ಮಡಿಕೇರಿ, ಜೂ. ೮ : ಜಿಲ್ಲೆಯಲ್ಲಿ ಆಮ್ ಆದ್ಮಿ ಪಾರ್ಟಿಯನ್ನು ಬಲಿಷ್ಠಗೊಳಿಸಲು ಮತ್ತು ಚಟುವಟಿಕೆಗಳನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ತಾ.೧೧ ರಂದು ವೀರಾಜಪೇಟೆಯಲ್ಲಿ ಜಿಲ್ಲಾ ಮಟ್ಟದ ಸಭೆ ನಡೆಯಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಎಂ.ಕೆ.ಅಪ್ಪಯ್ಯ ತಿಳಿಸಿದ್ದಾರೆ.

ಪಟ್ಟಣ ಪಂಚಾಯ್ತಿ ಸಭಾ ಭವನದಲ್ಲಿ ಬೆಳಗ್ಗೆ ೧೦.೩೦ ಗಂಟೆಗೆ ನಡೆಯುವ ಸಭೆಯಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಗ್ರಾಮ ಸಂಪರ್ಕ ಅಭಿಯಾನ ಆರಂಭಿಸುವ ಕುರಿತು ಚರ್ಚೆ ನಡೆಯಲಿದೆ. ಪಕ್ಷದ ರಾಜ್ಯ ಮುಖಂಡರು ಪಾಲ್ಗೊಂಡು ಮಾರ್ಗದರ್ಶನ ನೀಡಲಿದ್ದು, ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗೆ ೯೮೮೦೬ ೫೪೧೭೯, ೯೮೮೦೦ ೭೩೪೪೦ ಈ ಸಂಖ್ಯೆಗಳನ್ನು ಸಂಪರ್ಕಿಸಬಹುದೆAದು ತಿಳಿಸಿದ್ದಾರೆ.