ಸೋಮವಾರಪೇಟೆ,ಜೂ.೮ : ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆಸಲ್ಪಡುತ್ತಿರುವ ಮೆಟ್ರಿಕ್ ಪೂರ್ವ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ೨೦೨೨-೨೩ನೇ ಸಾಲಿಗೆ ಆರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

೫ ರಿಂದ ೧೦ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಪ್ರವರ್ಗ ೧, ೨ಅ,೩ಅ,೩ಬಿ, ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪ್ರವರ್ಗ ೧, ೨ಅ, ೩ಅ, ೩ಬಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ರೂ. ೪೪,೫೦೦ ಆಗಿರುತ್ತದೆ. ಪ್ರವರ್ಗ ೧, ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ವಿದ್ಯಾರ್ಥಿಗಳಿಗೆ ವಾರ್ಷಿಕ ಆದಾಯ ರೂ. ೧ ಲಕ್ಷ ಆಗಿರುತ್ತದೆ.

ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ದೃಢೀಕರಣ ಪತ್ರದ ನಕಲು, ಹಿಂದಿನ ಸಾಲಿನಲ್ಲಿ ಉತ್ತೀರ್ಣರಾದ ಬಗ್ಗೆ ಅಂಕಪಟ್ಟಿ, ವಾಸಸ್ಥಳ ದೃಢೀಕರಣ ಪತ್ರ, ಇತ್ತೀಚಿನ ನಾಲ್ಕು ಪಾಸ್‌ಪೋರ್ಟ್ ಅಳತೆಯ ಭಾವ ಚಿತ್ರದೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸತಕ್ಕದ್ದು. ಹೊಸ ವಿದ್ಯಾರ್ಥಿಗಳಿಗೆ ತಾ. ೧೫ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಅರ್ಜಿ ಫಾರಂಗಳನ್ನು ಸಂಬAಧಿಸಿದ ವಿದ್ಯಾರ್ಥಿ ನಿಲಯದಲ್ಲಿ ವಿತರಿಸಲಾಗುತ್ತದೆ.

ವಸತಿ ನಿಲಯದಲ್ಲಿ ಊಟ ಮತ್ತು ವಸತಿ, ಪುಸ್ತಕ ಸೇರಿದಂತೆ ಇನ್ನಿತ್ತರ ಸೌಲಭ್ಯಗಳು ಉಚಿತವಾಗಿ ನೀಡಲಾಗುವುದು ಎಂದು ಇಲಾಖೆಯ ಅಧಿಕಾರಿ ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ೦೮೨೭೬-೨೮೪೮೨೦ ಸಂಪರ್ಕಿಸಲು ಕೋರಿದ್ದಾರೆ.