ಯಾಪ್ತಿಯಲ್ಲಿ ಹುಟ್ಟಿದ ಮಗುವಿನ ಪೋಷಕರಿಗೆ ಗಿಡಗಳನ್ನು ಕೊಟ್ಟು ಚಾಲನೆ ನೀಡಲಾಯಿತು. ಆಲೂರು-ಸಿದ್ದಾಪುರ ಸಮುದಾಯ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ವ್ಯಾಪ್ತಿಯಲ್ಲಿ ೧೩,೩೫೨ ಜನಸಂಖ್ಯೆ ಇದ್ದು, ಈ ವ್ಯಾಪ್ತಿಯಲ್ಲಿ ಹುಟ್ಟುವ ಶಿಶುಗಳ ಮಾಹಿತಿ ಪಡೆದು ಆಸ್ಪತ್ರೆ ವತಿಯಿಂದ ಶಿಶುಗಳಿಗೆ ಸಸಿ ವಿತರಣೆ ಮಾಡಲಾಗುತ್ತದೆ.

ವೈದ್ಯಾಧಿಕಾರಿ ಡಾ. ಸುಪರ್ಣ ಕೃಷ್ಣಾನಂದ್ ಮಾತನಾಡಿ, ಪ್ರತಿಯೊಂದು ಜನನಕ್ಕೂ ಒಂದು ಸಸಿ ನೆಟ್ಟರೆ ಜನಸಂಖ್ಯೆ ವೃದ್ಧಿಯಾದಷ್ಟೆ ಮರಗಳು ಅಭಿವೃದ್ಧಿ ಹೊಂದಿ ಹಸಿರು ಪರಿಸರದೊಂದಿಗೆ ಜನರು ಶುದ್ಧಗಾಳಿ ಸೇವಿಸಿ ಆರೋಗ್ಯವಂತರಾಗುವ ಉದ್ದೇಶದಿಂದ ‘ಶಿಶುವಿಗೊಂದು ಸಸಿ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಯೋಜನೆ ಮುಂದುವರೆಯುತ್ತದೆ ಎಂದರು.

ವಿವಿಧ ಕಡೆಗಳಲ್ಲಿ ಹೊಸದಾಗಿ ಹುಟ್ಟಿದ ಶಿಶುವಿಗೆ ಸಸಿ ವಿತರಣೆ ಮಾಡುವ ಅಭಿಯಾನ ಸಂದರ್ಭದಲ್ಲಿ ಆಡಳಿತ ವೈದ್ಯಾಧಿಕಾರಿ ಡಾ. ಸುಪರ್ಣ ಕೃಷ್ಣಾನಂದ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಹೆಚ್.ಡಿ. ಪ್ರವೀಣ್‌ಕುಮಾರ್, ಪಿ.ಹೆಚ್.ಸಿ.ಒ ಸಮಿತಾ, ದಿವ್ಯ, ಶೋಭಾ, ಸಿ.ಹೆಚ್.ಒ ಸ್ವಾತಿ, ನಂದಿನಿ, ಚಂದನ ಅಂಗನವಾಡಿ ಶಿಕ್ಷಕಿ ಜ್ಯೋತಿ ಪ್ರವೀಣ್, ಆಶಾ ಕಾರ್ಯಕರ್ತೆಯರು ಹಾಜರಿದ್ದರು.ಸುಂಟಿಕೊಪ್ಪ: ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸುಂದರವಾಗಿ ಮಾತ್ರವಲ್ಲದೆ ಸ್ವಚ್ಛವಾಗಿ ಇಟ್ಟುಕೊಳ್ಳುವ ಮೂಲಕ ವಿಶ್ವ ಪರಿಸರ ದಿನಕ್ಕೆ ಅರ್ಥ ಮತ್ತು ಮಹತ್ವ ನೀಡಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಕರೆ ನೀಡಿದರು.

ವಿಶ್ವ ಪರಿಸರ ದಿನದ ಅಂಗವಾಗಿ ಸುಂಟಿಕೊಪ್ಪ ಶಕ್ತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಮತ್ತು ಸ್ವಚ್ಛತಾ ಆಂದೋಲನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಸ್.ಸಿ. ಸತೀಶ್, ಸೋಮವಾರಪೇಟೆ ತಾಲೂಕು ಬಿಜೆಪಿ ಕಾರ್ಯದರ್ಶಿ ಗೌತಮ್, ಜಿಲ್ಲಾ ಓಬಿಸಿ ಉಪಾಧ್ಯಕ್ಷ ಬಿ.ಕೆ. ಮೋಹನ್, ಸೋಮವಾರಪೇಟೆ ತಾಲೂಕು ಬಿಜೆಪಿ ಓಬಿಸಿ ಕಾರ್ಯದರ್ಶಿ ಪಿ.ಆರ್. ಸುನಿಲ್‌ಕುಮಾರ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ವಿಮಲಾವತಿ, ಪಂಚಾಯಿತಿ ಸದಸ್ಯರುಗಳಾದ ಬಿ.ಎಂ. ಸುರೇಶ್, ಗೀತಾ, ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್‌ಗಳಾದ ಬಿ.ಕೆ. ಪ್ರಶಾಂತ್ (ಕೊಕಾ), ವಾಸುದೇವ್, ಯುವ ಮೋರ್ಚಾ ವಿಘ್ನೇಶ್, ಒಬಿಸಿ ಅಧ್ಯಕ್ಷ ಸಿ.ಸಿ. ಸುನಿಲ್‌ಕುಮಾರ್, ಪ್ರಾ.ಕೃ.ಪ.ಸ.ಸಂ.ನಿ. ನಿರ್ದೇಶಕಿ ಲೀಲಾ ಮೇದಪ್ಪ, ಕೆದಕಲ್ ಮಾಜಿ ಗ್ರಾ.ಪಂ. ಸದಸ್ಯ ರಮೇಶ್ ಹಾಗೂ ಬಿಜೆಪಿ ಕಾರ್ಯರ್ತರು ಮತ್ತಿತರರು ಇದ್ದರು.ವೀರಾಜಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವೀರಾಜಪೇಟೆ, ಹಾಗೂ ಮಡಿಕೇರಿ ತಾಲೂಕು ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕೊಡಗು ಜಿಲ್ಲೆಯ ವೀರಾಜಪೇಟೆ, ಮಡಿಕೇರಿ ತಾಲೂಕಿನ ೮ ಕಡೆಗಳಲ್ಲಿ ಗಿಡ ನಾಟಿ ಕಾರ್ಯಕ್ರಮ ನಡೆಯಿತು.

ಪರಿಸರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವೀರಾಜಪೇಟೆ, ಮಡಿಕೇರಿ ತಾಲೂಕಿನ ಯೋಜನಾಧಿಕಾರಿ ದಿನೇಶ್ ಮಾತನಾಡಿ, ಪರಿಸರವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಪರಿಸರ ಉಳಿದರೆ ಮಾತ್ರ ನಾವು ಉಳಿಯುವುದು ಎಂದು ನುಡಿದರು.

ಈ ಸಂದರ್ಭ ಪರಿಸರ ರಕ್ಷಣೆಯೇ ನಮ್ಮ ಮೊದಲ ಧ್ಯೇಯ ಎನ್ನುವಂತೆ ಪ್ರತಿಜ್ಞಾವಿಧಿಯನ್ನು ಕೈಗೊಳ್ಳಲಾಯಿತು. ಮನೆಗೊಂದು ಗಿಡ, ಊರಿಗೊಂದು ವನ, ಶಾಲೆಗೊಂದು ಹಣ್ಣಿನ ತೋಟ ಎಂಬAತೆ ಜಿಲ್ಲೆಯ ಹೊಸ್ಕೇರಿ, ಶಾಸ್ತಿçನಗರ, ದೇವರಕಾಡು, ಮರಗೋಡು, ನಾಪೋಕ್ಲಿನ ಹಿಂದೂ, ಕ್ರಿಶ್ಚಿಯನ್, ಮುಸ್ಲಿಂ ರುದ್ರಭೂಮಿ, ಸಿದ್ದಾಪುರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಿಟ್ಟಂಗಾಲದ ನಾಂಗಾಲ ಬಳಿಯ ಈಶ್ವರ ದೇವಾಲಯದ ಆವರಣ, ದೇವರಪುರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೇತು ಅಂಗನವಾಡಿ ಕೇಂದ್ರ, ಚೆರಿಯಪರಂಬುವಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಪೊನ್ನಂಪೇಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವೀರಾಜಪೇಟೆ, ಮಡಿಕೇರಿ ತಾಲೂಕು ಮತ್ತು ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಂಯೋಜಕರು, ಸ್ವಯಂಸೇವಕರು ವೀರಾಜಪೇಟೆ, ಮಡಿಕೇರಿ ತಾಲೂಕು, ವಲಯ ಅರಣ್ಯ ಇಲಾಖೆ ಹಾಗೂ ಸಾಮಾಜಿಕ ಅರಣ್ಯ ಇಲಾಖೆ, ಗ್ರಾಮ ಪಂಚಾಯಿತಿ, ಶಾಲಾ ಎಸ್‌ಡಿಎಂಸಿ ತಂಡ ದೇವಸ್ಥಾನ ಹಾಗೂ ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಿತು.

ಹಣ್ಣಿನ ಹಾಗೂ ಅರಣ್ಯ ಗಿಡಗಳಾದ ನೇರಳೆ, ಮಹಾಗನಿ, ಹೊಂಗೆ, ಹೊನ್ನೆ, ಹೆಬ್ಬೇವು, ಸಂಪಿಗೆ, ಸೀತಾಫಲ, ನೆಲ್ಲಿಕಾಯಿ, ಸೀಬೆ, ಲಿಂಬೆ, ಕಹಿಬೇವು, ಬಿಲ್ವಪತ್ರೆ, ಪುನರ್ಪುಳಿ, ಪಪ್ಪಾಯಿ ಗಿಡ ಸೇರಿದಂತೆ ಒಟ್ಟು ೬೮೦ ಗಿಡಗಳನ್ನು ಶಾಲೆ, ರುದ್ರಭೂಮಿ, ದೇವಸ್ಥಾನದ ಆವರಣ, ಹಾಗೂ ದೇವರ ಕಾಡಿನಲ್ಲಿ ನಾಟಿ ಮಾಡಲಾಯಿತು.

ಮನೆಗೊಂದು ಗಿಡ ಎಂಬAತೆ ೧೮೦ ಮನೆಗಳ ಆವರಣದಲ್ಲಿ ಗಿಡಗಳನ್ನು ನಾಟಿ ಮಾಡಲಾಯಿತು.ಕುಶಾಲನಗರ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕುಶಾಲನಗರ ಅರಣ್ಯ ವಲಯ ಮೂಲಕ ಮುಂದಿನ ಒಂದು ವಾರಗಳ ಅವಧಿಯಲ್ಲಿ ಸಂಘ-ಸAಸ್ಥೆಗಳ ಸಹಯೋಗದೊಂದಿಗೆ ಸಾರ್ವಜನಿಕ ಸ್ಥಳಗಳಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕುಶಾಲನಗರ ಅರಣ್ಯ ವಲಯಾಧಿಕಾರಿ ಕೆ.ವಿ ಶಿವರಾಮ್ ತಿಳಿಸಿದ್ದಾರೆ.

ಕುಶಾಲನಗರದ ಪ್ರವಾಸಿ ಮಂದಿರ ಆವರಣದಲ್ಲಿ ನಡೆದ ‘ವೃಕ್ಷ ಸಂವರ್ಧನ ಹಸಿರು ಅಭಿಯಾನ- ೨೨'ಕ್ಕೆ ಚಾಲನೆ ನೀಡಿ ಮಾತನಾಡಿದರು.

ಅರಣ್ಯ ಇಲಾಖೆ ನೇತೃತ್ವದಲ್ಲಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ರಾಷ್ಟಿçÃಯ ಹಸಿರು ಪಡೆಯ ಇಕೋಕ್ಲಬ್ ಕುಶಾಲನಗರ ತಾಲೂಕು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಹಯೋಗದೊಂದಿಗೆ ನಡೆದ ಗಿಡ ನೆಡುವ ಕಾರ್ಯಕ್ರಮ ಶಾಲಾ ಮಕ್ಕಳ ಉಪಸ್ಥಿತಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ ಕೆ.ವಿ ಶಿವರಾಮ್ ಕಾವೇರಿ ನದಿ ತಟಗಳಲ್ಲಿ ಗಿಡ ನೆಡುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯಿಂದ ನದಿ ತಟಗಳಲ್ಲಿ ಸರ್ವೆ ಕಾರ್ಯ ನಡೆದಿದೆ ಎಂದು ಅವರು ಹೇಳಿದರು .

ಅರಣ್ಯ ಇಲಾಖೆಯ ಮೂಲಕ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ, ಕಾವೇರಿ ರಿವರ್ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಮತ್ತು ಸ್ಥಳೀಯ ಶಾಲಾ-ಕಾಲೇಜುಗಳ ಮಕ್ಕಳ ಮೂಲಕ ಆನೆ ಕಾಡು ಮತ್ತು ಅತ್ತೂರು ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಸೀಡ್ ಬಾಲ್ ಬಳಸಿ ಗಿಡ ಬೆಳೆಸುವ ಯೋಜನೆ ಈ ತಿಂಗಳ ೭ ರಿಂದ ಪ್ರಾರಂಭವಾಗಲಿದೆ ಎಂದು ಅವರು ಮಾಹಿತಿ ನೀಡಿದರು. ಪ್ರತಿಯೊಬ್ಬರು ಅರಣ್ಯ ಉಳಿಸುವ ಗಿಡ ನೆಟ್ಟು ಬೆಳೆಸುವ ಪ್ರವೃತ್ತಿ ಹೊಂದಬೇಕು ಎಂದು ಕರೆ ನೀಡಿದರು. ರೈತರು ತಮ್ಮ ಜಮೀನಿನಲ್ಲಿ ಹಸಿರು ಬೆಳೆಸಲು ಅರಣ್ಯ ಇಲಾಖೆ ವತಿಯಿಂದ ರಿಯಾಯಿತಿ ದರದಲ್ಲಿ ಅರಣ್ಯ ಸಸಿಗಳನ್ನು ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ರಾಷ್ಟಿçÃಯ ಹಸಿರು ಪಡೆ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ. ಪ್ರೇಮ್‌ಕುಮಾರ್ ಮಾತನಾಡಿ, ಸುತ್ತಮುತ್ತಲಿನ ಪರಿಸರದಲ್ಲಿ ಗಿಡ ನೆಟ್ಟು ಬೆಳೆಸಿ ಅದನ್ನು ಘೋಷಿಸಬೇಕು. ಮಾಲಿನ್ಯಕ್ಕೆ ಕಾರಣವಾದ ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸಬೇಕು ಎಂದು ಅವರು ಕರೆ ನೀಡಿದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಹಾಗೂ ಕಾವೇರಿ ನದಿ ಸ್ವಚ್ಛತಾ ಆಂದೋಲನದ ಸಂಚಾಲಕ ಎಂ.ಎನ್. ಚಂದ್ರಮೋಹನ್ ಮಾತನಾಡಿ, ಪ್ರತಿಯೊಬ್ಬರೂ ಗಿಡ ನೆಡುವ ಮೂಲಕ ಅದನ್ನು ಬೆಳೆಸುವ ಕೆಲಸ ಮಾಡಬೇಕಾಗಿದೆ. ಪಟ್ಟಣದ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಅರಣ್ಯ ಇಲಾಖೆ ಸಹಯೋಗದೊಂದಿಗೆ ಸಾವಿರಾರು ಗಿಡಗಳನ್ನು ನೆಟ್ಟು ಬೆಳೆಸುವ ಕೆಲಸ ನಿರಂತರವಾಗಿ ನಡೆದಿದೆ. ಪ್ರತಿಯೊಬ್ಬರಲ್ಲಿ ಪರಿಸರ ಪ್ರಜ್ಞೆ ಮೂಡಬೇಕು ಎಂದರು. ತಾಲೂಕು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಅಧ್ಯಕ್ಷ ಎಂ.ಕೆ. ದಿನೇಶ್, ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಉಪಾಧ್ಯಕ್ಷ ಎಂ.ಈ. ಮೊಯಿದೀನ್ ಕಾರ್ಯಕ್ರಮಕ್ಕೆ ಶುಭಕೋರಿದರು.

ಈ ಸಂದರ್ಭ ರಾಜ್ಯ ವಿಜ್ಞಾನ ಪರಿಷತ್ತಿನ ಕೋಶಾಧಿಕಾರಿ ಹರ್ಷ, ಕರ್ನಾಟಕ ಕಾವಲುಪಡೆ ಜಿಲ್ಲಾ ಅಧ್ಯಕ್ಷ ಎಂ. ಕೃಷ್ಣ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಸೈಜನ್ ಪೀಟರ್, ಉಪ ವಲಯ ಅರಣ್ಯಾಧಿಕಾರಿಗಳಾದ ಅನಿಲ್ ಡಿಸೋಜ, ಶ್ರವಣ್ ವಿಭೂತಿ, ಚೇತನ್ ಮತ್ತು ಸಿಬಂದಿಗಳು ಹಾಗೂ ಪ್ರೌಢ ಶಾಲೆ ಮುಖ್ಯ ಶಿಕ್ಷಕರಾದ ವೈಎಸ್ ಪರಮೇಶ್ವರಪ್ಪ, ಜೆಫ್ರಿ ಡಿಸೋಜ, ಸ್ಥಳೀಯ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ, ಫಾತಿಮಾ ಪ್ರೌಢಶಾಲೆಯ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಇಕೋ ಕ್ಲಬ್‌ನ ಹಸಿರು ಪಡೆಯ ಶಿಕ್ಷಕರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ವೀರಾಜಪೇಟೆ: ವೀರಾಜಪೇಟೆಯ ಕಾವೇರಿ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಪರಿಸರ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿದ ವಿದ್ಯಾರ್ಥಿನಿಯರಾದ ಒಂಭತ್ತನೇ ತರಗತಿಯ ಮೋಕ್ಷ ಎ.ಕೆ. ಹಾಗೂ ಎಂಟನೇ ತರಗತಿಯ ಕ್ಷಮಾ ಕಾವೇರಮ್ಮ ಪಿ.ಪಿ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಹಾಗೂ ನಮ್ಮ ಸುತ್ತಮುತ್ತಲಿನ ಪರಿಸರ ಆರೋಗ್ಯವಾಗಿದ್ದರೆ ನಾವೂ ಆರೋಗ್ಯವಾಗಿರುತ್ತೇವೆ. ಪರಿಸರಕ್ಕೆ ಹಾನಿಯಾದರೆ ನಮಗೆ ಹಾನಿಯಾದಂತೆ. ಪ್ರಕೃತಿ ನಮ್ಮ ಬದುಕಿನ ಭಾಗವಲ್ಲ ನಾವು ಪ್ರಕೃತಿಯ ಒಂದು ಭಾಗವಷ್ಟೆ ಆದ್ದರಿಂದ ಪರಿಸರ ಉಳಿಸಿ, ಪರಿಸರ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಪರಿಸರದ ಕುರಿತು ವೃಂದ ಗಾಯನದ ಜೊತೆಗೆ ಎಂಟನೇ ತರಗತಿಯ ಮಾಸ್ಟರ್ ಸೋಮಣ್ಣ ಎಸ್.ಎಂ. ಪರಿಸರ ಗೀತೆಯನ್ನು ಹಾಡಿದನು. ಮಕ್ಕಳಿಂದ ಸಸಿಯನ್ನು ನಡೆಸಿ ನೀರೆರೆಸಿ ಅದರ ಬೆಳವಣಿಗೆ ಹಾಗೂ ಉಪಯೋಗಗಳ ಬಗ್ಗೆ ಶಿಕ್ಷಕರು ತಿಳುವಳಿಕೆ ನೀಡಿದರು.

ಭಿತ್ತಿಚಿತ್ರಗಳನ್ನು ಬರೆದು ವಿದ್ಯಾರ್ಥಿಗಳು ಪರಿಸರದ ಉಳಿವಿಗಾಗಿ ಪಣತೊಟ್ಟು ಪರಿಸರವನ್ನು ಸಂರಕ್ಷಿಸುವ ಮಹತ್ವವನ್ನು ಅರಿತರು. ಒಂಭತ್ತನೇ ತರಗತಿಯ ಅನುಷ್ಕ ಸಿ.ಪಿ. ಕಾರ್ಯಕ್ರಮವನ್ನು ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಕಾರ್ಯದರ್ಶಿ ವಿನೋದ್ ಪಿ.ಎನ್., ಮುಖ್ಯಶಿಕ್ಷಕಿ ಪ್ರಮೀಳಾ. ಎಂ.ಬಿ., ಸಹಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.ಕೊಯನಾಡು: ಸರ್ಕಾರಿ ಪ್ರಾಥಮಿಕ ಶಾಲೆ ಕೊಯನಾಡುವಿನಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮ ಪಂಚಾಯಿತಿ ಸದಸ್ಯೆ ರಮಾದೇವಿ ಬಾಲಚಂದ್ರ ಕಳಗಿ, ನವೀನ್ ಕೊಯನಾಡು, ಶಾಲಾ ಮುಖ್ಯೋಪಾಧ್ಯಾಯಿನಿ ಸುಲೋಚನಾ, ಸಂಪಾಜೆ ಉಪ ವಲಯ ಅರಣ್ಯಾಧಿಕಾರಿ ವಿಜೇಂದ್ರ ಕುಮಾರ್ ಎಂ., ಅರಣ್ಯ ರಕ್ಷಕರಾದ ಜನಾರ್ದನ, ಪುನೀತ್, ನಾಗರಾಜ್ ಹಾಗೂ ಶಾಲಾ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು, ಗ್ರಾಮಸ್ಥರು ಇದ್ದರು.ಕೊಯನಾಡು: ಸರ್ಕಾರಿ ಪ್ರಾಥಮಿಕ ಶಾಲೆ ಕೊಯನಾಡುವಿನಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮ ಪಂಚಾಯಿತಿ ಸದಸ್ಯೆ ರಮಾದೇವಿ ಬಾಲಚಂದ್ರ ಕಳಗಿ, ನವೀನ್ ಕೊಯನಾಡು, ಶಾಲಾ ಮುಖ್ಯೋಪಾಧ್ಯಾಯಿನಿ ಸುಲೋಚನಾ, ಸಂಪಾಜೆ ಉಪ ವಲಯ ಅರಣ್ಯಾಧಿಕಾರಿ ವಿಜೇಂದ್ರ ಕುಮಾರ್ ಎಂ., ಅರಣ್ಯ ರಕ್ಷಕರಾದ ಜನಾರ್ದನ, ಪುನೀತ್, ನಾಗರಾಜ್ ಹಾಗೂ ಶಾಲಾ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು, ಗ್ರಾಮಸ್ಥರು ಇದ್ದರು.ಕೊಯನಾಡು: ಸರ್ಕಾರಿ ಪ್ರಾಥಮಿಕ ಶಾಲೆ ಕೊಯನಾಡುವಿನಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮ ಪಂಚಾಯಿತಿ ಸದಸ್ಯೆ ರಮಾದೇವಿ ಬಾಲಚಂದ್ರ ಕಳಗಿ, ನವೀನ್ ಕೊಯನಾಡು, ಶಾಲಾ ಮುಖ್ಯೋಪಾಧ್ಯಾಯಿನಿ ಸುಲೋಚನಾ, ಸಂಪಾಜೆ ಉಪ ವಲಯ ಅರಣ್ಯಾಧಿಕಾರಿ ವಿಜೇಂದ್ರ ಕುಮಾರ್ ಎಂ., ಅರಣ್ಯ ರಕ್ಷಕರಾದ ಜನಾರ್ದನ, ಪುನೀತ್, ನಾಗರಾಜ್ ಹಾಗೂ ಶಾಲಾ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರು, ಗ್ರಾಮಸ್ಥರು ಇದ್ದರು.ಸಂಪಾಜೆ ಸರ್ಕಾರಿ ಪ್ರಾಥಮಿಕ ಶಾಲೆ

ಸಂಪಾಜೆ: ಸರ್ಕಾರಿ ಪ್ರಾಥಮಿಕ ಶಾಲೆ ಸಂಪಾಜೆಯಲ್ಲಿ ಗಿಡನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪಾಜೆ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀಧರ್ ಪಡ್ಪು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳಾದ ಹರೀಶ್ ಪಟ್ರುಕೋಡಿ, ಅರಣ್ಯ ಇಲಾಖೆ ಸಿಬ್ಬಂದಿಗಳಾದ ಶಿವಪ್ರಸಾದ್ ಕಲಾಯಿ ಹಾಜರಿದ್ದರು.ಕಡಂಗ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬೆಳ್ಳುಮಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕುಂಜಿಲಗೇರಿ ಬೂತ್ ಸಮಿತಿಯ ವತಿಯಿಂದ ಗಿಡ ನೆಡಲಾಯಿತು.

ಈ ಸಂದರ್ಭ ಕಾಕೋಟುಪರಂಬು ಪಂಚಾಯಿತಿ ಅಧ್ಯಕ್ಷ ಮೇವಡ ಗಿರೀಶ್ ಬೋಪಣ್ಣ, ಜಿಲ್ಲಾ ಸಮಿತಿಯ ಸದಸ್ಯ ಪೂವಯ್ಯ, ಶಾಲೆಯ ಮುಖ್ಯ ಶಿಕ್ಷಕಿ ರೋಹಿಣಿ ಪಿ.ಎಸ್., ಶಕ್ತಿ ಕೇಂದ್ರದ ಅಧ್ಯಕ್ಷ ಬಿನ್ನು ಮುದ್ದಪ್ಪ ಹಾಗೂ ಕುಂಜಿಲಗೇರಿ ಬೂತ್ ಸಮಿತಿ ಅಧ್ಯಕ್ಷ ಪೊನ್ನಣ್ಣ, ಕಾರ್ಯದರ್ಶಿ ಗಿರೀಶ್ ಹಾಜರಿದ್ದರು.ಸಿದ್ದಾಪುರ: ನೆಲ್ಲಿಹುದಿಕೇರಿಯ ಬಿಜೆಪಿ ಶಕ್ತಿ ಕೇಂದ್ರದಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಪರಿಸರ ದಿನಾಚರಣೆ ಅಂಗವಾಗಿ ನೆಲ್ಲಿಹುದಿಕೇರಿಯ ಕಾವೇರಿ ನದಿಯ ಸೇತುವೆಯ ಬಳಿ ಹಾಗೂ ಸಿದ್ದಾಪುರ ಪೊಲೀಸ್ ಠಾಣೆಯ ಆವರಣದಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು. ನಂತರ ಗಿಡ ನೆಡುವ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭ ನೆಲ್ಲಿಹುದಿಕೇರಿಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಕೆ. ಬೆಳ್ಳಿಯಪ್ಪ, ಗ್ರಾ.ಪಂ. ಉಪಾಧ್ಯಕ್ಷೆ ದಮಯಂತಿ, ಸದಸ್ಯೆ ಸುಜಾತ, ಯುವ ಮೋರ್ಚಾದ ಅಧ್ಯಕ್ಷ ಸಚಿನ್, ಪ್ರಮೋದ್, ಪದ್ಮನಾಭ, ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಟಿ.ಸಿ. ಅಶೋಕ್ ಇನ್ನಿತರರು ಹಾಜರಿದ್ದರು.ವೀರಾಜಪೇಟೆ: ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ ಹಾಗೂ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಚೆಟ್ಟೀರ ಮಾದಪ್ಪ ಮಾತನಾಡಿ, ನೆಲ, ಜಲ, ವಾಯು ಮಾಲಿನ್ಯಗೊಳ್ಳದಂತೆ ಎಚ್ಚರಿಕೆ ವಹಿಸಬೇಕಾಗಿದೆ. ಮುಂದಿನ ಪೀಳಿಗೆಗೆ ಪ್ರಕೃತಿಯನ್ನು ಸಮೃದ್ಧಿಗೊಳಿಸಿ ಉಳಿಸಿ ಬೆಳೆಸಬೇಕಾಗಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಪಟ್ಟಡ ಪೂವಣ್ಣ ಮಾತನಾಡಿ, ಪರಿಸರವನ್ನು ಮುಂದಿನ ತಲೆಮಾರಿಗೆ ಕಾಪಾಡಿಕೊಳ್ಳುವ ಅಗತ್ಯತೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯಿತ್ತರು.

ಉಪನ್ಯಾಸಕಿ ಕಲ್ಪನಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಹರೀಶ್ ಕಿಗ್ಗಾಲು ಸ್ವಾಗತಿಸಿ, ನಿರೂಪಿಸಿದರೆ, ಉಪನ್ಯಾಸಕಿ ವಿಲ್ಮ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಕಾಲೇಜಿನ ಆವರಣದಲ್ಲಿ ಮಾವು, ಹಲಸು, ಸೀಬೆ ಸೇರಿದಂತೆ ಇನ್ನಿತರ ಗಿಡಗಳನ್ನು ನೆಡಲಾಯಿತು.