ಮಡಿಕೇರಿ, ಜೂ. ೮: ವಿವಿಧ ಬ್ಯಾಂಕುಗಳು ಗ್ರಾಹಕರಿಗೆ ಸ್ಪಂದಿಸಿ ಆದ್ಯತೆ ಮೇಲೆ ಸಾಲ ಸೌಲಭ್ಯ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಸಲಹೆ ಮಾಡಿದ್ದಾರೆ. ಆಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ನಗರದ ಕೆಳಗಿನ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಸಾಲ ಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ಹಿಂದೆ ಬ್ಯಾಂಕುಗಳಲ್ಲಿ ಬ್ಯಾಂಕ್ ಖಾತೆ ತೆರೆಯುವುದು ಕಷ್ಟವಾಗಿತ್ತು, ಜನಧನ್ ಯೋಜನೆ ಜಾರಿಗೆ ಬಂದ ನಂತರ ಪ್ರತಿ ಕುಟುಂಬವೂ ಬ್ಯಾಂಕ್ ಖಾತೆ ಪಡೆಯುವ ಅವಕಾಶ ಒದಗಿ ಬಂದಿತ್ತು. ಹೀಗೆ ಸಾಕಷ್ಟು ಸುಧಾರಣೆಗಳು ಆಗುತ್ತಿವೆ. ಆ ನಿಟ್ಟಿನಲ್ಲಿ ಗ್ರಾಹಕರನ್ನು ಸತಾಯಿಸದೆ ಸಾಲ ಸೌಲಭ್ಯ ಒದಗಿಸಬೇಕು; ಸರ್ಕಾರ ಮುದ್ರಾ ಯೋಜನೆ, ಸ್ಟಾಂಡ್ ಆಪ್ ಇಂಡಿಯಾ ಸೇರಿದಂತೆ ಹಲವು ಯೋಜನೆ ಜಾರಿಗೊಳಿಸಿದೆ. ಸರ್ಕಾರದ ಸಾಲ ಸೌಲಭ್ಯವನ್ನು ಸ್ವ ಉದ್ಯೋಗ ಕೈಗೊಳ್ಳುವವರಿಗೆ ಒದಗಿಸಬೇಕು; ಬ್ಯಾಂಕುಗಳು ಗ್ರಾಹಕರ ಜೊತೆ ಉತ್ತಮ ಸಂಪರ್ಕ ಹೊಂದಬೇಕು ಎಂದು ಹೇಳಿದರು.
ಗ್ರಾಹಕರು ಬ್ಯಾಂಕುಗಳಲ್ಲಿ ಸಾಲ ಸೌಲಭ್ಯ ಪಡೆಯುವಲ್ಲಿ ಸಂಶಯ ಪರಿಹರಿಸಬೇಕು. ಇಂದಿಗೂ ಸಹ ಸ್ವ ಉದ್ಯೋಗ ಕೈಗೊಳ್ಳುವವರು ಬ್ಯಾಂಕ್ ಸಾಲ ಪಡೆಯಲು ಹಿಂಜರಿಯುತ್ತಾರೆ. ಇದನ್ನು ತಪ್ಪಿಸಬೇಕು. ಸಾಲ ಪಡೆಯುವವರು ಸಹ ಕಾಲ ಕಾಲಕ್ಕೆ ಮರುಪಾವತಿ ಮಾಡಬೇಕು ಎಂದು ಸಲಹೆ ಮಾಡಿದರು.
ಯೂನಿಯನ್ ಬ್ಯಾಂಕ್‌ನ ಪ್ರಾದೇಶಿಕ ವ್ಯವಸ್ಥಾಪಕ ಕೆ.ಎಸ್. ಅನಂತ ಮಾತನಾಡಿ; ಜಿಲ್ಲೆಯ ಮಾರ್ಗದರ್ಶಿ ಬ್ಯಾಂಕ್ ವತಿಯಿಂದ ವಿವಿಧ ಬ್ಯಾಂಕುಗಳ ಸಹಯೋಗದಲ್ಲಿ ಸಾಲ ಸಂಪರ್ಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಇದರ ಪ್ರಯೋಜನ ಪಡೆಯಬೇಕು ಎಂದರು.
ಪ್ರಧಾನಮಂತ್ರಿ ಮುದ್ರಾ ಯೋಜನೆ, ಸ್ಟಾಂಡ್ ಆಫ್ ಇಂಡಿಯಾ, ಪ್ರಧಾನಮಂತ್ರಿ ಸ್ವನಿಧಿ, ಕೃಷಿ, ಸಣ್ಣ ಕೈಗಾರಿಕೆ, ಶಿಕ್ಷಣ, ವಸತಿ, ಆತ್ಮನಿರ್ಭರ ಕಾರ್ಯಕ್ರಮಗಳು ಹೀಗೆ ಹಲವು ಯೋಜನೆಗಳಿಗೆ ಸಾಲ ಸೌಲಭ್ಯ ಪಡೆಯಲು ಮಾಹಿತಿ ನೀಡುವುದು, ಹಾಗೆಯೇ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿದವರಿಗೆ ಪ್ರಮಾಣಪತ್ರ ಒದಗಿಸುವುದು. ಪ್ರಧಾನಮಂತ್ರಿ ಜನ ಸುರಕ್ಷಾ ಯೋಜನೆ ಬಗ್ಗೆ ಜಾಗೃತಿ ಮೂಡಿಸುವುದು ಸಾಲ ಸಂಪರ್ಕ ಕಾರ್ಯಕ್ರಮದ ಉದ್ದೇಶವಾಗಿದೆ.
ಪ್ರಧಾನಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆಯಡಿ ವರ್ಷಕ್ಕೆ ೪೦೦ ರೂ. ಪಾವತಿಸಿ ನೋಂದಣಿಯಾದಲ್ಲಿ ೨ ಲಕ್ಷ ರೂ.ವರೆಗೆ ವಿಮೆ ಸೌಲಭ್ಯ ಪಡೆಯಬಹುದಾಗಿದೆ. ಹಾಗೆಯೇ ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ ವರ್ಷಕ್ಕೆ ೨೦ ರೂ. ಪಾವತಿಸಿದಲ್ಲಿ ಆಕಸ್ಮಿಕ ಅವಘಡಗಳು (ಅಪಘಾತ) ಸಂಭವಿಸಿದಲ್ಲಿ ೨ ಲಕ್ಷ ರೂ.ವರೆಗೆ ವಿಮೆ ದೊರೆಯಲಿದೆ ಎಂದು ಮಾಹಿತಿ ನೀಡಿದರು.
ಕಳೆದ ಏಳು ವರ್ಷದಲ್ಲಿ ಜೀವನ್ ಜ್ಯೋತಿ ವಿಮೆ ಯೋಜನೆಯಡಿ ರಾಷ್ಟçದಲ್ಲಿ ೬.೪೦ ಕೋಟಿ ಸದಸ್ಯರು, ಸುರಕ್ಷಾ ಭೀಮಾ ಯೋಜನೆಯಡಿ ೨೨ ಕೋಟಿ ಸದಸ್ಯರು ನೋಂದಣಿಯಾಗಿ, ಸುಮಾರು ೯,೭೩೭ ಕೋಟಿ ರೂ. ಸಂಗ್ರಹವಾಗಿತ್ತು. ಇದರಲ್ಲಿ ಸರ್ಕಾರ ೧೪,೧೪೪ ಕೋಟಿ ರೂ. ವಿಮೆಗೆ ಪಾವತಿಸಿದೆ. ಯಾವುದೇ ರಾಷ್ಟಿçÃಕೃತ ಬ್ಯಾಂಕುಗಳಲ್ಲಿ ಸದಸ್ಯತ್ವ ಪಡೆಯಬಹುದಾಗಿದ್ದು, ಸಾರ್ವಜನಿಕರು ಈ ಯೋಜನೆಗಳ ಪ್ರಯೋಜನ ಪಡೆಯುವಂತಾಗಬೇಕು. ಎಂದು ಅವರು ಹೇಳಿದರು.
ಜಿಲ್ಲಾ ಮಾರ್ಗದರ್ಶಿ (ಲೀಡ್) ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಆರ್. ಶಿವಕುಮಾರ್ ಮಾತನಾಡಿ, ಬ್ಯಾಂಕಿನ ಸಾಲ ಸೌಲಭ್ಯ ಪ್ರತಿಯೊಬ್ಬರಿಗೂ ತಲುಪಿಸಬೇಕು ಎಂಬ ಉದ್ದೇಶದಿಂದ ಸಾಲ ಸಂಪರ್ಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಬ್ಯಾಂಕ್ ಆಫ್ ಬರೋಡದ ವ್ಯವಸ್ಥಾಪಕ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಬ್ಯಾಂಕಿAಗ್ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತಿವೆ. ಇತ್ತೀಚೆಗೆ ಮನೆಯಲ್ಲಿಯೇ ಕುಳಿತು ಬ್ಯಾಂಕಿAಗ್ ಸೌಲಭ್ಯ ಪಡೆಯ ಬಹುದಾಗಿದೆ. ಆ ನಿಟ್ಟಿನಲ್ಲಿ ಡಿಜಿಟಲ್ ಬ್ಯಾಂಕಿAಗ್ ಹೆಚ್ಚಾಗುತ್ತಿದೆ. ಇದು ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದು ಹೇಳಿದರು.
ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ರಮೇಶ್ ಬಾಬು ಮಾತನಾಡಿ, ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಿದೆ. ಆ ನಿಟ್ಟಿನಲ್ಲಿ ಸಾಲ ಸೌಲಭ್ಯ ಪಡೆಯುವಂತಾಗಲು ಅವಕಾಶಗಳು ಇದ್ದು, ರೈತರ ಆರ್ಥಿಕ ಸಬಲತೆಗೆ ಹಲವಾರು ಕಾರ್ಯಕ್ರಮಗಳು ಇವೆ ಎಂದು ಹೇಳಿದರು.
ಎಸ್‌ಬಿಐನ ಪ್ರಾದೇಶಿಕ ವ್ಯವಸ್ಥಾಪಕ ಏಡುಕೊಂಡಲು ಮಾತನಾಡಿ, ಸಮಾಜದ ಎಲ್ಲಾ ಬಡವರಿಗೂ ಸಹ ಬ್ಯಾಂಕಿAಗ್ ಸೇವೆಗಳು ತಲುಪಬೇಕು. ಸ್ವ ಉದ್ಯೋಗ ಕೈಗೊಳ್ಳುವವರಿಗೆ ಸಾಲ ಸೌಲಭ್ಯ ತಲುಪಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.
ಕೆನರಾ ಬ್ಯಾಂಕಿನ ಪ್ರಾದೇಶಿಕ ವ್ಯವಸ್ಥಾಪಕ ಸುರೇಶ್, ವಿವಿಧ ಬ್ಯಾಂಕುಗಳ ವ್ಯವಸ್ಥಾಪಕರು ಇತರರು ಇದ್ದರು. ಯೂನಿಯನ್ ಬ್ಯಾಂಕ್‌ನ ವ್ಯವಸ್ಥಾಪಕ ಚಂದ್ರಶೇಖರ್ ನಿರೂಪಿಸಿದರು. ಕೆ. ಸ್ವಾತಿ ಪ್ರಾರ್ಥಿಸಿದರು, ಚೇತನ್ ವಂದಿಸಿದರು.